ವಿಜಯಪುರ ಜಿಲ್ಲೆಯ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಜನವರಿ 19ರಿಂದ 24ರವರೆಗೆ ಅರೇಬಿಕ್ ಪರೀಕ್ಷೆಗಳು ನಡೆಯಲಿವೆ. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಆನಂದ ಕೆ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ 9ರಿಂದ ಪರೀಕ್ಷೆ ಮುಗಿಯುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ, ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಝೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಕೇಂದ್ರಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.
ಜಿಲ್ಲೆಯ ತಾಳಿಕೋಟೆ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳ ಸಿದ್ಧತೆಗಾಗಿ ಜನವರಿ 19ರಂದು ತಹಶೀಲ್ದಾರ್ ವಿನಯಾ ಹೂಗಾರ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಗಳು ನಡೆಯಲಿವೆ.
ಈ ಸುದ್ದಿ ಓದಿದ್ದೀರಾ? ಹಾವೇರಿ | ಸ್ಮಶಾನ ಭೂಮಿಗೆ, ಡಾ. ಬಾಬು ಜಗಜೀವನ ರಾಮ ಭವನಕ್ಕೆ ಜಮೀನು ನೀಡಲು ಮನವಿ
ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಕುರಿತು ಚರ್ಚಿಸಲು ಪಟ್ಟಣದ ಗಣ್ಯರ ಸಭೆ ಬೆಳಿಗ್ಗೆ 11ಕ್ಕೆ, ಜನವರಿ 21ರಂದು ನಡೆಯರುವ ಅಂಬಿಗರ ಚೌಡಯ್ಯ ಮಧ್ಯಾಹ್ನ 3ಕ್ಕೆ ಹಾಗೂ ಜ.25ರಂದು ಆಚರಿಸುವ ಸವಿತಾ ಮಹರ್ಷಿ ಅವರ ಜಯಂತಿ ಕುರಿತು ಚರ್ಚಿಸಲು ಆಯಾ ಸಮಾಜಗಳ ಪ್ರಮುಖರ ಹಾಗೂ ಗಣ್ಯರ ಸಭೆ ನಡೆಯಲಿದೆ. ಎಲ್ಲರೂ ಸಕಾಲಕ್ಕೆ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.





