ವಿಜಯಪುರ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಕ್ರೀಡಾಪಟುಗಳ ಸನ್ಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನಲ್ಲಿ ವೈಯಕ್ತಿಕ ಹಾಗೂ ಗುಂಪು ಕ್ರೀಡಾಕೂಟಗಳಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡದ ಮುಖ್ಯಸ್ಥರು ಅರ್ಜಿ ಸಲ್ಲಿಸಬಹುದಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಸಹಾಯಕ ನಿರ್ದೇಶಕರಿಗೆ ಜನವರಿ 22ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ಸುದ್ದಿ ಓದಿದ್ದೀರಾ? ಗದಗ | ಲಕ್ಕುಂಡಿ ಉತ್ಖನನ ಬೆನ್ನಲೇ ಮತ್ತೆ 8 ತಾಣಗಳು ಸಂರಕ್ಷಿತ ಸ್ಮಾರಕಗಳ ಘೋಷಣೆ
ಹೆಚ್ಚಿನ ಮಾಹಿತಿಗಾಗಿ ಕ್ರೀಡಾ ಇಲಾಖೆಯ ದೂರವಾಣಿ ಸಂಖ್ಯೆ 08352-251085 ಹಾಗೂ ಮೊ. 9535501872 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.





