ವಿಜಯಪುರ | ಮಧ್ಯಪ್ರಾಚ್ಯ ಅಸ್ಥಿರತೆ, ವಿಮಾನಯಾನದಲ್ಲಿ ವ್ಯತ್ಯಯ; ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆ

Date:

ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ.

ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಆರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.

ಜಿಲ್ಲಾಡಳಿತದ ಕ್ರಮಗಳು: ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಾಯವಾಣಿ ಸಂಖ್ಯೆಗಳಿಗೆ ವಿಜಯಪುರ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಸಂಪರ್ಕಿಸಬಹುದು: ವಿಜಯಪುರ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 08352-221261. 222101 1077 7019682740 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070 ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.

ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಇದನ್ನೂ ಓದಿ: ವಿಜಯಪುರ | ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣಕ್ಕೆ ಅರ್ಜಿ ಆಹ್ವಾನ

ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ಸಾರಥಿ ಸಹಾಯತ (Sarthi Sahayata) ಪೋ‌ರ್ಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.

ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್ ಆರ್ ಆರ್ ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...