ವಿಜಯಪುರ | ನಾಲೆಗೆ ನೀರು ಹರಿಸುವಂತೆ ಆಗ್ರಹ

Date:

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ವ್ಯಾಪ್ತಿಯ ರೈತರಿಗೆ ಕೆನಾಲ ನೀರು ಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ಕಬ್ಬು ಬೆಳೆಗಾರರ ಒಕ್ಕೂಟ ಕೋಲ್ಹಾರದಲ್ಲಿ ಪ್ರತಿಭಟನೆ ನಡೆಸಿದೆ. ಒಕ್ಕೂಟದ ಕಾರ್ಯಕರ್ತರು ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ಸೋಮು ಭೀ. ಪರಾದಾರ, “ಈ ಭಾಗದ ಎಲ್ಲ ರೈತರು ಮನವಿ ಮೂಲಕ ತಮ್ಮಲ್ಲಿ ವಿನಂತಿಸಿ ಕೊಳ್ಳುವದೇನೆಂದರೆ. ಕೊಲ್ಹಾರ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರ ಜಮೀನುಗಳಲ್ಲಿ ಬರಗಾಲದಿಂದ ಬೆಳೆ ಒಣಗುತ್ತಿದ್ದು, ಆನೇಕ ಬೆಳೆ ಈಗಾಲೇ ಕೈಕೊಟ್ಟಿವೆ. ಇದರಿಂದ ರೈತರು ಕಂಗಾಲಾಗಿದ್ದು, ಇರುವ ಬೆಳೆ ಉಳಿಸಿಕೊಳ್ಳಲು ನೀರು ಬಿಡಬೇಕು. ಇದರಿಂದ ಸುತ್ತು-ಮುತ್ತಲಿನ ರೈತರ ಜಮೀನುಗಳಿಗೆ ಮತ್ತು ದನ-ಕರುಗಳಿಗೆ ಮೇವಿಗೆ ಸಹಾಯವಾಗುತ್ತದೆ” ಎಂದರು.

ತಕ್ಷಣದಿಂದಲೇ ಕಾಲುವೆಗಳಿಗೆ ನೀರು ಹರಿಸಿದರೆ ಮೇವಿಗೆ, ಅಲ್ಪವಧಿ ಬೆಳೆಗಳಿಗೆ, ತರಕಾರಿ, ಕಡಲೆ, ಶೇಂಗಾ, ಗೋಧಿ ಬೆಳೆಗಳಿಗೆ ನೀರಿನ ಅವಶ್ಯಕತೆ ಇದ್ದು, ಬಾವಿ, ಬೋರ್ವೆಲ್‌ಗಳು ಸಹಾ ಒಣಗುತ್ತಿವೆ. ಅಂತರ್ಜಲ ಕಡಿಮೆಯಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ನಾರಾಯಣಪುರ ಜಲಾಶಯದಿಂದ ಎಡಭಾಗ-ಬಲಭಾಗದ ಕಾಲುವೆಗಳಿಗೆ ನೀರು ಹರಿಸುತ್ತಿದ್ದು, ಕಾರಣ ತಾವು ಮುಳವಾಡ ಏತ ನೀರಾವರಿ ಎಡಭಾಗ ಮತ್ತು ಬಲಭಾಗದ ಕಾಲುವೆಗಳಿಗೆ ಕನಿಷ್ಠ ತಿಂಗಳಿಗೆ 10 ದಿನವಾದರೂ ಕಾಲುವೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ನಮ್ಮ ಸಂಘಟನೆ ವತಿಯಿಂದ ದಿನಾಂಕ 20.01.2024ರಂದು ಉಗ್ರವಾಗಿ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದ ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಶ್ರೀಕಾಂತ ಬಿರಾದರ, ಬಸಪ್ಪ ನ್ಯಾಮಗೌಡ, ಶ್ರೀಶೈಲ್ ಬ್ಯಾಡಗಿ, ಬಸಪ್ಪ ವಾಲೆಕಾರ, ಮಲ್ಲಿಕಾರ್ಜುನ ರೆಡ್ಡರ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...