ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಬೆಳೆಯಲಿ. ಎಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ರಂಜಾನ್ ಪ್ರಾರ್ಥನೆ ಸಲ್ಲಿಸಿದರು.
ರಂಜಾನ್ ಅಂಗವಾಗಿ ನಗರದ ದಖನಿ ಶಾಹಿ ಈದ್ಗಾದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿ ಶುಭಾಷಯಗಳನ್ನು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಮುಧೋಳ | ರಂಜಾನ್ ಹಬ್ಬ ಸಾಮರಸ್ಯಕ್ಕೆ ಮಾದರಿಯಾಗಿದೆ: ಸಚಿವ ಆರ್ ಬಿ ತಿಮ್ಮಾಪುರ
“ಸಹೋದರತೆ, ಸಮಾನತೆ ಹಾಗೂ ಸರ್ವರ ಹಿತ ಬಯಸುವ ರಂಜಾನ್ ಹಬ್ಬ ಎಲ್ಲರಿಗೂ ಒಳಿತನ್ನುಂಟುಮಾಡಲಿ” ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಾನಾ ಮುಖಂಡರು ಇದ್ದರು.





