ವಿಜಯಪುರ | ದೇಶಪ್ರೇಮದ ಹೊಸ ಅರ್ಥವೇ ಸಂಗೊಳ್ಳಿ ರಾಯಣ್ಣ: ಪ್ರೊ. ವಿಜಯ ಕೋರಿಶೆಟ್ಟಿ

Date:

ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಧೈರ್ಯವಾಗಿ ಹೋರಾಡಿದ ರಾಯಣ್ಣ ಅವರು ಕೇವಲ ಒಬ್ಬ ಯೋಧನಲ್ಲ, ಸ್ವಾತಂತ್ರ‍್ಯ, ಸ್ವಾಭಿಮಾನ ಮತ್ತು ನ್ಯಾಯದ ಸಂಕೇತವಾಗಿದ್ದರು. ಅವರು ದೇಶಪ್ರೇಮಕ್ಕೆ ಹೊಸ ಅರ್ಥ ಕಲ್ಪಿಸಿದವರು ಎಂದು ವಿಜಯಪುರ ಅಕ್ಕಮಹಾದೇವಿ ವಿವಿ ಕುಲಪತಿ ಪ್ರೊ ವಿಜಯಾ ಕೋರಿಶೆಟ್ಟಿ ಹೇಳಿದರು.

ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಿಂದುಳಿದ ವರ್ಗಗಳ ಕೋಶದ ವತಿಯಿಂದ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಬಲಿದಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗಮಾಡಿ ದೇಶಭಕ್ತಿಗೆ ಹೊಸ ಅರ್ಥ ನೀಡಿದ ಅವರ ಬಲಿದಾನವು ಭಾರತೀಯ ಸ್ವಾತಂತ್ರ‍್ಯ ಹೋರಾಟದ ಇತಿಹಾಸದಲ್ಲಿ ಅಮರವಾಗಿ ಉಳಿದಿದೆ. ರಾಯಣ್ಣ ಅವರ ಜೀವನ ನಮಗೆ ಧೈರ್ಯ, ನಿಷ್ಠೆ ಮತ್ತು ಮೌಲ್ಯಾಧಾರಿತ ಹೋರಾಟದ ಪಾಠವನ್ನು ಕಲಿಸುತ್ತದೆ. ಅನ್ಯಾಯದ ವಿರುದ್ಧ ಹೋರಾಡಲು ಅಧಿಕಾರ, ಸ್ಥಾನ ಅಥವಾ ಸಂಪತ್ತಿನ ಅಗತ್ಯವಿಲ್ಲ; ದೃಢ ಸಂಕಲ್ಪ ಮತ್ತು ದೇಶಪ್ರೇಮ ಸಾಕು ಎಂಬುದನ್ನು ಅವರು ತಮ್ಮ ಬದುಕಿನ ಮೂಲಕ ಸಾಬೀತುಪಡಿಸಿದ್ದಾರೆ. ವಿಶೇಷವಾಗಿ ಯುವ ಪೀಳಿಗೆಗೆ ರಾಯಣ್ಣ ಅವರ ತ್ಯಾಗ ಸ್ಪೂರ್ತಿದಾಯಕವಾಗಿದ್ದು, ಸಮಾಜದ ಒಳಿತಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸಲು ಪ್ರೇರಣೆ ನೀಡುತ್ತದೆ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಶರಣರ ವಿಚಾರಗಳು ಸಾರ್ವಕಾಲಿಕ ಸತ್ಯ: ವಿರಕ್ತ ಮಠದ ಸಿದ್ದಲಿಂಗ ಮಹಾಸ್ವಾಮಿ

ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣವರ, ಹಿಂದುಳಿದ ವರ್ಗಗಳ ಕೋಶದ ಸಂಯೋಜಕ ಡಾ.ಶ್ರೀನಿವಾಸ, ಪ್ರಾಧ್ಯಾಪಕರಾದ ಪ್ರೊ. ಪಿ ಜಿ ತಡಸದ, ಪ್ರೊ. ಓಂಕಾರ ಕಾಕಡೆ, ಪ್ರೊ. ರಾಜಕುಮಾರ ಮಾಲಿಪಾಟಿಲ್, ಡಾ. ಬಾಬು ಲಮಾಣಿ, ಪ್ರೊ. ಜ್ಯೋತಿ ಉಪಾಧ್ಯ ಮತ್ತು ವಿಶ್ವವಿದ್ಯಾನಿಲಯದ ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂದಗಿ | ಇಂದಿನ ಯುವಕರಿಗೆ ಕೌಶಲ್ಯ ಅತ್ಯಗತ್ಯ: ಫಾ.ಸಂತೋಷ್

ಇಂದಿನ ಯುವಕ ಯುವತಿಯರು ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಅದು ಅತ್ಯಗತ್ಯವೂ ಆಗಿದೆ ಎಂದು...

ವಿಜಯಪುರ | ಮಹಿಳಾ ಕೇಂದ್ರೀಕೃತ ಪುಸ್ತಕ ಪ್ರದರ್ಶನ ಮಹಿಳೆಯರ ಸಾಧನೆಗಳನ್ನು ತೋರಿಸುತ್ತದೆ: ಪ್ರೊ. ವಿಜಯ ಕೋರಿಶೆಟ್ಟರ್

ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು...

ವಿಜಯಪುರ | ಪ್ರಗತಿ ಹಂತದ ಮನರೇಗಾ ಕಾಮಗಾರಿಗಳು ಕೂಡಲೇ ಪೂರ್ಣಗೊಳ್ಳಬೇಕು: ಪ್ರಕಾಶ ವಡ್ಡರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ)ಯಡಿ ಪ್ರಗತಿ ಹಂತದಲ್ಲಿರುವ ಎಲ್ಲ...

ವಿಜಯಪುರ | ಬಸ್ ನಿಲ್ದಾಣಗಳ ಎಲ್‌ಇಡಿ ಪರದೆ ಮೇಲೆ ಬಜೆಟ್ ನೇರ ಪ್ರಸಾರ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ರಸ್ತೆ ಸಾರಿಗೆ...