ಸಂಸತ್‌ ಮೇಲಿನ ದಾಳಿ ಆಘಾತಕಾರಿ; ತನಿಖೆಗೆ ಎನ್‌ಎಸ್‌ಯುಐ ಆಗ್ರಹ

Date:

ಬುಧವಾರ ನಡೆದ ಸಂಸತ್‌ ಭವನದ ಮೇಲಿನ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಘಟನೆಯು ಖಂಡನೀಯ ಮಾತ್ರವಲ್ಲ, ಅತ್ಯಂತ ಆಘಾತಕಾರಿಯಾದುದು ಎಂದು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಹೇಳಿದೆ.

ಸಂಸತ್ ಭವನಕ್ಕೆ ಇಬ್ಬರು ನುಗ್ಗಿದ್ದ ಘಟನೆಯನ್ನು ಖಂಡಿಸಿ ವಿಜಯಪುರದ ಎನ್‌ಎಸ್‌ಯುಐ ಮುಖಂಡ ಅಮೀತ ಚವ್ಹಾಣ್‌  ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.

“ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಅದೇ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿವೆ ಎಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿತ್ತು ಎಂಬುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕು. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದ್ದಾರೆ.

“ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...