ವಿಜಯಪುರ | ಡಾ. ಬಿ.ಆರ್. ಅಂಬೇಡ್ಕರ್‌ರವರ 67ನೇ ಮಹಾ ಪರಿನಿರ್ವಾಣ ದಿನ ಆಚರಣೆ

Date:

ಭಾರತದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ 67ನೇ ಮಹಾ ಪರಿನಿರ್ವಾಣದ ನಿಮಿತ್ತ ದಲಿತ ‌ಸಮರ ಸೇನೆ ಕರ್ನಾಟಕ ವಿಜಯಪುರ ಜಿಲ್ಲಾ ಶಾಖೆಯ ಕೇಂದ್ರ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಡಿಎಸ್ಎಸ್ ಅಧ್ಯಕ್ಷ ಗೌಡಪ್ಪಬಸಪ್ಪ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸರ್ವ ಜನಾಂಗದ ಹಕ್ಕುಗಳಿಗಾಗಿ ಹೋರಾಡಿದ ಮಾನವ ಹಕ್ಕುಗಳ ಹೋರಾಟಗಾರ. ಮಹಾನ್ ಮಾನವತಾವಾದಿ. ಅವರು ಕೇವಲ ಒಂದು ಸಮುದಾಯ ಒಂದು ಜನಾಂಗದ ಹಕ್ಕುಗಳಿಗಾಗಿ ಹೋರಾಡಿದವರಲ್ಲ. ಅವರು ಸರ್ವ ಜನಾಂಗದ ಹಕ್ಕುಗಳಿಗಾಗಿ ಶ್ರಮಿಸಿ ಸಂವಿಧಾನ ಬದ್ಧ ಹಕ್ಕುಗಳನ್ನು ಕೊಟ್ಟವರು. ಇಂತಹ ಮಹಾನ್ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರನ್ನು ಸಂಕುಚಿತಗೊಳಿಸುತ್ತಿರುವುದು ಮತ್ತು ಮೀಸಲಾತಿ ವಿಷಯಕ್ಕೆ ಮಾತ್ರ ಸೀಮಿತಗೊಳಿಸುತ್ತಿರುವುದು ತುಂಬಾ ವಿಷಾದಕರ ಸಂಗತಿ ಎಂದು ಹೇಳಿದರು.

ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಕೊಡುಗೆ ಕೇವಲ ಮೀಸಲಾತಿಯದ್ದಲ್ಲ. ಅವರು ಕೃಷಿಗಾಗಿ, ದೇಶದ ಮೊದಲ ವಿವಿಧೋದ್ದೇಶ ನದಿ ಕಣಿವೆ ಯೋಜನೆಯಾದ ದಾಮೋದರ್ ಕಣಿವೆ ಆಣೆಕಟ್ಟು, ಸೋನೆ ನದಿ ಅಣೆಕಟ್ಟು, ದೇಶದ ಅತಿ ಉದ್ದದ ಆಣೆಕಟ್ಟು ಆದ ಹಿರಾಕುಡ್ ಅಣೆಕಟ್ಟು, ಅತಿ ದೊಡ್ಡ ವಿವಿಧೋದ್ದೇಶ ಆಣೆಕಟ್ಟು ಆದ ಬಾಕ್ರಾನಂಗಲ್ ಆಣೆಕಟ್ಟು, ಮಹಿಳೆಯರಿಗಾಗಿ ಮೀಸಲಾತಿ, ಹೆರಿಗೆ ರಜೆ ಮತ್ತು ಆರೋಗ್ಯವಿಮೆಗಳನ್ನು ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕರಿಗಾಗಿ ವಿಮಾ ಯೋಜನೆಗಳನ್ನು ಹಾಗೂ  ಅನಿಯಂತ್ರಿತವಾಗಿ ದುಡಿಯಬೇಕಿದ್ದ ಕಾರ್ಮಿಕರನ್ನು ಎಂಟು ಗಂಟೆ ಕೆಲಸ, ಎಂಟು ಗಂಟೆ ವಿಶ್ರಾಂತಿ, ಎಂಟು ಗಂಟೆ ನಿದ್ರೆ ಹೀಗೆ ಕಾರ್ಮಿಕರ ಹಿತರಕ್ಷಣೆ, ದೇಶದ ಅರ್ಥ ವ್ಯವಸ್ಥೆಯ ಸ್ಥಂಭವಾದ ಆರ್‌ಬಿಐನ ಸ್ಥಾಪನೆ ಮತ್ತು ಪ್ರತಿ 10 ವರ್ಷಗಳಿಗೊಮ್ಮೆ ರೂಪಾಯಿಗಳ ಅಪಮೌಲ್ಯಿಕರಣ ಹೀಗೆ ಎಣಿಕೆಗೆ ಮೀರಿದ ಕೊಡುಗೆಗಳ ಮೂಲಕ ಈ ದೇಶಕ್ಕಾಗಿ ತಮ್ಮ ಉಸಿರಿರುವ ವರೆಗೂ ಶ್ರಮಿಸಿದ ಮಹಾನ್ ನಾಯಕ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಅವರ ವಿಚಾರಗಳನ್ನು ಪ್ರತಿಮೆಗಳಲ್ಲಿ ಅಲ್ಲ, ಪುಸ್ತಕಗಳಲ್ಲಿವೆ ಎಂದು ಅವರು ಹೇಳಿದರು.

ದೇವರ ಹಿಪ್ಪರಗಿ ಠಾಣೆಯ ಆರಕ್ಷರಾದ ಕಿರಣ್ ಕುಮಾರ್, ಬಾಬಾ ಸಾಹೇಬರ ಕುರಿತು ಅಧ್ಯಯನ ಮಾಡುವುದು ಎಂದರೆ ಕೊನೆಯಿಲ್ಲದ ಅಧ್ಯಯನವಾಗಿದೆ. ಅವರ ವಿಚಾರಗಳು ನಿತ್ಯ ನೂತನವಾಗಿವೆ. ನಾವು ಜ್ಞಾನದ ಮೂಲಕ ಅವರ ವಿಚಾರಗಳನ್ನು ಬೆಳಗಬೇಕಾಗಿದೆ ಎಂದರು. ಜಿಲ್ಲಾ ಸಂಚಾಲಕರಾದ ಅಮೃತ್ ಅವರು ವಿಶ್ವ ಭಾರತವನ್ನು ಗುರುತಿಸುವುದು ನಮ್ಮ ದೇಶದಲ್ಲಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಮನಿಸಿ. ಅಂತಹ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರೂಪಿಸಿದವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್. ಹಾಗೆಯೇ ಈ ದೇಶದಲ್ಲಿ ಮಹಿಳಾ ಹಕ್ಕುಗಳಿಗಾಗಿ ಮೊಟ್ಟ ಮೊದಲು ಹೋರಾಡಿದವರೆಂದರೆ ಅದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್. ಶಿಕ್ಷಣಕ್ಕೆ ಮೂಲ ಬುನಾದಿ ಹಾಕಿದವರು ಕೂಡ ಬಾಬಾ ಸಾಹೇಬ್ ಅಂಬೇಡ್ಕರ್ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಗಳಾದ ಸುನೀಲ್ ಕಳಸರೇಡ್ಡಿ ರವರು, ಪ್ರಜ್ವಲ್ ರವರು, ಕೀರಣ್ ರವರು ಬಾಬಾ ಸಾಹೇಬರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...