ತಾಳಿಕೋಟೆ | ಪ್ರಜಾಸೌಧ ಸ್ಥಳ ವಿವಾದ; 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

Date:

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಮೈಲೇಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹವು ಶನಿವಾರ 18ನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಸ್ಥಳಕ್ಕೆ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ಧರಣಿ ನಿರತರು ತಮ್ಮ ಪಟ್ಟು ಸಡಿಲಿಸದೆ ಹೋರಾಟ ಮುಂದುವರೆಸಿದ್ದಾರೆ.

ಧರಣಿನಿರತರು, ಮಲ್ಲೇಶ್ವರ ಬಳಿಯ ಪ್ರಜಾಸೌಧ ನಿರ್ಮಾಣ ಸಾರ್ವಜನಿಕ ಹಿತ ದೃಷ್ಟಿಗೆ ಪ್ರತಿಕೂಲವಾಗಿದೆ. ಆದ್ದರಿಂದ ಅದನ್ನು ಪಟ್ಟಣದಲ್ಲಿ ಸರ್ಕಾರಿ ಸ್ಥಳದಲ್ಲಿಯೇ ನಿರ್ಮಿಸಬೇಕು ಎಂಬ ನಿಲುವಿನಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಫಲ ಪ್ರಯತ್ನದ ನಂತರ ಉಪ ವಿಭಾಗಾಧಿಕಾರಿಯವರು ಈ ವಿಷಯವನ್ನು ಜಿಲ್ಲಾಧಿಕಾರಿ ಗಮನಕ್ಕೆ ತರುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಧರಣಿ ನಿರತರು ಸ್ಥಳ ಬದಲಾವಣೆಯ ಸಮಸ್ಯೆ ಶೀಘ್ರವಾಗಿ ಪರಿಹಾರವಾಗದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವುದಾಗಿ ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಏ.10ರಿಂದ ರಾಜ್ಯಮಟ್ಟದ ಪುಸ್ತಕ ಮೇಳ

ಈ ಸಂದರ್ಭದಲ್ಲಿ ಹೋರಾಟ ಸಮಿತಿ ಅಧ್ಯಕ್ಷ ದಶರಥ ಸಿಂಗ್ ಮನಗೂಳಿ, ಪದಾಧಿಕಾರಿಗಳಾದ ಎಸ್ ಬಿ ಕಟ್ಟಿಮನಿ, ಮುತ್ತಪ್ಪ ಚಮಲಾಪುರ,ಮಾಸು ಕೆಂಭಾವಿ, ಕಾಶಿನಾಥ ಮುರಾಳ, ವಿಜಯ ಸಿಂಗ ಹಜೇರಿ ಪರಶುರಾಮ ತಂಗಡಗಿ, ಗಂಗಾಧರ ಕಸ್ತೂರಿ, ಮೈಬೂಬ ಚೋರಗಸ್ತಿ, ನಾಗೇಶ ಕಟ್ಟಿಮನಿ,ದೇವೇಂದ್ರ ಹಾದಿಮನಿ,ಪ್ರಕಾಶ ಹಜಾರೆ, ಸುರೇಶ ಹಜಾರೆ, ಮಹೇಶ ಚಲವಾದಿ, ರವಿ ಕಟ್ಟಿಮನಿ, ಅಮಿತಾ ಸಿಂಗ ಮನಗೂಳಿ, ರಥಾನದಾದ,ತಸಿಲ್ದಾರರಾದ ವಿನಾಯ ಹೂಗಾರ ಪಿಎಸ್ಐ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....