ನನ್ನ ಭಾರತ ನನ್ನ ಮತ -ಭಾರತೀಯ ಪ್ರಜಾಪ್ರಭುತ್ವದ ಹೃದಯದಲ್ಲಿ ಭಾರತೀಯ ನಾಗರಿಕ ಎಂಬ ಘೋಷ ವಾಕ್ಯದಡಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಿವ ಉದ್ದೇಶದಿಂದ ಜ.25ರಂದು ರಾಷ್ಟೀಯ ಮತದಾರರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮಾ ಹೇಳಿದರು.
ರಾಷ್ಟೀಯ ಮತದಾನ ದಿನದ ಹಿನ್ನಲೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷೆತೆ ವಹಿಸಿ ಮಾತನಾಡಿದ ಅವರು, ಯುವಕರಲ್ಲಿ ಮತದಾನದ ಜಾಗೃತಿ ಮೂಡಿಸಲು ಮತದಾನದ ಮಹತ್ವ ತಿಳಿಸಲು ಕಾರ್ಯಕ್ರಮವನ್ನು ಬೂತ್ ಮಟ್ಟದಲ್ಲಿ, ತಾಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ಯಶಸ್ವಿಯಾಗಿ ಆಯೋಜಿಸಬೇಕು. ಯುವ ಮತದಾರರರನ್ನು ಆಹ್ವಾನಿಸಿ, ಅವರು ಹೊಸದಾಗಿ ನೋಂದಾಯಿಸಿಕೊಂಡಿರುವ ಮತದಾರರ ಗುರುತಿನ ಚೀಟಿ ವಿತರಿಸಬೇಕು ಎಂದು ಸೂಚಿಸಿದರು.
ಮತದಾನದ ಜಾಗೃತಿಗಾಗಿ ವಿವಿಧ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಬೇಕು. ಜ.25ರಂದು ನಗರದ ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ರಾಷ್ಟ್ರೀಯ ಮತದಾರ ದಿನವನ್ನು ಯಶಸ್ವಿಯಾಗಿ ಆಚರಿಸಲು ಅಗತ್ಯ ರೂಪುರೇಷೆ ಸಿದ್ದಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಇದನ್ನೂ ಓದಿ: ವಿಜಯಪುರ | ಆಲಮಟ್ಟಿಯಲ್ಲಿ 25 ತೊಲೆ ಬಂಗಾರ ಕಳವು; ಪ್ರಕರಣ ದಾಖಲು
ಜ. 23ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಚೇರಿ ಮತ್ತು ಅಧೀನ ಕಚೇರಿಗಳಲ್ಲಿ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಬೇಕು. ಈ ಬಗ್ಗೆ ಛಾಯಾಚಿತ್ರಗನ್ನು ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು.





