ವಿಜಯಪುರ | ಗ್ರಾಪಂ ಸದಸ್ಯರ ಗೌರವಧನ ಹೆಚ್ಚಳಕ್ಕೆ ಶಾಸಕ ಸುನಿಲ್‌ ಗೌಡ ಪಾಟೀಲ ಒತ್ತಾಯ

Date:

ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಳ, ಪಿಂಚಣಿ, ಉಚಿತ ಬಸ್ ಪಾಸ್ ಸೇರಿದಂತೆ ನಾನಾ ಸೌಲಭ್ಯಗಳನ್ನು ಒದಗಿಸುವಂತೆ ಸದಸನದಲ್ಲಿ 15ಕ್ಕೂ ಹೆಚ್ಚು ಸಲ ಧ್ವನಿ ಎತ್ತಿರುವೆ ಎಂದು ವಿಧಾನ ಪರಿಷತ್ ಶಾಸಕ ಸುನಿಲ್ ಗೌಡ ಪಾಟೀಲ ತಿಳಿಸಿದರು.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕುಮಠೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಿದ ಗ್ರಾಮೀಣ ಗೋದಾಮು ಮತ್ತು ಎನ್‌ಆರ್‌ಎಲ್‌ಎಂ ಶೆಡ್ ಉದ್ಘಾಟಿಸಿ ಅವರು ಮಾತನಾಡಿದರು.

ಸ್ಥಳೀಯ ಸಂಸ್ಥೆಗಳ‌ ಜನಪ್ರತಿನಿಧಿಗಳ ಹಿತ ಕಾಪಾಡಲು ಬದ್ಧನಾಗಿದ್ದೇನೆ. ‌ಮುಂದೆಯೂ ಗ್ರಾಪಂ ಸದಸ್ಯರ ಪರ ಧ್ವನಿ ಎತ್ತುತ್ತೇನೆ. ಕೇರಳ ಮಾದರಿಯಲ್ಲಿ‌ ಸದಸ್ಯರಿಗೆ ಸೌಲಭ್ಯ ಒದಗಿಸಲು ಮುಂದೆಯೂ ಧ್ವನಿ ಎತ್ತುತ್ತೇನೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರ ವಿಕೇಂದ್ರೀಕರಣ ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ. ಗ್ರಾಪಂ ಸದಸ್ಯರು ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಗ್ರಾಮ‌ ಸ್ವರಾಜ್ಯ ಕನಸು ನನಸಾಗಲು ಮಾದರಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಜ.25ರಂದು ರಾಷ್ಟೀಯ ಮತದಾರರ ದಿನಾಚರಣೆ

ಈ ಸಂದರ್ಭದಲ್ಲಿ ಗ್ರಾಪಂ ಮತ್ತು ಪಿಕೆಪಿಎಸ್ ಅಧ್ಯಕ್ಷ ಸಂಗಪ್ಪ ಗು. ಮಮದಾಪುರ, ಉಪಾಧ್ಯಕ್ಷೆ ಸಾಂಯವ್ವ ಯ. ಹಿರೇಕುರಬರ, ಮುಖಂಡ ಮಹೇಶಗೌಡ ಪಾಟೀಲ, ಬಬಲೇಶ್ವರ ತಾಪಂ ಇಒ ಜುಬೇರ್ ಅಹ್ಮದ್ ಪಠಾಣ, ಪಿಡಿಒ ಅಶೋಕ ಸಿ ಕೋಟ್ಯಾಳ, ಗ್ರಾಪಂ ಸದಸ್ಯರು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...