ವಿಜಯಪುರ | ಅಂಗಾಂಗ ದಾನಿ ಬಲರಾಮ ಕುಟುಂಬಕ್ಕೆ ಬಿಎಲ್‌ಡಿಇ ಬೆಂಬಲ

Date:

ಅಂಗಾಂಗ ದಾನ ಮಾಡಿದ ದಿ. ಬಲರಾಮ ಕೃಷ್ಣ ಬಾಗಲಕೋಟೆ ಅವರ ಕುಟುಂಬದ ಒಬ್ಬರಿಗೆ ಶಿಕ್ಷಣ ಅಥವಾ ಉದ್ಯೋಗ ಒದಗಿಸುವುದಾಗಿ ಬಿಎಲ್‌ಡಿಇ ಸಂಸ್ಥೆ ನಿರ್ಧರಿಸಿದೆ. ಜೊತೆಗೆ ಕುಟುಂಬಕ್ಕೆ ಬಿಎಲ್‌ಡಿಇ ಆಸ್ಪತ್ರೆಯಿಂದ ಎಲ್‌ ಕಾರ್ಡ್ ಸೌಲಭ್ಯ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಿಎಲ್‌ಡಿಇ ಅಧ್ಯಕ್ಷ ಎಂ ಬಿ ಪಾಟೀಲ ತಿಳಿಸಿದರು.

ವಿಜಯಪುರ ನಗರದ ಬಿಎಲ್‌ಡಿಇ ಟೀಮ್ಡ್ ವಿಶ್ವವಿದ್ಯಾಲಯದಲ್ಲಿ ಅಂಗಾಂಗ ದಾನಿ ಬಲರಾಮ ಬಾಗಲಕೋಟೆ ಅವರ ಕುಟುಂಬಕ್ಕೆ ಗೌರವ ಸಲ್ಲಿಸಿ ಮಾತನಾಡಿದ ಅವರು, “ಬಲರಾಮ ಸಾವಿನಲ್ಲೂ ಇತರರ ಬದುಕಿಗೆ ಆಸರೆಯಾಗಿದ್ದಾರೆ. ಯುವಕ ಬಲರಾಮ ಮತ್ತು ಅವರ ಕುಟುಂಬದವರ ತ್ಯಾಗ ಸ್ಮರಣೀಯ. ಅವರಿಂದಲೇ ಬಸವ ನಾಡಿನಲ್ಲಿ ಅಂಗಾಂಗ ದಾನದ ಅಭಿಯಾನ ಆರಂಭವಾಗಿದೆ” ಎಂದರು.

ʼಮಿಷನ್ ಬಲರಾಮʼ ಎಂಬ ಹೆಸರಿನಲ್ಲಿ ಅಂಗಾಂಗ ದಾನ ಜಾಗೃತಿ ಅಭಿಯಾನಕ್ಕೆ ಬಿಎಲ್‌ಡಿಇ ಸಂಸ್ಥೆ ನೇತೃತ್ವ ವಹಿಸಲಿದೆ. ತಾವೇ ಮೊದಲಿಗೆ ಅಂಗಾಂಗ ದಾನದ ವಾಗ್ದಾನ ಮಾಡುತ್ತಿರುವುದಾಗಿ ಎಂ ಬಿ ಪಾಟೀಲ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಅರುಣ ಮಾತನಾಡಿ, ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯಿಂದ ಹೃದಯ, ಶ್ವಾಸಕೋಶ, ಯಕೃತ್ತು, ಕಿಡ್ನಿ, ಪ್ಯಾನ್‌ಕ್ರಿಯಾಸ್, ಕಣ್ಣು ಗುಡ್ಡೆಗಳು, ಚರ್ಮ, ಎಲುಬು, ಹೃದಯದ ವಾಲ್ವ್‌, ರಕ್ತನಾಳಗಳು ಹಾಗೂ ಟಿಶ್ಯೂಗಳನ್ನು ದಾನ ಮಾಡಬಹುದಾಗಿದೆ. ಅಂಗಾಂಗ ದಾನ ಜನಾಂದೋಲನವಾಗಬೇಕೆಂದು ಕರೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಸೆಸ್ನಾ 172 ತರಬೇತಿ ವಿಮಾನ ಪತನ: ವಿಮಾನದಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಕಾರ್ಯಕ್ರಮದಲ್ಲಿ ಬಿಎಲ್‌ಡಿಇ ವಿವಿ ಕುಲಪತಿ ಡಾ. ಜಯರಾಜ, ಡಾ. ವಿಜಯಕುಮಾರ ಕಲ್ಯಾಣಪ್ಪ ಗೋಳ, ಡಾ. ಎಸ್ ಬಿ ಪಾಟೀಲ, ಡಾ. ತೇಜಸ್ವಿನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...