ವಿಜಯಪುರ | ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ ಕಾರ್ಯಕ್ರಮ

Date:

ಇಂದಿನ ವಿದ್ಯಾರ್ಥಿ, ಯುವಜನರಿಗೆ ನೇತಾಜಿಯವರ ಜೀವನ ಚರಿತ್ರೆ ಆದರ್ಶವಾಗಬೇಕು ಎಂದು ಎಐಡಿವೈಒ ಮುಖಂಡ ಸಿದ್ದಲಿಂಗ ಬಾಗೇವಾಡಿ ಹೇಳಿದ್ದಾರೆ.

ವಿಜಯಪುರದ ಹುತಾತ್ಮ ಸರ್ಕಲ್ ಮತ್ತು ಸರ್ಕಾರಿ ಐಟಿಐ ಕಾಲೇಜ್‌ನಲ್ಲಿ ನಡೆದ ಸುಭಾಷ್‌ ಚಂದ್ರ ಬೋಸ್‌ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನೇತಾಜಿಯವರು ಜೀವನದುದ್ದಕ್ಕೂ ಸಂಧಾನತೀತವಾಗಿ ಬ್ರಿಟೀಷರ ವಿರುದ್ಧ ಹೋರಾಟ ಮಾಡಿದರು. ಎರಡು ಬಾರಿ ಕಾಂಗ್ರೆಸ್ ಸಮ್ಮೇಳನದ ಅಧ್ಯಕ್ಷರಾಗಿದ್ದ ಅವರು, ಪೂರ್ಣ ಸ್ವರಾಜ್ಯ ಹಾಗೂ ಕಾರ್ಮಿಕ ವರ್ಗ ಅಧಿಕಾರಕ್ಕೆ ಬರಬೇಕೆಂಬ ಸ್ಪಷ್ಟವಾದ ನಿಲುವನ್ನು ವ್ಯಕ್ತಪಡಿಸಿದ್ದರು” ಎಂದು ತಿಳಿಸಿದರು.

“ಸುಭಾಷ್‌ ಚಂದ್ರ ಬೋಸರು ಕಾಂಗ್ರೆಸ್‌ನಲ್ಲಿದ್ದುಕೊಂಡೇ ಹಲವಾರು ಸಂಧಾನತೀತ ಹೋರಾಟಗಳನ್ನು ಮುಂದುವರಿಸಿದರು. ಕೊನೆಗೆ ಕಾಂಗ್ರೆಸ್‌ನಿಂದ ಹೊರಬಂದು ದೇಶದುದ್ದಕ್ಕೂ ವಿದ್ಯಾರ್ಥಿ ಯುವಜನರನ್ನು ಒಂದುಗೂಡಿಸಿ ಸೈದ್ಧಾಂತಿಕವಾಗಿ ಬ್ರಿಟಿಷ್‌ ವಿರುದ್ಧ ಹೋರಾಟ ಕಟ್ಟಿದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೇತಾಜಿಯವರ ದೃಷ್ಟಿಯಲ್ಲಿ ಧರ್ಮವನ್ನು ರಾಜಕೀಯದಿಂದ ಸಂಪೂರ್ಣವಾಗಿ ಹೊರಗಿಡಬೇಕು. ಧರ್ಮ ವ್ಯಕ್ತಿಯೊಬ್ಬರ ವೈಯಕ್ತಿಕ ವಿಷಯವಾಗಿರಬೇಕು. ಮಾನವನಾಗಿ ಯಾವುದೇ ಒಬ್ಬ ವ್ಯಕ್ತಿಯು ತನ್ನ ಇಚ್ಛೆಯ ಯಾವುದೇ ಧರ್ಮವನ್ನು ಅನುಸರಿಸಲು ಸಂಪೂರ್ಣ ಸ್ವಾತಂತ್ರ್ಯ ಇರಬೇಕು. ಆದರೆ ದುರಂತ ಇಂದು ಬಹುತೇಕ ರಾಜಕೀಯ ಪಕ್ಷಗಳು ಅಭಿವೃದ್ಧಿ ಕೆಲಸಗಳನ್ನು ಮಾಡಿ ಚುನಾವಣೆ ಗೆಲ್ಲುವ ಬದಲು ಧರ್ಮವನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ” ಎಂದರು.

ಸರ್ಕಾರಿ ಐಟಿಐ ಕಾಲೇಜ್‌ನ ಪ್ರಾಚಾರ್ಯ ರಮೇಶ ದೇಸಾಯಿ ಮಾತನಾಡಿ, “ಇಂದಿನ ವಿದ್ಯಾರ್ಥಿಗಳು ನೈತಿಕ, ಸಾಮಾಜಿಕ, ರಾಜಕೀಯ ಮೌಲ್ಯಗಳನ್ನು ಕಳೆದುಕೊಂಡಿದ್ದಾರೆ. ಇಂತಹ ಮಹಾನ್ ಕ್ರಾಂತಿಕಾರಿಗಳನ್ನು ಅಧ್ಯಯನ ಮಾಡುವ ಮೂಲಕ ಪ್ರತಿಯೊಬ್ಬರು ಉನ್ನತ ವಿಚಾರ ಮತ್ತು ಉನ್ನತ ಮೌಲ್ಯ, ಸಾಂಸ್ಕೃತಿಕ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ರವಿ ಖೇಡಗಿ, ಮಹಾಂತೇಶ ಭಜಂತ್ರಿ, ಡಿ.ಎನ್. ಬಿರಾದಾರ, ಎಂ.ವಿ, ತಾವರಖೇಡ, ಸಂಘಟನಕಾರರಾದ ರಮೇಶ ಹೊಸಮನಿ, ಅನುರಾಗ ಸಾಳುಂಕೆ, ಮಾಂತೇಶ ನಾಯಕೋಡಿ, ಎಐಡಿವೈಒ ಜಿಲ್ಲಾಧ್ಯಕ್ಷರಾದ ಶ್ರೀಕಾಂತ ಕೊಂಡಗೂಳಿ ಮುಂತಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...