ವಿಜಯಪುರ | ಭಾರತೀಯ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಮೌಲಾನಾ ಅಬುಲ್ ಕಲಾಂ ಆಜ಼ಾದ್ ಪಾತ್ರರಾಗಿದ್ದರು: ಮುಖ್ಯಶಿಕ್ಷಕ ಖಾಜಿ

Date:

ಮೌಲಾನಾ ಅಬುಲ್ ಕಲಾಂ ಆಜ಼ಾದ್ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮರುರೂಪಿಸಲು ಕಂಕಣ ಬದ್ಧರಾಗಿದ್ದರು. ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರಲ್ಲದೆ, ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿದ್ದರು ಎಂದು ನಾಲತವಾಡ ಉರ್ದು ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎ ಎಚ್ ಖಾಜಿ ಹೇಳಿದರು.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ ಜರಗಿದ ಮೌಲಾನಾ ಅಬುಲ್ ಕಲಾಂ ಆಜ಼ಾದ್ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ ಅಂಗವಾಗಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

“ಆಧುನಿಕ ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದ ಶ್ರೇಯಸ್ಸು ಮೌಲಾನಾ ಅಬುಲ್ ಕಲಾಂ ಆಜ಼ಾದ್ ಅವರಿಗೆ ಸಲ್ಲುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕಿ ಜುಲೇಖಾಬೇಗಂ ಮುಲ್ಲಾ ಮಾತನಾಡಿ, “ಹೆಣ್ಣುಮಕ್ಕಳ ಶಿಕ್ಷಣ ಮತ್ತು 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣಕ್ಕೆ ಒತ್ತು ನೀಡಿದ ಆಜ಼ಾದ್ ಅವರು ತಮ್ಮ ನೇತೃತ್ವದಲ್ಲಿ ಶಿಕ್ಷಣ ಸಚಿವಾಲಯುವು ದೇಶದ ಮೊದಲ ಐಐಟಿಯನ್ನು 1951ರಲ್ಲಿ ಸ್ಥಾಪಿಸಿತ್ತು. ನಂತರ 1953 ರಲ್ಲಿ ವಿಶ್ವವಿದ್ಯಾನಿಲಯ ಅನುದಾನ ಆಯೋಗವನ್ನು (ಯುಜಿಸಿ) ರಚಿಸಿದರು” ಎಂದು ತಿಳಿಸಿದರು.

“ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿಇ) ಸ್ಥಾಪಿಸುವ ಮೂಲಕ ಶಿಕ್ಷಣ ವ್ಯವಸ್ಥೆಗೆ ಮಹತ್ವದ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ ( ಐಸಿಸಿಆರ್), ಸಾಹಿತ್ಯ ಅಕಾಡೆಮಿ, ಲಲಿತ ಕಲಾ ಅಕಾಡೆಮಿ, ಸಂಗೀತ ನಾಟಕ ಅಕಾಡೆಮಿ, ಮತ್ತು ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರೀಸರ್ಚ್‌ನಂತಹ ಭಾರತದ ಸಾಂಸ್ಕೃತಿಕ ಸಂಸ್ಥೆಗಳಿಗೆ ಅವರು ಕೊಡುಗೆ ನೀಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರಾಜ್ಯದ ಜನತೆ ಟಿಪ್ಪು ಸುಲ್ತಾನ್ ಜಯಂತಿ ಹಬ್ಬದಂತೆ ಆಚರಿಸಬೇಕು : ಮಲ್ಲಿಕಾರ್ಜುನ ನೆಲೋಗಿ

ಶಮಶಾದಬೇಗಂ ಸಿಕ್ಕಲಗಾರ ಓಬವ್ವನ ಜೀವನ ಸಾಧನೆಯ ಬಗ್ಗೆ ಮಾತನಾಡಿದರು. ಮಕ್ಕಳು ಓಬವ್ವ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ವೇಷದಲ್ಲಿ ಎಲ್ಲರ ಗಮನ ಸೆಳೆದರು.

ಈ ವೇಳೆ ಶಿಕ್ಷಕರುಗಳಾದ ಎಂ ಎಂ ಇಸ್ಲಾಂಪೂರ, ಜೆ ಎಂ ಮುಲ್ಲಾ, ಹಾಶಿಂಬಿ ನದಾಫ, ಎ ಎ ಮುಲ್ಲಾ, ಜೆ ಎಂ ಮೂಲಿಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...