ವಿಜಯಪುರ | ಬಬಲಾದ ಗ್ರಾಮದಲ್ಲಿ ಸಾವಿತ್ರಿ ಬಾಯಿ ಫುಲೆ ಜನ್ಮ ದಿನಾಚರಣೆ

Date:

ತಳಸಮುದಾಯದ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದವರು ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ. ಸಮಾಜದಿಂದ ಧೂಷಣೆ, ಬೈಗುಳ, ಮೈಮೇಲೆ ಸಗಣಿ ಎರಚಿದರೂ ಜಗಗ್ಗದೆ ಮುನ್ನಡೆದ ಧೀರ ಹೋರಾಟಗರ್ತಿ ಫುಲೆ ಅವರು ಎಂದು ಶಿಕ್ಷಕಿ ಲಕ್ಷ್ಮೀ ದ್ರಾವಿಡ್ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದ ಗ್ರಾಮದ ಸಾವಿತ್ರಿಬಾಯಿ ಫುಲೆ ಕಲಿಕಾ ಕೇಂದ್ರದಲ್ಲಿ ನಡೆದ ಸಾವಿತ್ರಿ ಬಾಯಿ ಫುಲೆ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸಾವಿತ್ರಿ ಬಾಯಿ ಫುಲೆ ಅವರು ಹೆಣ್ಣು ಮಕ್ಕಳ ಮೇಲಿನ ಶೋಷಣೆ, ದಬ್ಬಾಳಿಕೆ, ಅನ್ಯಾಯ ಹಾಗೂ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದರು.
ಬಾಲವಿಧವೆಯರ ಸಂಕಷ್ಟ ಅರಿತು, ಬಾಲ್ಯ ವಿವಾಹದ ವಿರುದ್ಧವೂ ದನಿ ಎತ್ತಿದರು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಬಲಾದ ಗ್ರಾಮ ಪಂಚಾಯತಿ ಸದಸ್ಯೆ ಶಾಂತಾಬಾಯಿ ನಾಟಿಕಾರ, ರಮಾಬಾಯಿ, ಬಾಯಿಜಾಬಾಯಿ ಹರಿಜನ, ಸುರೇಖಾ ಬನಸೋಡೆ, ಯಲಬಾಯಿ ಬನಸೋಡೆ, ಯಲಬಾಯಿ ಹರಿಜನ, ಮಹಾದೇವಿ ಶಿವಶರಣ, ರೇಣುಕಾ ದಶವಂತ ಹಾಗೂ ಭೌರಮ್ಮ ದಯವ್ವ ಸಿಂಗೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...