ಕುಡಿಯುವ ನೀರಿನ ಶುದ್ಧತೆ ಕುರಿತು ಮೇಲಿಂದ ಮೇಲೆ ಪರೀಕ್ಷಿಸಿ ಶುದ್ಧ ಕುಡಿಯುವ ನೀರು ದೊರಕುವಂತೆ ಕ್ರಮವಹಿಸಬೇಕು ವಿಜಯಪುರ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಸಭೆಯಲ್ಲಿ ಅವರು ಮಾತನಾಡಿದರು.
ಏಪ್ರಿಲ್ 3ರ ನಂತರ ಜಲ್ಲಿಯಲ್ಲಿರುವ ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆಗಳಿಗೆ ನೀರನ್ನು ಹರಿ ಬಿಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಬಳಸಲು ಮಾತ್ರ ಉಪಯೋಗಿಸುವಂತೆಯೂ ಹಾಗೂ ಯಾವುದೇ ಕಾರಣಕ್ಕೂ ಇತರ ಕಾರಣಕ್ಕೆ ಬಳಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾಲುವೆಗಳ ಮೇಲೆ ಪಂಪಸೆಟ್ ಇರದಂತೆ ನೋಡಿಕೊಳ್ಳಬೇಕು. ಹಗಲು ಮತ್ತು ರಾತ್ರಿ ವೇಳೆ ನಿಗಾ ವಹಿಸುವಂತೆ ಅಗತ್ಯ ಸಿಬ್ಬಂದಿ ನೇಮಿಸಬೇಕು. ಅದರೊಂದಿಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಸಹಕರಿಸುವಂತೆ” ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಈಗಿನಿಂದಲೇ ಮುಂಜಾಗ್ರತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ವಿಜಯಪುರ | ಏ.11ರಿಂದ ಅಂಬೇಡ್ಕರ್ ಹಬ್ಬ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, “ಜಿಲ್ಲೆಯ ಎಲ್ಲಾ ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರು ಹಾಗೂ ಬಿಸಿಲಿನ ಪ್ರಖರತೆಯಿಂದ ಸಾರ್ವಜನಿಕರ ಸುರಕ್ಷತೆಗಾಗಿ ಜಾಗೃತಿ ಕಾರ್ಯಕ್ರಮಗಳು ಮತ್ತು ಸಭೆಗಳನ್ನು ನಡೆಸಲಾಗಿದ್ದು, ಬೇಸಿಗೆ ಸಮಯದಲ್ಲಿ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತಿದೆ” ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ, ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ತಾಲೂಕಿನ ಎಲ್ಲಾ ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.





