ವಿಜಯಪುರ | ಎಐಡಿಎಸ್‌ಒ 70ನೇ ಸಂಸ್ಥಾಪನಾ ದಿನಾಚರಣೆ

Date:

ಕಳೆದ 23 ವರ್ಷಗಳಿಂದ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಹಲವು ರೀತಿಯ ಉನ್ನತ ಶಿಕ್ಷಣದ ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡುವಂತೆ ಆಗ್ರಹಿಸಿ ಎಐಡಿಎಸ್‌ಒ ಹೋರಾಟ ಮಾಡುತ್ತಾ ಬಂದಿದೆ ಎಂದು ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಹೇಳಿದರು.

ವಿಜಯಪುರ ನಗರದ ಜಾಲವಾದ ಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಎಐಡಿಎಸ್‌ಒ 70ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

“ಬಿಜಾಪುರ ಜಿಲ್ಲೆಯಲ್ಲಿ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಎಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪನೆ ಮಾಡುವಂತೆ ಒತ್ತಾಯಿಸಿ, ಮೆಡಿಕಲ್ ವಿದ್ಯಾರ್ಥಿಗಳ ಸಮಸ್ಯೆಗಳು, ಡಿಪ್ಲೊಮಾ ವಿದ್ಯಾರ್ಥಿಗಳ ಹೋರಾಟ ಹೀಗೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಹಲವಾರು ಹೋರಾಟಗಳನ್ನು ಮಾಡಿ ಸಂಘಟನೆಯನ್ನು ಕಟ್ಟಿ ಬೆಳೆಸುತ್ತಾ ಬಂದಿದ್ದೇವೆ. ಕಳೆದ ವರ್ಷ ಸರ್ಕಾರ 13,800 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಹೆಸರಿನಲ್ಲಿ ಮುಚ್ಚಲು ಆದೇಶ ಹೊರಡಿಸಿದಾಗ, ಬಿಜಾಪುರ ಜಿಲ್ಲೆಯಲ್ಲಿಯೂ 15,000ಕ್ಕೂ ಹೆಚ್ಚು ಸಹಿ ಸಂಗ್ರಹಿ, ಎನ್‌ಇಪಿ-2020 ವಿರೋಧಿಸಿ ಹಲವಾರು ಹೋರಾಟಗಳನ್ನು ಕಟ್ಟಲಾಯಿತು‌” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅಧಃಪತನ, ಅಶ್ಲೀಲ ಸಿನೆಮಾಗಳಿಗೆ ಬಲಿಯಾಗುತ್ತಿರುವುದು ದುಃಖದ ಸಂಗತಿ. ಇಲ್ಲಿ ವಿದ್ಯಾರ್ಥಿಗಳಲ್ಲಿ ಆದರ್ಶ, ಮೌಲ್ಯಗಳನ್ನು ಮೈಗೂಡಿಸಲು ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಈಶ್ವರ ಚಂದ್ರ ವಿದ್ಯಾಸಾಗರ ಇನ್ನೂ ಅನೇಕ ಮಹಾನ್ ವ್ಯಕ್ತಿಗಳ ವಿಚಾರಗಳನ್ನು ವಿದ್ಯಾರ್ಥಿಗಳ ಮಧ್ಯೆ ಕೊಂಡೊಯ್ಯುತ್ತಿದ್ದೇವೆ. ವೈಜ್ಞಾನಿಕ, ಧರ್ಮ ನಿರಪೇಕ್ಷ ಮತ್ತು ಪ್ರಜಾಸತ್ತಾತ್ಮಕ ಶಿಕ್ಷಣಕ್ಕಾಗಿ ಹೋರಾಡುತ್ತಿರುವ ನಮ್ಮ ದೇಶದ ಏಕೈಕ ವಿದ್ಯಾರ್ಥಿಗಳ ಸಂಘಟನೆಯಾಗಿದೆ” ಎಂದು ಹೇಳಿದರು.

“ರಾಜಾ ರಾಮಮೋಹನ್ ರಾಯ್, ಈಶ್ವರ ಚಂದ ವಿದ್ಯಾಸಾಗರ, ಜ್ಯೋತಿಬಾ ರಾವ್ ಫುಲೆ, ಸಾವಿತ್ರಿ ಬಾಯಿ ಫುಲೆ, ಕುದ್ಮಲ್ ರಂಗರಾಯರು ಮುಂತಾದ ಮಹಾನ್ ನವೋದಯ ಚಿಂತಕರ ಕನಸಾಗಿದ್ದು, ಅದನ್ನು ಸಾಧಿಸುವುದು ನಮ್ಮ ಕರ್ತವ್ಯ. ನಮಗೆ ಶಿಕ್ಷಣದ ಉದ್ದೇಶವು ಕೇವಲ ಪದವಿ, ವೃತ್ತಿ ಅಥವಾ ಹಣದ ಗಳಿಕೆಯಲ್ಲ. ಆದರೆ, ಅದರ ನಿಜವಾದ ಅರ್ಥ ಮನುಷ್ಯನಾಗುವುದು. ವಿದ್ಯಾರ್ಥಿಗಳಾಗಿ ನಾವು ನಮ್ಮ ಮಾನವ ಸಮಾಜದ ಬಹುದೊಡ್ಡ ನಿಧಿಯಾದ ಜ್ಞಾನವನ್ನು ಬೆಳೆಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | 334 ಗ್ರಾಮಗಳಿಗೂ ಸ್ಮಶಾನ ಭೂಮಿ ಮಂಜೂರು: ಶಾಸಕ ಎಸ್ ಆರ್ ಶ್ರೀನಿವಾಸ್

“ಶಿಕ್ಷಣ, ಜ್ಞಾನ, ಸಂಸ್ಕೃತಿ ಮತ್ತು ಮಾನವೀಯತೆಯನ್ನು ಎಲ್ಲ ರೀತಿಯ ದಾಳಿಯಿಂದ ರಕ್ಷಿಸಲು ಸಾಧ್ಯವಿರುವ ಎಲ್ಲ ರೀತಿಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎಐಡಿಎಸ್‌ಒ 70ನೇ ಸಂಸ್ಥಾಪನಾ ದಿನದ ಅಂಗವಾಗಿ ಮಕ್ಕಳು ಶಾಲೆಗಳಲ್ಲಿ ಸೂಕ್ತಿ ಪ್ರದರ್ಶನ ಹಾಕಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...