ವಿಜಯಪುರ | ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣಕ್ಕೆ ಅರ್ಜಿ ಆಹ್ವಾನ

Date:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿ ನಿರ್ದೇಶನದ ಮೇರೆಗೆ ವಿಜಯಪುರ ಜಿಲ್ಲಾ ಘಟಕದಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಆಯಾ ತಾಲೂಕಿನ ಸದಸ್ಯರು ತಮ್ಮ ತಾಲೂಕಿನ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ ಮೂಲಕ ಅರ್ಜಿ ಪಡೆದು ಅವರಿಗೇ ಸಲ್ಲಿಸಲು ಈ ಮೂಲಕ ತಿಳಿಸಲಾಗಿದೆ. ವಿಜಯಪುರ ನಗರ ವ್ಯಾಪ್ತಿಯ ಪತ್ರಕರ್ತರು ನಗರದ ಜಿಪಂ ರಸ್ತೆಯ ಪತ್ರಿಕಾ ಭವನದಲ್ಲಿ ಮಾ.2 ಸೋಮವಾರದಿಂದ ಪ್ರತಿದಿನ (ಮಾರ್ಚ್ ಬುಧವಾರ ಹೊರತುಪಡಿಸಿ) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಅರ್ಜಿ ಪಡೆಯಲು ಅವಕಾಶವಿದೆ. ಮಾ.8 ಕೊನೆಯ ದಿನ.

ಅರ್ಜಿ ನವೀಕರಣ ಅಥವಾ ನೂತನ ಸದಸ್ಯತ್ವ ಪಡೆಯಲು ಹಿಂದಿನ ವರ್ಷದ ಸಂಘದ ಕಾರ್ಡ್, ಸಂಪಾದಕರು ಅಥವಾ ಮಾಧ್ಯಮ ಸಂಸ್ಥೆಗಳು ನೀಡಿದ ಆದೇಶ ಪ್ರತಿ, ಆಧಾರ್‌ಕಾರ್ಡ್, ಎರಡು ಭಾವಚಿತ್ರ ಮತ್ತು ₹510 ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬೇಕು. ತಾಲೂಕು ಮಟ್ಟದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಆಯಾ ತಾಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಪದಾಧಿಕಾರಿಗಳು ಪರಾಮರ್ಶೆ ನಡೆಸಿ ಮಾ.10ರೊಳಗೆ ಅರ್ಜಿ ಮತ್ತು ಶುಲ್ಕದ ಮೊತ್ತವನ್ನು ಜಿಲ್ಲಾ ಸಮಿತಿಗೆ ರವಾನಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ ಸಮಗ್ರ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

ಹೊಸದಾಗಿ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಬೇಕು. ಜತೆಗೆ ಕನಿಷ್ಠ ಎರಡು ವರ್ಷ ಸೇವಾನುಭವ ಹೊಂದಿರುವ ಕುರಿತು ಸಂಸ್ಥೆಗಳಿಂದ ದೃಢೀಕರಣ ಪತ್ರ ಸಲ್ಲಿಸಬೇಕು. ಸದಸ್ಯತ್ವ ನೀಡುವ ವಿಚಾರದಲ್ಲಿ ರಾಜ್ಯ ಸಮಿತಿ ಸೂಚಿಸಿದ ಎಲ್ಲಾ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮತ್ತು ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರಕಾಶ ಬೆಣ್ಣೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...