ವಿಜಯಪುರ | ಮಾ.9ರಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಕುರಿತ ʼಭೀಮ ಗಾಯನʼ

Date:

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಾರ್ಚ್ 9ರ ಸೋಮವಾರ ಸಂಜೆ 4ಕ್ಕೆ ʼಭೀಮ ಗಾಯನʼ ಕಾರ್ಯಕ್ರಮ ನಡೆಯಲಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡ್ಡಮನಿ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಲಿದೆ. ಸಮಾನತೆಯ ಸ್ವರ ಸಂಭ್ರಮ ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ ಎಂದು ತಿಳಿಸಿದ್ದಾರೆ.

ಸಿದ್ದಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘವು ಭೀಮ ಗಾಯನವನ್ನು ಪ್ರಸ್ತುತಪಡಿಸಲಿದೆ. ಡಾ.ಬಿ ಆರ್ ಅಂಬೇಡ್ಕರ್ ಅವರು ಭೇಟಿ ನೀಡಿರುವ ರಾಜ್ಯದ ಪ್ರಮುಖ ಸ್ಥಳಗಳ ಪೈಕಿ ಆಯ್ದ ಸ್ಥಳಗಳಲ್ಲಿ ಭೀಮಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಬಿ ಪಾಟೀಲ ಅವರು ಭೀಮ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.‌ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್ ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಹಾಗೂ ಶಾಸಕ ಪ್ರಕಾಶ ಬಿ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್‌ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ ಎಸ್ ನಾಡಗೌಡ, ಸಂಸದ ರಮೇಶ ಜಗಜಿಣಗಿ ಹಾಗೂ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್ | ತುಮಕೂರು ಜಿಲ್ಲೆಗೆ ಚಿಕ್ಕಾಸಿನ ಕೊಡುಗೆ : ನಿರಾಸೆ

ಅಂಬೇಡ್ಕರ್ ಗೀತೆಗಳ ಈ ಮಹೋತ್ಸವಕ್ಕೆ ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...