ವಿಜಯಪುರ | ಸರ್ಕಾರಿ ಮೆಡಿಕಲ್‌ ಕಾಲೇಜು ಘೋಷಣೆ; ಶೀಘ್ರ ಶಂಕುಸ್ಥಾಪನೆಗೆ ದವಿಪ ಆಗ್ರಹ

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ (ಜ.7) ಹಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರದ ಬಹುದಿನಗಳ ಕನಸಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದು, ದಲಿತ ವಿದ್ಯಾರ್ಥಿ ಪರಿಷತ್ ಸ್ವಾಗತಿಸುತ್ತದೆ. ಘೋಷಣೆಯಂತೆಯೇ ಶೀಘ್ರವಾಗಿ ಕಟ್ಟಡದ ಶಂಕುಸ್ಥಾಪನೆ ಮಾಡಬೇಕು ಎಂದು ದವಿಪ ಆಗ್ರಹಿಸಿದೆ.

ಮುಖ್ಯಮಂತ್ರಿಗಳು ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಾಡುವ ಬಗ್ಗೆ ಘೋಷಿಸಿದ ಹಿನ್ನೆಲೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಇಂದು ಅಂಬೇಡ್ಕರ್ ಸರ್ಕಲ್ ಬಳಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಈ ವೇಳೆ ಮಾತನಾಡಿದ ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ, “ಜಿಲ್ಲೆಯ ಎಲ್ಲ ಪ್ರಗತಿಪರ ಸಂಘಟನೆಗಳ ಮತ್ತು ಹೋರಾಟಗಾರರ ಹಾಗೂ ವಿದ್ಯಾರ್ಥಿ ಯುವಜನರ ಹೋರಾಟದ ಪ್ರತಿಫಲವಾಗಿ ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ಘೋಷಣೆ ಆಗಿದ್ದು ಸ್ವಾಗತಾರ್ಹ. ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಧನ್ಯವಾದಗಳು. ಆದಷ್ಟು ಬೇಗನೆ ಕಾಲೇಜು ಶಂಕುಸ್ಥಾಪನೆಯಾಗಬೇಕು. ಈ ಕುರಿತು ಮುಖ್ಯಮಂತ್ರಿಗಳು ಗಮನ ಹರಿಸಬೇಕು ಜೊತೆಗೆ ಮೆಡಿಕಲ್ ಕಾಲೇಜು ಸ್ಥಾಪನೆಗೆ ಹೋರಾಡಿ ಜೈಲಿಗೆ ಹೋದ ಹೋರಾಟಗಾರರನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಮಾತನಾಡಿದ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷ ಮಹಾದೇವ ಚಲವಾದಿ, “ಜಿಲ್ಲೆಯ ವಿದ್ಯಾರ್ಥಿ ಯುವಜನರ ಬಹುದಿನಗಳ ಬೇಡಿಕೆಯಾಗಿದ್ದ ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ ಮುಖ್ಯಮಂತ್ರಿಗಳಿಗೆ ಹಾಗೂ ಈ ಬಗ್ಗೆ ಶ್ರಮಿಸಿದ ಜಿಲ್ಲೆಯ ಜನಪ್ರತಿನಿಧಿಗಳಿಗೆ ಧನ್ಯವಾದಗಳು. ಘೋಷಣೆ ಬರೀ ಘೋಷಣೆಯಾಗಿ ಉಳಿಯದೆ, ಆದಷ್ಟು ಬೇಗ ಶಂಕುಸ್ಥಾಪನೆ ಮಾಡಿ ಮಾನ್ಯ ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕಾಲೇಜನ್ನು ಉದ್ಘಾಟಿಸಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ವಿಜಯಪುರ | ವಿಜಯ ಪತಾಕೆ ಹಾರಿಸಿದ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ

ಈ ಸಂದರ್ಭದಲ್ಲಿ ಮುಖಂಡರಾದ ಪ್ರತಾಪ್, ಸಾಯಬಣ್ಣ, ಭೀಮು ಹುಚ್ಚಪ್ಪ, ಯಾಸಿನ್, ಆದಿತ್ಯ, ನಿಂಗಣ್ಣ, ಮಂಜು, ಪ್ರವೀಣ, ಆಕಾಶ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...