ವಿಜಯಪುರ | ನೀರಾವರಿಗಾಗಿ ಭೂಮಿ ಕಳೆದುಕೊಂಡ ರೈತರ ಕಣ್ಣೀರು ಒರೆಸಲು ಸರ್ಕಾರ ಮುಂದಾಗಿದೆ: ಸಚಿವ ಎಂ ಬಿ ಪಾಟೀಲ

Date:

ನೀರಾವರಿಗಾಗಿ ಭೂಮಿ ಕಳೆದುಕೊಂಡ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆಜೈನಾಪುರ ಗ್ರಾಮದಲ್ಲಿ ಶನಿವಾರ ನಡೆದ ಲಕ್ಷ್ಮಿದೇವಿ, ಈಶ್ವರ, ನಂದಿ ಮತ್ತು ಮಾರುತೇಶ್ವ ದೇವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಾಗೂ ಧರ್ಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

“ಯುಕೆಪಿ 3ನೇ ಹಂತದ ಭೂಸ್ವಾಧೀನವಾಗಲಿರುವ ಜಮೀನುಗಳ ರೈತರಿಗೆ ಒಪ್ಪಂದದಂತೆ ಪರಿಹಾರ ಚೆಕ್ ವಿತರಣೆ ಕಾರ್ಯಕ್ಕೆ ಬಾಗಲಕೋಟೆಯಲ್ಲಿ ಚಾಲನೆ ನೀಡಲಾಗಿದೆ. ಈ ಮೂಲಕ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಶಿಕ್ಷಣ, ಉದ್ಯೋಗ ಮತ್ತು ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇವೆ‌. ಜೈನಾಪುರ ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು. ಗ್ಯಾರೆಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಜೊತೆಯಲ್ಲಿಯೇ ಸರ್ಕಾರ ಬಡವರು, ರೈತರು, ಮಹಿಳೆಯರು, ಯುವಕರು ಸೇರಿದಂತೆ ಎಲ್ಲರ ಕಲ್ಯಾಣಕ್ಕಾಗಿ ಯೋಜನೆಗಳನ್ನು ಜಾರಿ ಮಾ‌ಡಿದೆ. ಮಮದಾಪುರ ಹೋಬಳಿಗೆ ಅಭಿವೃದ್ಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಸಂಸ್ಕೃತಿ, ಪ್ರಕೃತಿ ಮತ್ತು ದೈವಾರಾಧನೆಗಳೂ ಸಮಾಜದ ಅವಿಭಾಜ್ಯ ಅಂಗಗಳಾಗಿವೆ. ಹೊಳೆಜೈನಾಪುರದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆ ಗ್ರಾಮಸ್ಥರ ದೈವಭಕ್ತಿಗೆ ಸಾಕ್ಷಿಯಾಗಿದೆ” ಎಂದು ಸಚಿವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗೊರವನಹಳ್ಳಿ | ಮೂಟೆಗಳಲ್ಲಿ ದಾಖಲೆಗಳನ್ನೊಯ್ದ ಗ್ರಾ.ಪಂ ಅಧಿಕಾರಿಗಳು: ತಡೆಯಲೆತ್ನಿಸಿದ ಮುಖಂಡರ ಬಂಧನ

ಇದೇ ವೇಳೆ ಗ್ರಾಮಸ್ಥರು ಸಚಿವ ಎಂ ಬಿ ಪಾಟೀಲ ಅವರನ್ನು ಬಾಳೆಹಣ್ಣುಗಳಿಂದ ತುಲಾಭಾರ ನಡೆಸುವ ಮೂಲಕ ಧನ್ಯತೆ ಅರ್ಪಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜ ದೇಸಾಯಿ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ, ಮುಖಂಡರಾದ ಪ್ರಶಾಂತ ಹಿರೇದೇಸಾಯಿ, ಜಗನ್ನಾಥ ಹಿರೇದೇಸಾಯಿ, ಭೀಮಶಿ ನಾಗರಾಳ, ಬಸಪ್ಪ ಕೊಡೆಕಲ್, ಶ್ರೀನಿವಾಸ ನಿಡೋಣಿ, ಅಮೀನ ಬಿದರಿ, ಲಕ್ಕಪ್ಪ ಅಂಬಿಗೇರ, ಮುತ್ತಪ್ಪ ಮಂಟೂರ, ದೇವಸ್ಥಾನದ ಪ್ರಮುಖರು, ಗ್ರಾಮಸ್ಥರು, ಹಿರಿಯರು, ಮಹಿಳೆಯರು, ಯುವಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....