ವಿಜಯಪುರ | ಅಂಚೆ ಜನ ಸಂಪರ್ಕ ಅಭಿಯಾನ

Date:

ಅಂಚೆ ಇಲಾಖೆ ಜನರ ಜೀವನಾಡಿಯಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂದೇಶವನ್ನು ರವಾನಿಸುವ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂದು ಕೇಂದ್ರ ಸರ್ಕಾರ ಅಂಚೆ ಕಚೇರಿಯ ಮೂಲಕ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನರಿಗೆ ತಲುಪಿಸುವಂತಹ ಕಾರ್ಯ ನಡೆಸುತ್ತಿದೆ. ಸಾರ್ವಜನಿಕರು ಇದರ ಲಾಭವನ್ನು ಪಡೆಯಬೇಕು ಎಂದು ವಿಜಯಪುರದ ಅಂಚೆ ಅಧಿಕಾರಿ ಜಿ ಬಿ ನಾಯಕ್ ಹೇಳಿದರು.

ವಿಜಯಪುರ ಪಟ್ಟಣದ ಅಳ್ಳಳ್ಳಿ ಮಠದಲ್ಲಿ ಶುಕ್ರವಾರ ಅಂಚೆ ಇಲಾಖೆ ವಿಜಯಪುರ ವಿಭಾಗ ಹಾಗೂ ಸಿಂದಗಿ ಉಪವಿಭಾಗದ ಸಹಯೋಗದಲ್ಲಿ ಏರ್ಪಡಿಸಿದ್ದ ಅಂಚೆ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.

“ಕೇಂದ್ರ ಸರ್ಕಾರ ಉತ್ತಮ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಪಂಚ ಸೇವೆಯನ್ನು ಮನೆಯ ಬಾಗಿಲಿಗೆ ಕೊಂಡೊಯ್ಯುವುದರ ಜೊತೆಗೆ ಉಳಿತಾಯ ಖಾತೆ ತೆರೆಯುವಿಕೆ, ಐಪಿಬಿಪಿ ಖಾತೆ ತೆರೆಯುವಿಕೆ, ಆಧಾರ್ ನೋಂದಣಿ ತಿದ್ದುಪಡಿ, ಜೋಡಣೆ, ಮೈ ಸ್ಟಾಂಪ್ ಮೈಲ್ಸ್, ಅಂಚೆ ಜೀವನ ವಿಮೆ ಹಾಗೂ ಹೆಣ್ಣು ಮಕ್ಕಳಿಗಾಗಿ ಸುಕನ್ಯಾ ಸಮೃದ್ಧಿ ಯೋಜನೆಗಳಂತಹ ಅನೇಕ ಯೋಜನೆಗಳನ್ನು ಜಾರಿಗೆ ತಂದಿರುವ ಕಾರಣ ಸಾರ್ವಜನಿಕರು ಅಂಚೆ ಇಲಾಖೆಯೊಂದಿಗೆ ಕೈಜೋಡಿಸಿ ಭವಿಷ್ಯದ ಜೀವನಕ್ಕೆ ಬಲ ತುಂಬಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎ ಕೆ ನಂದಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಎನ್‌ ಎಸ್ ದೇವರುಮನಿ ಮಾತನಾಡಿ, “ರಾಷ್ಟ್ರದಲ್ಲಿ ಅಂಚೆ ಇಲಾಖೆ ಈ ಮೊದಲು ಸಂಪರ್ಕ ಸಾಧನೆಗೆ ಮಾತ್ರ ಸೀಮಿತವಾಗಿತ್ತು. ಇದೀಗ ನೂರಕ್ಕೂ ಹೆಚ್ಚು ಸೇವೆಗಳನ್ನು ಒದಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡುತ್ತಿರುವುದು ಬಹಳ ಹೆಮ್ಮೆಯ ವಿಷಯ, ಸಾರ್ವಜನಿಕರು ಅಂಚೆ ಇಲಾಖೆಯ ಲಾಭ ಪಡೆದುಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಿಂಗ್‌ ರೋಡ್‌ಗಾಗಿ ಮನೆಗಳ ತೆರವು ಕಾರ್ಯಾಚರಣೆ; ನಿಷೇಧಾಜ್ಞೆ ಜಾರಿ

ಅಳ್ಳಳ್ಳಿ ಮಠದ ಶ್ರೀಶೈಲಯ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಪಟ್ಟಣ ಪಂಚಾಯಿತಿ ಸದಸ್ಯ ಭಾಗ್ಯವಂತ ಆಲ್ಮೇಲ್ಕರ್, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕ ಘಟಕದ ಅಧ್ಯಕ್ಷ ಸೈಯದ್ ದೇವರಮನಿ, ಸಿಂದಗಿ ಅಂಚೆ ಉಪವಿಭಾಗದ ನಿರೀಕ್ಷಕ ಮಹಾಂತೇಶ ಕುಕರ್ಣಿ, ಆಲಮೆಲ ಸಾಕಾ ಅಂಚೆ ಪಾಲಕ ವಿಐ ಪಾಟೀಲ್, ಮೇಲ್ವಿಚಾರಕ ಮನೋಹರ್ ಪೊಳ್ಳೆ, ಅಂಗನವಾಡಿ ಶಿಕ್ಷಕಿ ಲಕ್ಷ್ಮಿ ಸೇರಿದಂತೆ ಇತರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...