ವಿಜಯಪುರ | ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹ

Date:

ಇಂಡಿ ಪ್ರತ್ಯೇಕ ಜಿಲ್ಲೆ ಘೋಷಣೆಗೆ ಬುಶ್ರಾ ಲಿಬರಲ್‌ ಎಜುಕೇಶನ್‌ ಅಸೋಸಿಯೇಷನ್‌ ಕಾರ್ಯಕರ್ತರು ಇಂಡಿಯಲ್ಲಿರುವ ಮಿನಿ ವಿದಾನಸೌಧದ ಎದುರು ಪ್ರತಿಭಟನೆ ನಡೆಸಿದರು.

ಉಪ ವಿಭಾಗಾಧಿಕಾರಿ ಅಬಿದ್ ಗದ್ಯಾಳ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಸ್ಥೆಯ ಉಪಾಧ್ಯಕ್ಷ ಹಸನ ಮುಜಾರ, “ಜಿಲ್ಲಾ ಕೇಂದ್ರಕ್ಕೆ ಯೋಗ್ಯವಾದ ಭೌಗೋಳಿಕ ಪ್ರದೇಶ ಮತ್ತು ಸರ್ಕಾರಿ ಕಚೇರಿಗಳನ್ನು ಹೊಂದಿರುವ ಇಂಡಿಯನ್ನು ಜಿಲ್ಲೆಯಾಗಿಸಬೇಕು. ರಾಜ್ಯ ಗಡಿ ಭಾಗದ ಅತಿ ಹಿಂದುಳಿದ ಪ್ರದೇಶಗಲ್ಲಿ ವಿಜಯಪುರ ಜಿಲ್ಲೆಯ ಇಂಡಿ‌ ಪಟ್ಟಣವೂ ಒಂದಾಗಿದೆ. ಅಲ್ಲದೆ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ತೀರಾ ಹಿಂದುಳಿದೆ. ಆದರೆ ಇಂಡಿಯು ಆಡಳಿತಾತ್ಮಕವಾಗಿ ಎಲ್ಲ ವಿಧದಲ್ಲೂ ಪ್ರಗತಿ ಹೊಂದಬೇಕಾದರೆ ಜಿಲ್ಲೆ ಮಾಡಿದಾಗ ಮಾತ್ರ ಸಾಧ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಮ್ರಾನ್ ಮುಜಾವರ, ಅಬ್ಬಾಸ್ ದೇಸಾಯಿ ಮಾತನಾಡಿ‌, “ಅಭಿವೃದ್ಧಿ ದೃಷ್ಟಿಯಿಂದ ಇಂಡಿಗೆ ಪ್ರತ್ಯೇಕ ಜಿಲ್ಲೆ ಸ್ಥಾನಮಾನ ನೀಡಬೇಕು. ಈ ಭಾಗದ ಬಹು ದಿನದ ಜಿಲ್ಲಾ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು” ಎಂದರು.

ಜಿಲ್ಲೆಗೆ ಇರಬೇಕಾದ ಪೂರಕ ಅಂಶಗಳು ಈಗಾಗಲೆ ಸಾಕಷ್ಟು ಇಲ್ಲಿ ಲಭ್ಯವಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂಡಿ ಪ್ರತೇಕ ಜಿಲ್ಲೆ ರಚನೆ ಮಾಡಿ ಘೋಷಣೆ ಮಾಡಬೇಕು. ಅಂತೆಯೇ ಸಂವಿಧಾನ ವಿಧಿ 371(ಜೆ)ಗೆ ಅಖಂಡ ಇಂಡಿ ಮತ್ತು ಸಿಂದಗಿ ತಾಲೂಕು ಸೇರ್ಪಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಿ ಪ್ರೌಢಶಾಲೆಗೆ ಮೀಸಲಿಟ್ಟ ಜಾಗ ಒತ್ತುವರಿ; ತೆರವಿಗೆ ಆಗ್ರಹ

ರಂಜಾನ ಇಂಡಿಕರ, ಶಹಿನಶಾ ಜಾಗಿರದಾರ, ಅಕೀಲ ಪಟೇಲ, ಮುಸ್ತಾಕ ಇಂಡಿಕರ, ಯಾಸೀನ್ ಟಾಮಟಗಾರ, ಸರಫರಾಜ ಬಾಗವಾನ, ಮೌಶೀನ ಬಾಗವಾನ, ರಫೀಕ ಅರಬ, ಜೈದ ಗೌರ, ಜಾಬೀರ ಲಶಕೇರಿ, ಎಂಡಿ ಕೈಫ್ ಇಂಡಿಕರ‌ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...