ವಿಜಯಪುರ | ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 20ಕ್ಕೂ ಅಧಿಕ ಐಷಾರಾಮಿ ಕಾರುಗಳು ಭಸ್ಮ

Date:

ವಿಜಯಪುರ ನಗರದ ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 20ಕ್ಕೂ ಅಧಿಕ ಐಷಾರಾಮಿ ಕಾರುಗಳು ಸುಟ್ಟು ಭಸ್ಮವಾಗಿವೆ.

ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹನುಮಂತ ಕನಮಡಿ ಅವರಿಗೆ ಸೇರಿದ ಎಚ್‌ಎಂಕೆ ಸರ್ವಿಸ್ ಸೆಂಟರ್‌ನಲ್ಲಿ ರಿಪೇರಿ ಮತ್ತು ಸರ್ವಿಸ್‌ಗಾಗಿ ನಿಲ್ಲಿಸಲಾಗಿದ್ದ ವಿವಿಧ ಕಂಪೆನಿಗಳ ಕಾರುಗಳು ಸುಟ್ಟು ಭಸ್ಮವಾಗಿವೆ.

ಬೆಂಕಿಯ ಕೆನ್ನಾಲಿಗೆ ಇಡಿ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿ ಭಾಗಗಳೂ ಕೂಡ ಬೆಂಕಿಗೆ ಆಹುತಿಯಾಗಿವೆ. ಸುಟ್ಟುಹೋದ ಕಾರುಗಳ ಒಟ್ಟು ಮೌಲ್ಯ ಒಂದು ಕೋಟಿ ರೂಪಾಯಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಧಾವಿಸಿದ್ದು, ಸುತ್ತಮುತ್ತ ಬೆಂಕಿ ವ್ಯಾಪಿಸಿದಂತೆ ಹರಸಾಹಸಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅದೃಷ್ಟವಷಾತ್, ಘಟನೆ ಸಮಯದಲ್ಲಿ ಸರ್ವಿಸ್ ಸೆಂಟರ್‌ನಲ್ಲಿ ಯಾರೂ ಇಲ್ಲದಿದ್ದ ಕಾರಣ ಸಾವು ನೋವು ಸಂಭವಿಸಿಲ್ಲ.

ಈ ಸುದ್ದಿ ಓದಿದ್ದೀರಾ? ಮೈಸೂರು | ಮೆಲ್ಲಹಳ್ಳಿ ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’

ಆದರೆ ಅಗ್ನಿ ಅವಘಡಕ್ಕೆ ಈವರೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಗೋಲುಗುಂಬಜ಼್ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...