ವಿಜಯಪುರ | ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವವರ ಮೇಲೆ ಕ್ರಮಕ್ಕೆ ಆಗ್ರಹ

Date:

ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ಕರೆದುಕೊಂಡು ಬಂದು, ಅವರಿಗೆ ಮೂಲಭೂತ ಸೌಲಭ್ಯ ಒದಗಿಸದೇ ದುಡಿಸಿಕೊಳ್ಳಲಾಗುತ್ತಿದೆ. ಕಾನೂನು ಬಾಹಿರವಾಗಿ ಕಡಿಮೆ ದುಡ್ಡು ನೀಡಿ ದುಡಿಸಿಕೊಳ್ಳುತ್ತಿರುವ ಮಾಲೀಕರ ಮೇಲೆ ಮತ್ತು ಕಾರ್ಮಿಕ ಅಧಿಕಾರಿಗಳ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಮುಖಂಡ ಪ್ರಭುಗೌಡ ಪಾಟೀಲ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕಟ್ಟಡ ಕಾರ್ಮಿಕರು ಸೇರಿದಂತೆ, ವಿವಿಧ ಕ್ಷೇತ್ರಗಳಲ್ಲಿ ಅಸಂಘಟಿತ ವಲಯದಲ್ಲಿ ಹೊರ ರಾಜ್ಯದವರು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದಾರೆ. ಅಂತವರ ಜಾಡನ್ನು ಸರ್ಕಾರ ಗುರುತಿಸಬೇಕಾಗಿದೆ. ಹೊರ ರಾಜ್ಯದ ಕಾರ್ಮಿಕರ ನುಸುಳುವಿಕೆಯನ್ನು ತಡೆಗಟ್ಟುವಲ್ಲಿ ಕಾರ್ಮಿಕ ಇಲಾಖೆಯು ಸಂಪೂರ್ಣ ವಿಫಲವಾಗಿದೆ. ಇಂತಹ ವಿಷಯಗಳನ್ನು ಅಧಿಕಾರಿಗಳ ಗಮನಕ್ಕೆ ಸಾಕಷ್ಟು ಬಾರಿ ತಂದರು ಮೌನವಹಿಸಿದ್ದಾರೆ. ಅವರು ಮೌನ ವಹಿಸಿದ್ದರ ಫಲವಾಗಿ ಇಂದು ಇಂತಹ ದುಷ್ಕೃತ್ಯಗಳು ನಡೆದಿವೆ” ಎಂದಿದ್ದಾರೆ.

ಈಗಾಗಲೇ ಹೊರ ರಾಜ್ಯದ ಕಾರ್ಮಿಕರನ್ನು ಮೆಕ್ಕೆಜೋಳ ಸಂಗ್ರಹಿಸಿಟ್ಟದ್ದ ಕಬ್ಬಿಣದ ಮೇಲ್ಪಟ್ಟ ಕುಸಿದು ಬಿದ್ದು ಕಳೆದ ರಾತ್ರಿಯಿಂದ ಜೀವನ್ಮರಣದಲ್ಲಿ ನರಳುತ್ತಿದ್ದ ಬಿಹಾರದ ಎಂಟು ಕಾರ್ಮಿಕರ ಪೈಕಿ, ಏಳು ಜನ ಕಾರ್ಮಿಕರು ದಾರುಣ ಸಾವಿಗೀಡಾದ ಹೃದಯವಿದ್ರಾವಕ ಘಟನೆ ನಗರದ ಹೊರ ಭಾಗದ ಕೈಗಾರಿಕಾ ಪ್ರದೇಶದ ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದಿದೆ. ಅದರಂತೆ ಇನ್ನು ಅನೇಕ ಘಟನೆಗಳು ಕೈಗಾರಿಕೆಗಳಲ್ಲಿ ಘಟನೆಗಳು ಸಂಭವಿಸಿರಬಹುದು. ಅವುಗಳು ಬೆಳಕಿಗೆ ಬರದಂತೆ ಮಾಲೀಕರು ಮುಚ್ಚಿಹಾಕಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಇಂತಹ ಘಟನೆ ಮರುಕಳಿಸಬಾರದು ಎಂದರೆ ಕಾರ್ಮಿಕರ ಸುರಕ್ಷತಾ ಕ್ರಮದ ಜಾಗೃತಿ, ಕಾರ್ಮಿಕರ ಹಕ್ಕುಗಳ, ಕರ್ತವ್ಯ, ಸೌಲಭ್ಯಗಳ ಮಾಹಿತಿಯನ್ನು ಸರಿಯಾಗಿ ಒದಗಿಸಬೇಕು. ಪ್ರತಿ ತಿಂಗಳಿಗೊಮ್ಮೆ ಕಾರ್ಮಿಕ ಕುಂದು ಕೊರತೆ ಸಭೆ ನಡೆಸಬೇಕು. ಅದರಂತೆ ಕಾರ್ಮಿಕ ಅಧಿಕಾರಿಗಳ ಮೇಲೆ ಹಾಗೂ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಶಿಕ್ಷೆ ನೀಡಬೇಕು. ಕಾರ್ಮಿಕರ ಕುಟುಂಬಕ್ಕೆ ಹೆಚ್ಚು ಪರಿಹಾರ ಧನ ನೀಡಬೇಕೆಂದು ಪಾಟೀಲ್‌ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...