ವಿಜಯಪುರ | ಬಸ್ ನಿಲ್ದಾಣಗಳ ಎಲ್‌ಇಡಿ ಪರದೆ ಮೇಲೆ ಬಜೆಟ್ ನೇರ ಪ್ರಸಾರ

Date:

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ರಸ್ತೆ ಸಾರಿಗೆ ನಿಗಮಗಳ ಬಸ್ ನಿಲ್ದಾಣಗಳಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 17ನೇ ಬಜೆಟ್ ನೇರ ಪ್ರಸಾರವನ್ನು ಎಲ್‌ಇಡಿ ಪರದೆ ಮೇಲೆ ವೀಕ್ಷಿಸುವ ಮೂಲಕ ಪ್ರಯಾಣಿಕರು ಖುಷಿಪಟ್ಟರು.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದಂತೆಯೇ ರಾಜ್ಯದ ಬಹುತೇಕ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರವನ್ನು ವೀಕ್ಷಿಸಲು ಅವಕಾಶ ಕಲ್ಪಿಸಿದ್ದರಿಂದ ಬಸ್ ನಿಲ್ದಾಣಗಳಲ್ಲಿದ್ದ ಪ್ರಯಾಣಿಕರು ಬಜೆಟ್ ಮಂಡನೆಯನ್ನು ನೇರವಾಗಿ ಕಣ್ತುಂಬಿಕೊಳ್ಳುವ ಮೂಲಕ ಸಂತೋಷ ವ್ಯಕ್ತಪಡಿಸಿದರು.

ಸಾಮಾನ್ಯವಾಗಿ ಸಾರ್ವಜನಿಕರಿಗೆ ಇಂತಹ ಕಾರ್ಯಕ್ರಮಗಳನ್ನು ನೇರವಾಗಿ ವೀಕ್ಷಿಸಲು ಅವಕಾಶ ಸಿಗುವುದು ಕಡಿಮೆ. ಸಿಗುವ ಸಂದರ್ಭದಲ್ಲಿ, ಸರ್ಕಾರ ಕೈಗೊಂಡ ಈ ಹೊಸ ಪ್ರಯತ್ನಕ್ಕೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್ ನಿಲ್ದಾಣಗಳಲ್ಲಿ ಪ್ರಯಾಣಕ್ಕಾಗಿ ಕಾಯುತ್ತಿದ್ದ ಅನೇಕರು ಎಲ್‌ಇಡಿ ಪರದೆಗಳ ಮೂಲಕ ಬಜೆಟ್ ಮಂಡನೆಯನ್ನು ಏಕಾಗ್ರತೆಯಿಂದ ವೀಕ್ಷಿಸಿ, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕ್ರಮಗಳ ಕುರಿತು ಮಾಹಿತಿ ಪಡೆಯಲು ಸಾಧ್ಯವಾಯಿತು ಎಂದು ಹೇಳಿದರು.

ಸಾರ್ವಜನಿಕರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ನೇರವಾಗಿ ತಲುಪಿಸುವ ಉದ್ದೇಶದಿಂದ ಕೈಗೊಂಡ ಈ ಕ್ರಮವನ್ನು ವಿಜಯಪುರದ ಜನತೆ ಸ್ವಾಗತಿಸಿದರು.

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಐತಿಹಾಸಿಕ ರಾಕೆಟ್ ಕೋರ್ಟ್ ಆವರಣದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

“ವಿಜಯಪುರ ನಗರದ ವೀರ ರಾಣಿ ಕಿತ್ತೂರು ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣ, ಸ್ಯಾಟಲೈಟ್ ಬಸ್ ನಿಲ್ದಾಣ ವಿಜಯಪುರ, ಇಂಡಿ, ಸಿಂದಗಿ, ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರು ಬಜೆಟ್ ಮಂಡನೆ ಎಲ್‌ಇಡಿ ಪರದೆಗಳಲ್ಲಿ ಪ್ರಯಾಣಿಕರು ಬಜೆಟ್ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು” ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...