ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟಗಾರರ ಬಿಡುಗಡೆ: ಮೆರವಣಿಗೆ ಮೂಲಕ ವಿಜಯೋತ್ಸವ

Date:

ವಿಜಯಪುರದಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ(ಪಿಪಿಪಿ) ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆದ ಹೋರಾಟದಲ್ಲಿ ಬಂಧಿತರಾಗಿದ್ದ ಆರು ಮಂದಿ ಹೋರಾಟಗಾರರಿಗೆ ಜಾಮೀನು ಸಿಕ್ಕಿದ್ದು, ಇಂದು ಸಂಜೆ ಬಿಡುಗಡೆಯಾಗುತ್ತಿದ್ದಂತೆ ಮೆರವಣಿಗೆ ಮೂಲಕ ವಿಜಯೋತ್ಸವ ಆಚರಿಸಲಾಗುತ್ತಿದೆ.

ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ(ಪಿಪಿಪಿ) ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆದ ಹೋರಾಟದಲ್ಲಿ ಬಂಧಿತರಾಗಿದ್ದ ಆರು ಮಂದಿ ಹೋರಾಟಗಾರರಿಗೆ ಮಂಗಳವಾರ ವಿಜಯಪುರ ಜಿಲ್ಲಾ ಸೇಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

“ಜಾಮೀನು ನೀಡಿದ ಆದೇಶ ಪ್ರತಿ ಮಂಗಳವಾರ ಲಭಿಸದ ಕಾರಣ ಬಿಡುಗಡೆ ಸಾಧ್ಯವಾಗಲಿಲ್ಲ. ಹಾಗಾಗಿ ಜನವರಿ 14ರ ಇಂದು ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ದರ್ಗಾ ಜೈಲಿನಿಂದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ಮಾಡಿ, ವಿಜಯೋತ್ಸವ ನಡೆಸಲಾಗುತ್ತಿದೆ ಎಂದು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಸಮಿತಿ ಸದಸ್ಯ ಎಚ್ ಟಿ ಭರತ್ ಕುಮಾರ್” ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಹಿನ್ನೆಲೆ

ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ(ಪಿಪಿಪಿ) ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿದ್ದ ಹೋರಾಟದಲ್ಲಿ ಜನವರಿ 1ರಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ನಡೆದ ತಳ್ಳಾಟದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಅನಿಲ ಹೊಸಮನಿ, ಅರವಿಂದ ಕುಲಕರ್ಣಿ, ಬಿ ಭಗವಾನರೆಡ್ಡಿ, ಭೋಗೇಶ ಸೊಲ್ಲಾಪುರ, ಸಿದ್ದರಾಮಯ್ಯ ಹಳ್ಳೂರ ಹಾಗೂ ಹುಣಶ್ಯಾಳದ ಸಂಗನಬಸವ ಸ್ವಾಮೀಜಿಯವರು ಬಂಧಿತರಾಗಿ ಜೈಲು ಪಾಲಾಗಿದ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಹೋರಾಟ: ದಮನದ ನೆರಳಿನಲ್ಲಿ ನ್ಯಾಯದ ಹುಡುಕಾಟ

ಇದೇ ಪ್ರಕರಣದಲ್ಲಿ ಇನ್ನೂ 21 ಮಂದಿ ಹೋರಾಟಗಾರರ ವಿರುದ್ಧ ಕೊಲೆಯತ್ನ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ ಜಿಲ್ಲಾ ಪೊಲೀಸ್ ಹಾಗೂ ಸರ್ಕಾರದ ವಿರುದ್ಧ ವ್ಯಾಪಕ ವಿರೋಧ, ಟೀಕೆ ವ್ಯಕ್ತವಾಗಿತ್ತು.

ಹೋರಾಟದ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಿಜಯಪುರಕ್ಕೆ ಜನವರಿ 9ರಂದು ಭೇಟಿ ನೀಡಿ, ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮತ್ತು ಪಿಪಿಪಿ ಕೈಬಿಟ್ಟಿರುವುದಾಗಿ ಘೋಷಣೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...