ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್ ಸಂಬಣ್ಣಿ ನೇಮಕಗೊಂಡಿದ್ದಾರೆ. ಆಯುರ್ವೇದ ವೈದ್ಯಕೀಯ ಪದವೀಧರರಾಗಿರುವ ಇವರು ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿ ಆಂದೋಲನ, ಹೋರಾಟದಲ್ಲಿ 1993-94ರಲ್ಲಿ ತೊಡಗಿಸಿಕೊಂಡಿದ್ದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಘಟಕದ ಸಹಕಾರ್ಯದರ್ಶಿಯಾಗಿದ್ದ ಇವರು ನಂತರ ಯುವ ಮುಖಂಡರಾಗಿದ್ದ ಸುನೀಲಗೌಡ ಬಿ ಪಾಟೀಲರ ಗೆಳೆಯರಾಗಿ 1999ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.
ಕಳೆದ 27 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿ ಸೇವೆ ಸಲ್ಲಿಸಿದ್ದ ಇವರು ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಕಾಂಗ್ರೆಸ್ ಸೇವಾದಳದಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಬುದ್ಧ, ಬಸವ, ಅಂಬೇಡ್ಕರ್ ಚಿಂತನೆಯ ಪುಸ್ತಕ ಮೇಳ ಆಯೋಜನೆಗೆ ನಿರ್ಧಾರ
ಸದ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿರುವ ಇವರನ್ನು ಪಕ್ಷದ ಸೇವೆಯನ್ನು ಗುರುತಿಸಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಳಿಸುವಂತೆ ಕಳೆದ ವಾರ ಬೆಂಗಳೂರಿನಲ್ಲಿ ಮುಖಂಡರಾದ ವಿಜಯಪುರ ವಿಧಾನಸಭೆ ಅಭ್ಯರ್ಥಿ ಅಬ್ದುಲಹಮೀದ ಮುಶ್ರಿಫ್, ಲೋಕಸಭಾ ಅಭ್ಯರ್ಥಿ ರಾಜು ಆಲಗೂರ, ಶಾಸಕ ವಿಠ್ಠಲ ಕಟಕದೊಂಡ ಮತ್ತು ವಿಧಾನಪರಿಷತ್ ಸದಸ್ಯ ಸುನಿಲಗೌಡ ಪಾಟೀಲ ಅವರು ಸಚಿವ ಎಂ ಬಿ ಪಾಟೀಲರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ವಿನಂತಿಸಿದ್ದರು.
ಡಾ.ಗಂಗಾಧರ ಸಂಬಣ್ಣಿ ಅವರ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.





