ವಿಜಯಪುರ | ಮಹಾತ್ಮ ಗಾಂಧೀಜಿ ಜೀವನಾಧಾರಿತ ಪುಸ್ತಕಗಳ ಪಟ್ಟಿ ಮಾಡಿ, ಖರೀದಿಸಿ: ಡಿಸಿ ಆನಂದ ಕೆ ಸೂಚನೆ

Date:

ಮಹಾತ್ಮ ಗಾಂಧೀಜಿ ಜೀವನ ಆಧಾರಿತ ಪುಸ್ತಕಗಳನ್ನು ಪಟ್ಟಿ ಮಾಡಿ ಖರೀದಿಸಿ ಗಾಂಧಿ ಭವನ ಗ್ರಂಥಾಲಯದಲ್ಲಿ ಇಡುವಂತೆ ಕ್ರಮ ವಹಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ನಗರದ ಗಾಂಧಿ ಭವನದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, “ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ತಾಣಗಳ ಪಟ್ಟಿಯನ್ನು ತಯಾರಿಸಿದ್ದು, ಅದರೊಂದಿಗೆ ಗಾಂಧಿ ಭವನವನ್ನೂ ಸೇರಿಸಿ. ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರು ಗಾಂಧಿ ಭವನ ವೀಕ್ಷಣೆಗೆ ಬರುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

“ಗಾಂಧಿ ಭವನವು ಗಾಂಧೀಜಿಯವರ ತತ್ವಗಳ ಪ್ರಚಾರ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ವಹಿಸಬೇಕು” ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಾಂಧಿ ಭವನಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧಿಯವರ ಜೀವನ ಆಧಾರಿತ ಕಿರುಚಿತ್ರಗಳನ್ನು ಪ್ರದರ್ಶಿಸುವುದರಿಂದ ಮಕ್ಕಳಲ್ಲಿ ಗಾಂಧೀಜಿಯವರ ಕುರಿತು ಅರಿವು ಮೂಡಿದಂತಾಗುತ್ತದೆ” ಎಂದು ಸಭೆಗೆ ತಿಳಿಸಿದರು.

ಗಾಂಧಿ ಭವನದಲ್ಲಿ ಸದಾಭಿರುಚಿ ಬಿಂಬಿಸುವಂತಹ ಸಂಘ-ಸಂಸ್ಥೆಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮುಖ್ಯಸ್ಥರಿಂದ ಅನುಮತಿ ಪಡೆದು ಅವರ ಇಲಾಖೆ ಪತ್ರಗಳ ಮೂಲಕ ಕಾರ್ಯಕ್ರಮ ಆಯೋಜಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು. ಗಾಂಧೀಜಿಯವರ ವಿಚಾರಧಾರೆಗಳನ್ನು ಅರಿತುಕೊಳ್ಳಲು ಶಿಕ್ಷಣ ಇಲಾಖೆಯ ಸಮನ್ವಯ ಸಾಧಿಸಿ ಆಗಸ್ಟ್ ಫೌಂಡೇಶನ್‌ ಸಹಯೋಗದೊಂದಿಗೆ ಮಕ್ಕಳಿಗೆ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಗಣರಾಜ್ಯೋತ್ಸವ | ವಿಜಯಪುರ ಜಿಲ್ಲಾ ಮಟ್ಟದ ಕ್ರೀಡಾಪಟುಗಳ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ

“ಭವನದ ಸುರಕ್ಷತೆ ದೃಷ್ಟಿಯಿಂದ ಸುತ್ತಲೂ ಎತ್ತರದ ಗೋಡೆಯನ್ನು ನಿರ್ಮಿಸುವುದರೊಂದಿಗೆ ತಂತಿಬೇಲಿ ಅಳವಡಿಸಬೇಕು. ಭವನಕ್ಕೆ ಬೇಕಾಗುವ ಪ್ರೊಜೆಕ್ಟರ್ ಅಳವಡಿಸಬೇಕು, ಸಿಸಿ ಕ್ಯಾಮೆರಾ ಅಳವಡಿಸಬೇಕು, ಶೌಚಾಲಯ ಶುಚಿಗೊಳಿಸಬೇಕು. ಅಲ್ಲದೆ ಸಿಬ್ಬಂದಿಯ ಕೊರತೆ ಇದ್ದರೆ ಕೊಡಲೇ ನೇಮಕಾತಿ ಮಾಡಿಕೊಳ್ಳಬೇಕು” ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...