ವಿಜಯಪುರ | ಬಾಕಿ ಜಿಲ್ಲಾ ಮಾನವ ಅಭಿವೃದ್ಧಿ ಸೂಚ್ಯಂಕಗಳ ವರದಿ ಸಸಲ್ಲಿಸಲು ಸಿಇಒ ಸೂಚನೆ

Date:

ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025ಕ್ಕೆ ಸಂಬಂಧಿಸಿದಂತೆ 126 ಸೂಚ್ಯಂಕಗಳ ಪೈಕಿ 47 ಸೂಚ್ಯಂಕಗಳ ಮಾಹಿತಿಯನ್ನು ಸಲ್ಲಿಸಿದ್ದು, ಬಾಕಿ ಇರುವ 79 ಸೂಚ್ಯಂಕಗಳ ಮಾಹಿತಿಯನ್ನು ಸಲ್ಲಿಸಲು ಹಾಗೂ ಸಮಗ್ರ ಮತ್ತು ಸುಸ್ಥಿರ ಜೆಲ್ಲಾ ಅಭಿವೃದ್ಧಿ ಯೋಜನೆ-2031ಕ್ಕೆ ಸಂಬಂಧಿಸಿದಂತೆ 176 ಸೂಚ್ಯಂಕಗಳ ಪೈಕಿ 69 ಸೂಚ್ಯಂಕಗಳ ಮಾಹಿತಿಯನ್ನು ಸಲ್ಲಿಸಿದ್ದು, ಬಾಕಿ 107 ಸೂಚ್ಯಂಕಗಳ ಮಾಹಿತಿಯನ್ನು ಸಂಬಂಧಿಸಿದ ಜಿಲ್ಲಾಮಟ್ಟದ ಅಧಿಕಾರಿಗಳು ನಿಖರವಾದ ಮತ್ತು ಸ್ಪಷ್ಟವಾದ ದತ್ತಾಂಶಗಳುಳ್ಳ ವರದಿ ಸಲ್ಲಿಸಲು ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚಿಸಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-2031ರ ವರದಿ ತಯಾರಿಸುವ ಕುರಿತು ವಲಯವಾರು ಉಪಸಮಿತಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-2031ರ ವರದಿ ತಯಾರಿಕೆಗೆ ನಿಖರವಾದ ಮತ್ತು ಸ್ಪಷ್ಟವಾದ ದತ್ತಾಂಶಗಳನ್ನು ನಿಗದಿತ ನಮೂನೆಯಲ್ಲಿ ದೃಢೀಕರಿಸಿ, ವಿಳಂಬ ಮಾಡದೆ ನಿಗದಿತ ಕಾಲಾವಧಿ ಒಳಗೆ ಸಲ್ಲಿಸಲು ಅಧಿಕಾರಿಗಳಿಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಏ.10ರಿಂದ ರಾಜ್ಯಮಟ್ಟದ ಪುಸ್ತಕ ಮೇಳ

ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಯೋಜನೆ ಅಧಿಕಾರಿ ಸಿ ಬಿ ಕುಂಬಾರ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ನಾಗಭೂಷಣ ಮಾಡಗಿ, ತಾಂತ್ರಿಕ ಬೆಂಬಲ ಸಂಸ್ಥೆಯಾದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಂಯೋಜಕರಾದ ಪ್ರೊ. ಡಿ. ಎಂ. ಮದರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...