ವಿಜಯಪುರ | ʼಅವರ ತಾಟಿನಲ್ಲಿ ಹೆಗ್ಗಣ ಬಿದ್ದಿದೆ, ನಮ್ಮ ತಾಟಿನ ನೊಣದ ಬಗ್ಗೆ ಯಾಕೆ ಮಾತನಾಡುತ್ತಾರೆʼ

Date:

ಬಿಜೆಪಿಯಲ್ಲಿರುವ ಸಮಸ್ಯೆಗಳನ್ನು ಸರಿ ಮಾಡಿಕೊಳ್ಳಲು ಹೇಳಿ, ‘ಅವರ ತಾಟಿನಲ್ಲಿ ಹೆಗ್ಗಣ ಬಿದ್ದಿದೆ. ನಮ್ಮ ತಾಟಿನಲ್ಲಿರುವ ನೊಣದ ಬಗ್ಗೆ ಯಾಕೆ ಮಾತನಾಡುತ್ತಾರೆʼ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ವಿಜಯಪುರದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟವಾಗುತ್ತದೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಸವದಿ, ಶಾಸಕಾಂಗ ಸಭೆಯಲ್ಲಿ ಏನೇನು ಆಗಿದೆ ಎಂಬುದನ್ನು ನೆನಪು ಮಾಡಿಕೊಳ್ಳಲಿ ಎಂದರು.

ನಮ್ಮ ಬಗ್ಗೆ ಮಾತನಾಡೋದು ಅವಶ್ಯಕತೆಯಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ‌ ಒಗ್ಗಟ್ಟಿದೆ ಒಂದಾಗಿ ಕೆಲಸ ಮಾಡುತ್ತಿದ್ದೇವೆ, 136ಜನ ಶಾಸಕರು ಒಂದಾಗಿ ಕೆಲಸ ಮಾಡುತ್ತಿದ್ದೇವೆ ನೆಮ್ಮದಿಯಾಗಿ ಜನರು ಐದು ಗ್ಯಾರಂಟಿಗಳ ಮೂಲಕ ತೃಪ್ತಿಯಾಗಿದ್ದಾರೆ ಅದನ್ನು ಬಿಜೆಪಿಯವರಿಗೆ ‌ನೋಡಲಾಗುತ್ತಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನೇವರಿ 26ಮುಗಿಯಲಿ ಯಾರು ಯಾರನ್ನು ಸೆಳೆಯುತ್ತಾರೆ ನೋಡೋಣ. ಎನ್ನುವ ಮೂಲಕ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸವದಿ ಸುಳಿವು ನೀಡಿದರು. ಜನಾರ್ಧನ ರೆಡ್ಡಿಯನ್ನು ವಾಪಸ್ ಬಿಜೆಪಿಗೆ ಕರೆ ತರೋ ವಿಚಾರಕ್ಕೆ, ರೆಡ್ಡಿಯವರು ಕರೆದುಕೊಳ್ಳಲಿ ಯಾರು ಬೇಡ ಅಂತಾರೆ. ಯಾರು ಅವರನ್ನು ಹೊರ ಹಾಕಿದವರು ಯಾರು? ಒಳಗೆ ಕರೆದುಕೊಳ್ಳುವವರು ಅವರೇ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಪಕ್ಷದಲ್ಲಿ ಮನೆಯೊಂದು ಮೂರು ಬಾಗಿಲು ಪರಿಸ್ಥಿತಿ ಇದೆ. ಈ ಕಾರಣಕ್ಕೆ ಆ ಪಕ್ಷ ತ್ಯಜಿಸಿದ್ದೇನೆ. ಬಿಜೆಪಿಯಲ್ಲಿ ಯಾವ ಭವಿಷ್ಯವಿಲ್ಲ, ಬಿಜೆಪಿಯಲ್ಲಿ ಆಂತರಿಕ ಕಲಹ ವ್ಯಾಪಕವಾಗಿದೆ. ಜನತೆ ಈ ಎಲ್ಲ ಗೊಂದಲ, ಕಲಹವನ್ನು ಗಮನಿಸುತ್ತಲೇ ಇದ್ದಾರೆ. ಮುಂದೆ ಬರುವ ಲೋಕಸಭಾ ‌ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ‌ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ. ರಾಜ್ಯದಲ್ಲಿ ಇನ್ನೂ ಎರಡು ದಶಕಗಳ‌ ಕಾಲ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಅದು ಪ್ರತಿಪಕ್ಷದಲ್ಲಿಯೇ ಇರುತ್ತದೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...