ವಿಜಯಪುರ | ಬಿಲ್ಕಿಸ್ ಬಾನೊ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು; ಪ್ರಗತಿಪರ ಸಂಘಟನೆಗಳ ಸಭೆ

Date:

2002ರ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅವರ ಏಳು ಮಂದಿ ಕುಟುಂಬಸ್ಥರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರ್ವೋಚ್ಛ ನ್ಯಾಯಾಲಯವು ನ್ಯಾಯವನ್ನು ಎತ್ತಿ ಹಿಡಿದಿರುವುದರಿಂದ ಗುಜರಾತ್ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಪ್ರಗತಿ ಪರ ಸಂಘಟನೆಗಳು ಅಭಿಪ್ರಾಯಿಸಿದೆ.

ಗುಜರಾತ್ ಸರ್ಕಾರದ ನಡೆಯ ವಿರುದ್ಧ ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

“ಬಿಲ್ಕಿಸ್‌ ಬಾನೊ ಪ್ರಕರಣದ 11 ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ತೀರ್ಮಾನವನ್ನು ಸರ್ವೋಚ್ಛ ನ್ಯಾಯಾಲಯವು ರದ್ದುಗೊಳಿಸಿ, ಅಪರಾಧಿಗಳು ಎರಡು ವಾರದೊಳಗೆ ಶರಣಾಗುವಂತೆ ಆದೇಶಿಸಿರುವುದು ಗುಜರಾತ್‌ ಸರ್ಕಾರಕ್ಕೆ ಕಪೋಳಮೋಕ್ಷ ಮಾಡಿದಂತಾಗಿದೆ” ಎಂದು ಪ್ರತಿಭಟನಾಕಾರರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುಜರಾತ್ ಸರ್ಕಾರವು ಯಾವ ರೀತಿ ಮಹಾರಾಷ್ಟ್ರ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಕೈಹಾಕಿ ಕ್ಷುಲ್ಲಕ ರಾಜಕೀಯ ಕಾರಣಕ್ಕಾಗಿ ಮಹಿಳೆಯರ ಮೇಲಿನ ಅಪರೂಪದಲ್ಲಿ ಅಪರೂಪದ ದೌರ್ಜನ್ಯ ಪ್ರಕರಣದ ಅಪರಾಧಿಗಳನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡಿದೆ ಎಂಬುದನ್ನು ಈ ತೀರ್ಪು ಎತ್ತಿ ತೋರಿಸಿದೆ. ಗುಜರಾತ್ ಬಿಜೆಪಿ ಸರ್ಕಾರದ ಈ ಕ್ರಮವನ್ನು ಖಂಡನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಮಾಜಿ ಕಾರು ಚಾಲಕ ಮತ್ತು ಆತನ ಪತ್ನಿ ಮೇಲೆ ಭವಾನಿ ರೇವಣ್ಣ ಹಲ್ಲೆ – ಆರೋಪ; ಮಹಿಳೆಯರ ಪ್ರತಿಭಟನೆ

ಈ ಸಂದರ್ಭದಲ್ಲಿ ಭೀಮಸಿ ಕಲಾದಗಿ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಫಾದರ್ ತಿಯೋಲ್ ಮಾಚಾದೊ, ಪ್ಲಮ್ ಸಮಿತಿಯ ಅಧ್ಯಕ್ಷ ಅಕ್ರಮ ಮಾಶಾಳಕರ್, ಗ್ರಾಮೀಣ ಬ್ಯಾಂಕ್ ಯೂನಿಯನ್ ಮುಖಂಡ ಜಿ ಜಿ ಗಾಂಧಿ, ಸಿ ಎ ಗಂಟಪ್ಪಗೋಳ, ಮಹಿಳಾ ಮುಖಂಡರುಗಳಾದ ಸುರೇಖಾ ರಜಪೂತ, ನಿರ್ಮಲ ಹೊಸಮನಿ, ಶಿವಬಾಳಮ್ಮ ಕೊಂಡಗೊಳಿ, ಸುನಿತಾ ಮೋರೆ, ವಿದ್ಯಾವತಿ ಅಂಕಲಗಿ, ಮುಖಂಡರುಗಳಾದ ಅಪ್ಪಸಾಹೇಬ ಯರನಾಳ, ಸಿದ್ದಲಿಂಗ ಬಾಗೇವಾಡಿ, ಲಕ್ಷ್ಮಣ ಹಂದ್ರಾಳ, ಎಚ್ ಟಿ ಭರತಕುಮಾರ, ದಸ್ತಗಿರಿ ಉಕ್ಕಲಿ, ಮೀನಾಕ್ಷಿ ಸಿಂಗೆ, ಭೂಮಿ ಕಾಮಿನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...