ವಿಜಯಪುರ | ಅಂಬೇಡ್ಕರ್, ಸಂವಿಧಾನಕ್ಕೆ RSS ಮುಖಂಡನಿಂದ ಅವಮಾನ; ಕ್ರಮಕ್ಕೆ ಡಿವಿಪಿ ಆಗ್ರಹ

Date:

ಸಂವಿಧಾನಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ, ಸಂವಿಧಾನ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ತೋರಿರುವ ಆರ್ ಎಸ್ ಎಸ್ ಮುಖಂಡನ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಮುಖಂಡರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ನಗರದ ಜಲನಗರದ ಬಿಡಿಎ ಖಾಲಿ ಜಾಗದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೋತ್ಥಾನ ಹಿಂದೂ ಸಮ್ಮೇಳನದಲ್ಲಿ RSS ಮುಖಂಡನೊಬ್ಬ, “ಈ ದೇಶ ಎಂದರೆ ಸಂವಿಧಾನವಲ್ಲ, ರಾಷ್ಟ್ರಧ್ವಜವಲ್ಲ, ಕೇವಲ ಅಂಬೇಡ್ಕರ್ ಅಲ್ಲ” ಎಂಬ ಅತಿರೇಕದ ಮಾತನಾಡಿದ್ದಾನೆ. ಇಂತಹ ಅಪಮಾನಕರ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ. ಈ ಹೇಳಿಕೆಯು ದೇಶದ ಸಂವಿಧಾನ, ರಾಷ್ಟ್ರಧ್ವಜ ಹಾಗೂ ಈ ದೇಶದ ಮಹಾನ್ ನಾಯಕ ಅಂಬೇಡ್ಕರ್ ಅವರಿಗೆ ನೇರವಾಗಿ ಅವಮಾನ ಮಾಡುವಂತಿದ್ದು, ದೇಶದ ಏಕತೆ-ಅಖಂಡತೆಗೆ ಧಕ್ಕೆ ತರುವ ದೇಶದ್ರೋಹಿ ಮನೋಭಾವವನ್ನು ತೋರಿಸುತ್ತದೆ. ಇಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಿಷತ್ ಮುಖಂಡರು ಒತ್ತಾಯಿಸಿದ್ದಾರೆ.

ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, “RSS ಮುಖಂಡರು ಸಂವಿಧಾನ, ಅಂಬೇಡ್ಕರ್ ಹಾಗೂ ರಾಷ್ಟ್ರಧ್ವಜದ ಕುರಿತು ಈ ರೀತಿಯ ಅಗೌರವಪೂರ್ವಕ ಮಾತುಗಳನ್ನು ಆಡುವ ಮೂಲಕ ದೇಶದ ಸಮಸ್ತ ಜನತೆಗೆ, ವಿಶೇಷವಾಗಿ ಅಂಬೇಡ್ಕರ್ ಅನುಯಾಯಿಗಳಿಗೆ ತೀವ್ರ ನೋವು ಉಂಟುಮಾಡಿದ್ದಾರೆ. ಉದ್ದೇಶ ಪೂರ್ವಕವಾಗಿ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಹಾಳುಮಾಡುವ ಪ್ರಯತ್ನ ಮಾಡಿರುವುದು ಗಂಭೀರ ಅಪರಾಧವಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕಾರ್ಯಕ್ರಮದ ಜವಾಬ್ದಾರಿ ವಹಿಸಿಕೊಂಡವರ ವಿರುದ್ಧ ಹಾಗೂ ದೇಶಕ್ಕೆ, ದೇಶದ ಮಹಾನ್ ನಾಯಕರಿಗೆ ಅಪಮಾನವಾಗುವ ರೀತಿಯಲ್ಲಿ ಭಾಷಣ ಮಾಡಿದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ | ದೇಶಪ್ರೇಮದ ಹೊಸ ಅರ್ಥವೇ ಸಂಗೊಳ್ಳಿ ರಾಯಣ್ಣ: ಪ್ರೊ. ವಿಜಯ ಕೋರಿಶೆಟ್ಟಿ

“ಜಿಲ್ಲಾಡಳಿತ ಈ ವಿಚಾರದಲ್ಲಿ ತಕ್ಷಣ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಜಿಲ್ಲೆಯ ಪ್ರಗತಿಪರ, ದಲಿತ, ಕನ್ನಡಪರ, ರೈತ, ಕಾರ್ಮಿಕ, ವಿದ್ಯಾರ್ಥಿ ಹಾಗೂ ಯುವಜನಪರ ಎಲ್ಲ ಸಂಘಟನೆಗಳ ನೇತೃತ್ವದಲ್ಲಿ ವ್ಯಾಪಕ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರಾದ ಮಾದೇಶ ಚಲವಾದಿ, ಪ್ರತಾಪ, ಸಿದ್ದು, ಮಹಾಂತೇಶ್, ಹುಚ್ಚಪ್ಪ, ಸಿದ್ದಾರ್ಥ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...