ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

Date:


ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿಯುತ್ತವೆ. ಹಾಗಾಗಿ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕೆಂದು ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಯಾಗಿ ನಡೆದಿದ್ದು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತಲ್ಲಿದ್ದ ಹಲವಾರು ಪ್ರಕರಣಗಳ ಪೈಕಿ 13624 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ. ಈ ಪೈಕಿ ಆಸ್ತಿ ವಿಭಾಗ ಕೋರಿದ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳು ಕಕ್ಷಿದಾರರು ಹಾಗೂ ನ್ಯಾಯವಾದಿಗಳ ಸಹಕಾರದಿಂದ ಇತ್ಯರ್ಥಗೊಂಡಿದ್ದು ವಿಶೇಷ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಮಾತನಾಡಿ, ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಂಡು ಪರಸ್ಪರ ಸೌಹಾರ್ದತೆಯಿಂದ ಸಮಾಜದಲ್ಲಿ ಜೀವನ ಸಾಗಿಸಬೇಕೆಂದು ಸಲಹೆ ನೀಡಿದರು.

ಇದನ್ನೂ ಓದಿ: ವಿಜಯಪುರ | ನೀರಾವರಿಗಾಗಿ ಭೂಮಿ ಕಳೆದುಕೊಂಡ ರೈತರ ಕಣ್ಣೀರು ಒರೆಸಲು ಸರ್ಕಾರ ಮುಂದಾಗಿದೆ: ಸಚಿವ ಎಂ ಬಿ ಪಾಟೀಲ

ವಿಜಯಪುರ ನಗರ ಸೇರಿದಂತೆ ಮತ್ತು ತಾಲೂಕು ಒಳಗೊಂಡು ಸುಮಾರು 08 ಜೋಡಿಗಳನ್ನು ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ವೈವಾಹಿಕ ಜೀವನ ನಡೆಸಲು ಒಪ್ಪಿಸಲಾಯಿತು. ಈ ರಾಷ್ಟ್ರೀಯ ಲೋಕ್ ಅದಾಲತನಲ್ಲಿ 1009 ಭೂ ಸ್ವಾಧೀನ ಪ್ರಕರಣಗಳ ಪೈಕಿ 386 ಪ್ರಕರಣಗಳು ಇತ್ಯರ್ಥಗೊಳಿಸಲಾಯಿತು. ಇದಕ್ಕೆ 42,28,21,328 ರೂ. ಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗಳಿಸಲಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | KPSನಡಿ ಗ್ರಾಮೀಣ ಶಾಲೆಗಳನ್ನು ಮುಚ್ಚುವುದು ಖಂಡನೀಯ: ಹಿರಿಯ ಸಾಹಿತಿ ಹ.ಮ. ಪೂಜಾರ

ರಾಜ್ಯದಲ್ಲಿ 'ಗ್ರಾಮೀಣ ಭಾಗದ ಶಾಲೆಗಳನ್ನು ಮುಚ್ಚುವುದನ್ನು ನಾವು ಖಂಡಿಸುತ್ತೇವೆ. ಎಲ್ಲೆಲ್ಲಿ ಶಾಲೆಗಳನ್ನು...