ವಿಜಯಪುರ | ಮಹಿಳಾ ವಿವಿಯಲ್ಲಿ ಪತ್ರಿಕೋದ್ಯಮ ಕೋರ್ಸ್‌ಗೆ ಅರ್ಜಿ ಆಹ್ವಾನ

Date:

ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಕೋರ್ಸ್‌ಗೆ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನೇವರಿ 13ರವರೆಗೆ ವಿಸ್ತರಿಸಿದೆ.

ರಾಜ್ಯದ ವ್ಯಾಪ್ತಿ ಕಾಲೇಜುಗಳನ್ನು ಹೊಂದಿರುವ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ರಾಜ್ಯದ ಯಾವುದೇ ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜುಗಳಲ್ಲಿ ಬಿ.ಎ, ಬಿಎಸ್‌ಸಿ, ಬಿ.ಕಾಂ ಪದವಿ ಪಡೆದಿರುವ ವಿದ್ಯಾರ್ಥಿನಿಯರು ಅರ್ಹರು.

ಎರಡು ವರ್ಷಗಳ ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಕೋರ್ಸ್ ಮುಗಿಸಿ ಹೊರ ಬರುವ ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶಗಳು ವಿಫೂಲವಾಗಿದ್ದು, ಪತ್ರಿಕೆಗಳು, ಟಿ.ವಿ, ರೇಡಿಯೋ, ಕಾರ್ಪೋರೇಟ್ ವಲಯ, ಜಾಹಿರಾತು ಕ್ಷೇತ್ರ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ನೌಕರಿಗಳಿಗೆ ಅರ್ಹರಾಗುತ್ತಾರೆ ಎಂದು ವಿವಿಯ ಪತ್ರಿಕೋದ್ಯಮ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲ್ಲಿ ವಿದ್ಯಾರ್ಥಿನಿಯರನ್ನು ವಿಶೇಷವಾಗಿ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ತರಬೇತಿ ನೀಡುವ ಉದ್ದೇಶದಿಂದ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಆಡಿಯೋ, ವಿಡಿಯೋ ಪ್ರೊಡಕ್ಷನ್ ಸ್ಟುಡಿಯೋ ಸ್ಥಾಪಿಸಿದೆ.

ಈ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿನಿಯರಿಗೆ ಸರ್ಕಾರಿ ಶಿಷ್ಯವೇತನ, ಹಾಸ್ಟೆಲ್ ಸೌಲಭ್ಯ, ಸುಸಜ್ಜಿತ ಗ್ರಂಥಾಲಯ, ಮಲ್ಟಿಮೀಡಿಯಾ ಪ್ರಯೋಗಾಲಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ (ಸರ್ಕಾರದಿಂದ ಶುಲ್ಕ ಮರುಪಾವತಿಯಾದ ನಂತರ ಆ ಮೊತ್ತವನ್ನು ವಿವಿಗೆ ಜಮಾ ಮಾಡಬೇಕು).

ಅಲ್ಲದೇ ಉಚಿತ ಲ್ಯಾಪ್‌ ಟಾಪ್ ನೀಡಲಾಗುವುದು. ಹೆಚ್ಚಿನ ವಿವರಗಳಿಗಾಗಿ ಮುಖ್ಯಸ್ಥರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅವರನ್ನು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ. ಸಂಪರ್ಕ ಸಂಖ್ಯೆ: 9449182091, 9482248372, 9844681398

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...