ವಿಜಯಪುರ | ತಿಂಗಳಿಗೆ ಒಂದೇ ಸಿಲಿಂಡರ್;‌ LPG ಮಿತ ಬಳಕೆಗೆ ಡಿಸಿ ಡಾ. ಆನಂದ ಸೂಚನೆ

Date:

ವಿಜಯಪುರ ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ (LPG) ಗ್ಯಾಸ್ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರನ್ನು 25 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಹಾಗಾಗಿ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಹೇಳಿದರು.

ಸಮರ್ಪಕ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‌ಪಿಜಿ ವಿತರಕರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದ್ದು, ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯಬೇಕು. ಎಲ್‌ಪಿಜಿ ವಿತರಣೆಯಲ್ಲಿ ಏನಾದರೂ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ,7022026569 ಅಥವಾ 9449517417 ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಕನಿಷ್ಟ ಕೂಲಿ ಜಾರಿಗೆ CITU ಒತ್ತಾಯ

ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ಹಾಗೂ ಸಂಬಂಧಿತ ನಿಯಂತ್ರಣ ಆದೇಶಗಳಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕರಿಸಿ ಗೃಹಬಳಕೆ ಗ್ಯಾಸ್ ಸಮರ್ಪಕ ವಿತರಣೆ ವ್ಯವಸ್ಥೆ ಸುಗಮವಾಗಿ ನಡೆಯಲು ಸಹಕರಿಸಬೇಕು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....