ಕರ್ನಾಟಕ ಬುಡಕಟ್ಟು ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೂಲ ಆದಿವಾಸಿಗಳ ಅಧ್ಯಯನ ಕೇಂದ್ರ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ (ಯುಜಿ ಅಧ್ಯಯನ ವಿಭಾಗ) ಇವರ ಸಂಯುಕ್ತ ಆಶ್ರಯದಲ್ಲಿ ʼಉತ್ತರ ಕರ್ನಾಟಕ ಪ್ರದೇಶದಲ್ಲಿ ಬುಡಕಟ್ಟು ಮಹಿಳಾ ಸಬಲೀಕರಣ: ಸಮಸ್ಯೆಗಳು ಮತ್ತು ಸವಾಲುಗಳುʼ ವಿಷಯದ ಕುರಿತು ಎರಡು ದಿನಗಳ ರಾಷ್ಟೀಯ ವಿಚಾರ ಸಂಕಿರಣವನ್ನು ಮಾರ್ಚ್ 4 ಮತ್ತು 5ರಂದು ಆಯೋಜಿಸಲಾಗಿದೆ.
ಮಾರ್ಚ್ 4ರಂದು ಬೆಳಿಗ್ಗೆ 10.30ಕ್ಕೆ ವಿವಿಯ ಕನ್ನಡ ಸಭಾಭವನದಲ್ಲಿ ನಡೆಯುವ ಉದ್ಘಾಟನಾ ಸಮಾರಂಭವನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಬುಡಕಟ್ಟು ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ಎಂ ಗೌರವ ಉಪಸ್ಥಿತರಾಗಲಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯ, ಹಂಪಿಯ ಕುಲಸಚಿವ ಡಾ.ವಿರೂಪಾಕ್ಷಿ ಪೂಜಾರಹಳ್ಳಿ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಯೋಗೇಶ್ ಟಿ ಹಾಗೂ ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಉಪಸ್ಥಿತರಿರುವರು.
ದಿಕ್ಸೂಚಿ ಭಾಷಣವನ್ನು ಗೋವಾ ವಿಶ್ವವಿದ್ಯಾನಿಲಯದ ಡಿ ಡಿ ಕೊಸಾಂಬಿ, ಸಾಮಾಜಿಕ ವಿಜ್ಞಾನ ಮತ್ತು ವರ್ತನಾ ಅಧ್ಯಯನ ಶಾಲೆಯ ವೈಸ್ ಡೀನ್ ಡಾ.ಅರವಿಂದ ಎನ್.ಹಲ್ದನಕರ್ ನೀಡಲಿದ್ದು, ಕಾರ್ಯಕ್ರಮದಲ್ಲಿ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಎಚ್ ಎಸ್ ಗಿರಿಜಾಂಬ, ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣನವರ, ಸಾಮಾಜಿಕ ಕಾರ್ಯಕರ್ತ ಡಾ. ಡಿ ಜಿ ಸಾಗರ, ಬುಡಕಟ್ಟು ನಾಯಕ ವಾಸುದೇವ್ ಕಾಳೆ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ ಸಮಗ್ರ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ
ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೂಲ ಆದಿವಾಸಿಗಳ ಅಧ್ಯಯನ ಕೇಂದ್ರ ಸಂಶೋಧನಾ ಅಧಿಕಾರಿ ಡಾ.ಕೃಷ್ಣಮೂರ್ತಿ ಕೆ.ವಿ, ಮಹಿಳಾ ವಿವಿಯ ಯುಜಿ ಬ್ಲಾಕ್‌ನ ವಿಶೇಷ ಅಧಿಕಾರಿ ಪ್ರೊ. ಸಕ್ಪಾಲ್ ಹೂವಣ್ಣ, ಕಾರ್ಯಕ್ರಮದ ಸಂಘಟಕರಾಗಿ ಡಾ. ವೆಂಕಟೇಶ ಟಿ.ಎಸ್, ಡಾ. ದಿನೇಶ ಕೆ ಡಿ ಮತ್ತು ಡಾ. ರಾಮಕೃಷ್ಣಯ್ಯ ಡಿ ಸಿ ಉಪಸ್ಥಿತರಿರಲಿದ್ದಾರೆ.
ವಿಚಾರ ಸಂಕಿರಣದಲ್ಲಿ ಉತ್ತರ ಕರ್ನಾಟಕದ ಬುಡಕಟ್ಟು ಮಹಿಳೆಯರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಬಲೀಕರಣದ ವಿಚಾರಗಳು, ಎದುರಾಗುತ್ತಿರುವ ಸವಾಲುಗಳು ಹಾಗೂ ಪರಿಹಾರ ಮಾರ್ಗಗಳ ಕುರಿತು ತಜ್ಞರು, ಸಂಶೋಧಕರು ಮತ್ತು ಸಮಾಜ ಸೇವಕರು ಚರ್ಚಿಸಲಿದ್ದಾರೆ ಎಂದು ಮಹಿಳಾ ವಿವಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.





