ಇಂಡಿ | ಗ್ರಾಮಗಳ ಅಭಿವೃದ್ಧಿಯಲ್ಲಿ ಜನಪ್ರತಿನಿಧಿಗಳ ಪಾತ್ರ ಮುಖ್ಯ: ರವೀಂದ್ರ ಬೆಳ್ಳಿ

Date:

ಗ್ರಾಮಗಳು ಅಭಿವೃದ್ಧಿ ಆಗಬೇಕಾದರೆ ಪಿಡಿಒ ಹಾಗೂ ಜನಪ್ರತಿನಿಧಿಗಳ ಕೆಲಸ ಪ್ರಮುಖ ಎಂದು ಅಪ್ನಾ ದೇಶ್-ಅಪ್ನಾ ಗ್ರಾಮ ಸಂಘಟನೆಯ ವಿಜಯಪುರ ಜಿಲ್ಲಾ ಅಧ್ಯಕ್ಷ ರವೀಂದ್ರ ಬೆಳ್ಳಿ ಹೇಳಿದರು.

ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆ ಡಿ ಗ್ರಾಮ ಪಂಚಾಯತಿಯಲ್ಲಿ ಅವ್ಯಹಾರ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅಪ್ನಾ ದೇಶ್-ಅಪ್ನಾ ಗ್ರಾಮ ಸಂಘಟನೆ ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಪಿಡಿಒಗಳು ಗ್ರಾಮ ಪಂಚಾಯತಿಗೆ ಸಂಬಂಧಪಟ್ಟ 2020-25ನೇ ಸಾಲಿನ ಆಯವ್ಯಯ ನೀಡಬೇಕು. ₹7 ಕೋಟಿಗೂ ಹೆಚ್ಚು ಮೊತ್ತದ ಅಕ್ರಮ ನಡೆದಿದೆ ಎಂಬ ಆರೋಪ ಇದೆ. ಈ ಕುರಿತು ಮಾಹಿತಿ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಮುಖಂಡ ಎಸ್ ಟಿ ಪಾಟೀಲ ಮಾತನಾಡಿ, ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕಾದರೆ ಗ್ರಾಮದ ಪ್ರತಿಯೊಬ್ಬರ ಸಮ್ಮುಖದಲ್ಲಿ ಗ್ರಾಮಸಭೆ ಮಾಡಿ ಗ್ರಾಮದ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಜಾತ್ಯತೀತವಾಗಿ ಹಾಗೂ ಪಾರದರ್ಶಕವಾಗಿ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ವಿಜಯಪುರ | ಜ.25ರಂದು ರಾಷ್ಟೀಯ ಮತದಾರರ ದಿನಾಚರಣೆ

ತಾಲೂಕು ಪಂಚಾಯತಿ ಇಒ ಬಿ ಎಸ್ ಕಣ್ಣೂರ ಮಾತನಾಡಿ, ಪಿಡಿಒ ಸುರೇಶ ಲೋನಿ ಅವರನ್ನು ತರಾಟೆಗೆ ತೆಗೆದುಕೊಂಡರು. ಗ್ರಾಮಸ್ಥರ ಬೇಡಿಕೆ ನ್ಯಾಯ ಸಮ್ಮತವಾಗಿದೆ. ಅವರಿಗೆ ಪಾರದರ್ಶಕವಾಗಿ ಮೂರು ದಿನಗಳಲ್ಲಿ ಮಾಹಿತಿ ಕೊಡಬೇಕು ಹಾಗೂ ಮೂಲಸೌಕರ್ಯಗಳನ್ನು ಒದಗಿಸಬೇಕೆಂದು ಸೂಚಿಸಿದರು.

ಪ್ರತಿಭಟನೆಯಲ್ಲಿ ಶಿವಾನಂದ ಶಿವಾಚಾರ್ಯ, ಬಿ ಕೆ ಪಾಟೀಲ, ಸುನಿಲ ನಾರಾಯಣಕರ, ಸಿದ್ದರಾಮ ಹಳ್ಳೂರ, ಶರಭಯ್ಯ ಹಿರೇಮಠ, ರಾಯಪ್ಪ ಗಡೆಕಾರ, ಕಣ್ಣಪ್ಪ ತೇಲಿ, ಶಿವಣ್ಣ ಗುಂಜಟ್ಟಿ, ಸಾಹೇಬಗೌಡ ಪಾಟೀಲ ಹಾಗೂ ಮಲ್ಲಯ್ಯ ಒಡೆಯರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂದಗಿ | ಇಂದಿನ ಯುವಕರಿಗೆ ಕೌಶಲ್ಯ ಅತ್ಯಗತ್ಯ: ಫಾ.ಸಂತೋಷ್

ಇಂದಿನ ಯುವಕ ಯುವತಿಯರು ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಅದು ಅತ್ಯಗತ್ಯವೂ ಆಗಿದೆ ಎಂದು...

ವಿಜಯಪುರ | ಮಹಿಳಾ ಕೇಂದ್ರೀಕೃತ ಪುಸ್ತಕ ಪ್ರದರ್ಶನ ಮಹಿಳೆಯರ ಸಾಧನೆಗಳನ್ನು ತೋರಿಸುತ್ತದೆ: ಪ್ರೊ. ವಿಜಯ ಕೋರಿಶೆಟ್ಟರ್

ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು...

ವಿಜಯಪುರ | ಪ್ರಗತಿ ಹಂತದ ಮನರೇಗಾ ಕಾಮಗಾರಿಗಳು ಕೂಡಲೇ ಪೂರ್ಣಗೊಳ್ಳಬೇಕು: ಪ್ರಕಾಶ ವಡ್ಡರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ)ಯಡಿ ಪ್ರಗತಿ ಹಂತದಲ್ಲಿರುವ ಎಲ್ಲ...

ವಿಜಯಪುರ | ಬಸ್ ನಿಲ್ದಾಣಗಳ ಎಲ್‌ಇಡಿ ಪರದೆ ಮೇಲೆ ಬಜೆಟ್ ನೇರ ಪ್ರಸಾರ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ರಸ್ತೆ ಸಾರಿಗೆ...