ವಿಜಯಪುರ | ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಸಾವು; ಆಡಳಿತ ಮಂಡಳಿ ಪರಾರಿ

Date:

ಖಾಸಗಿ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದ ಬಾಲಕನೊಬ್ಬ ಶಾಲಾ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ನಡೆದಿದೆ. ಶಾಲೆಯ ಆಡಳಿತ ಮಂಡಳಿಯವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇಂಡಿಯ ಆರ್‌.ಎಂ ಸಹಾ ಶಾಲೆಯ ವಿದ್ಯಾರ್ಥಿ ಶಿವರಾಜ್‌ ಮೃತ ದುರ್ದೈವಿ. ಶಾಲೆಯ ಮೊದಲ ಮಹಡಿಯಿಂದ ನೀರಿನ ಟ್ಯಾಂಕ್‌ ಮೇಲೆ ಶಿವರಾಜ್‌ ಬಿದ್ದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಆ ವೇಳೆಗೆ ಆತ ಮೃತಪಟ್ಟಿದ್ದನ್ನು ಎಂದು ಹೇಳಲಾಗಿದೆ.

ಬಾಲಕ ಸಾವನ್ನಪ್ಪಿದ್ದರೂ ಶಾಲೆಯ ಆಡಳಿತ ಮಂಡಳಿಯವರು ಆತನ ಪೋಷಕರಿಗೆ ಮಾಹಿತಿ ನೀಡಿಲ್ಲ. ಬಾಲಕ ಆಯತಪ್ಪಿ ಬಿದ್ದಿದ್ಧಾನೆ. ಆಸ್ಪತ್ರೆಗೆ ಬನ್ನಿ ಎಂದಷ್ಟೇ ಹೇಳಿದ್ದಾರೆ. ಪೋಷಕರು ಆಸ್ಪತ್ರೆಗೆ ಬಂದು ವಿಚಾರಿಸಿದಾಗ, ಬಾಲಕ ಆಸ್ಪತ್ರೆಗೆ ಬರುವ ಮುನ್ನವೇ ಸಾವನ್ನಪ್ಪಿದ್ದ ಎಂದು ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕನ ಪೋಷಕರು ಮತ್ತು ಸಂಬಂಧಿಗಳು ಶಾಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಪೋಷಕರು ಆಸ್ಪತ್ರೆಗೆ ಬರುವ ಮುನ್ನವೇ ಶಾಲೆಯ ಆಡಳಿತ ಮಂಡಳಿಯವರು ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.

ಶಾಲೆಗೆ ಇಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...