ವಿಜಯಪುರ ವಿಮಾನ ನಿಲ್ದಾಣಕ್ಕೆ ಅಡ್ಡಿ ನಿವಾರಣೆ: ಕಾರ್ಯಾರಂಭದ ಸುಳಿವು ನೀಡಿದ ಎಂ ಬಿ ಪಾಟೀಲ್

Date:

ಸಾರ್ವಜನಿಕ ಮಹತ್ತ್ವದ ಯೋಜನೆಗಳಿಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಗಳು ಪೂರ್ವಾನ್ವಯವಾಗುವಂತೆ ಅನುಮೋದನೆಗಳನ್ನು ನೀಡಬಾರದೆಂದು ಈ ವರ್ಷದ ಮೇ ತಿಂಗಳಲ್ಲಿ ತಾನು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಹಿಂಪಡೆದುಕೊಂಡಿದೆ.

ಈ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್‌ ಬೆಂಗಳೂರಿನಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ್ದು, “ಸುಪ್ರೀಂ ಕೋರ್ಟ್‌ ಆದೇಶ ಸ್ವಾಗತಾರ್ಹವಾಗಿದೆ. ಇದರಿಂದಾಗಿ, ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಇದ್ದ ಅಡೆತಡೆ ಬಹುಮಟ್ಟಿಗೆ ನಿವಾರಣೆಯಾಗಿದ್ದು, ನಿರೀಕ್ಷೆಯಂತೆ ಎಲ್ಲವೂ ಸುಗಮವಾಗಿ ನಡೆದರೆ ಯುಗಾದಿ ವೇಳೆಗೆ ಈ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡುವ ವಿಶ್ವಾಸ ಇದೆ” ಎಂದು ಹೇಳಿದ್ದಾರೆ.

“ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಆದರೆ, ಸುಪ್ರೀಂಕೋರ್ಟಿನಲ್ಲಿದ್ದ ಪರಿಸರ ಸಂಬಂಧಿ ಪ್ರಕರಣದಿಂದಾಗಿ ಏನೂ ಮಾಡುವಂತಿರಲಿಲ್ಲ. ಸುಪ್ರೀಂಕೋರ್ಟಿನ ನಿರ್ಧಾರದಿಂದ ಈಗ ಒಂದು ಹೆಜ್ಜೆ ಮುಂದಕ್ಕೆ ಬಂದಿದ್ದೇವೆ. ಈ ವಿಚಾರ ಈಗಲೂ ನ್ಯಾಯಾಂಗದ ವಿಚಾರಣೆಯಲ್ಲಿದೆ ಎನ್ನುವ ಅರಿವಿದೆ. ಆದರೂ ಇವತ್ತಿನ ನಿಲುವು ನಮ್ಮ ಕಿತ್ತೂರು ಕರ್ನಾಟಕ ಭಾಗಕ್ಕೆ ನಿರಾಳತೆ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಮಾತನಾಡಿ, “ಈ ಹಿಂದಿನ ತೀರ್ಪಿನಿಂದ ವಿಮಾನ ನಿಲ್ದಾಣದ ಅಸ್ತಿತ್ವಕ್ಕೆ ಅಪಾಯ ಎದುರಾಗಿತ್ತು. ಆದರೆ, ಸಚಿವ ಎಂ ಬಿ ಪಾಟೀಲರು ತ್ವರಿತವಾಗಿ ಕ್ರಿಯಾಶೀಲರಾಗಿ, ಕಪಿಲ್ ಸಿಬಲ್ ಅವರಂತಹ ಹಿರಿಯ ನ್ಯಾಯವಾದಿಯನ್ನು ನೇಮಿಸಿಕೊಳ್ಳುವ ಮೂಲಕ ವಿಮಾನ ನಿಲ್ದಾಣಕ್ಕೆ ಪುನರ್ಜನ್ಮ ನೀಡಿದ್ದಾರೆ’ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...