ವಿಜಯಪುರ | ನೇಮಕಾತಿ ವಿಳಂಬದಿಂದ ಯುವಕರ ಭವಿಷ್ಯ ಅತಂತ್ರ: ಬಾಲಾಜಿ ಕಾಂಬಳೆ

Date:

ದಲಿತ ವಿದ್ಯಾರ್ಥಿ ಪರಿಷತ್ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಹಲವು ಹೋರಾಟದ ಮೂಲಕ ಸರ್ಕಾರಕ್ಕೆ ಮನವಿ ಮಾಡುತ್ತಾ ಬಂದಿದೆ. ರಾಜ್ಯದಲ್ಲಿ ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗುತ್ತಿರುವುದರಿಂದ ಲಕ್ಷಾಂತರ ಯುವಕರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಅವರ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ ಎಂದು ದವಿಪ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ ಬೇಸರ ವ್ಯಕ್ತಪಡಿಸಿದರು.

ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ, ಯುವಕರಿಗೆ ಉದ್ಯೋಗ ಭದ್ರತೆ ಒದಗಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಅವರಯ, “ಇತ್ತೀಚಿನ ದಿನಗಳಲ್ಲಿ ಸರ್ಕಾರವು ಬಹುತೇಕ ಇಲಾಖೆಗಳಲ್ಲಿ ಖಾಯಂ ಹುದ್ದೆಗಳನ್ನು ಭರ್ತಿ ಮಾಡುವ ಬದಲಿಗೆ ‘ಒಳ ಗುತ್ತಿಗೆ’ ಅಥವಾ ‘ಹೊರಗುತ್ತಿಗೆ’ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಇದರಿಂದ ಯುವಕರಿಗೆ ಉದ್ಯೋಗ ಭದ್ರತೆ ಇಲ್ಲದಂತಾಗಿದೆ ಮತ್ತು ಇದು ಯುವಜನರ ಬದುಕಿನ ಜೊತೆ ಆಟವಾಡಿದಂತಾಗಿದೆ. ದಯವಿಟ್ಟು ಈ ಪದ್ಧತಿಯನ್ನು ಕೈಬಿಟ್ಟು, ಸಂವಿಧಾನಬದ್ಧವಾಗಿ ನೇರ ಮತ್ತು ಖಾಯಂ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು” ಎಂದು ಮನವಿ ಮಾಡಿದರು.

“ಕೋವಿಡ್ ಕಾರಣದಿಂದ ಮತ್ತು ಒಳಮೀಸಲಾತಿ ಜಾರಿಯಿಂದಾಗಿ ಪರೀಕ್ಷೆಗಳು ಸರಿಯಾದ ಸಮಯಕ್ಕೆ ನಡೆಯದ ಕಾರಣ ಲಕ್ಷಾಂತರ ಅಭ್ಯರ್ಥಿಗಳು ವಯೋಮಿತಿ ಮೀರಿದ್ದಾರೆ. ಇವರಿಗೆ ನ್ಯಾಯ ಒದಗಿಸಲು ಕನಿಷ್ಠ 5 ವರ್ಷಗಳ ವಯೋಮಿತಿ ಸಡಿಲಿಕೆ ಅತೀ ಅಗತ್ಯವಾಗಿದೆ. ಈ ಬಗ್ಗೆ ನಿಮ್ಮ ಸರ್ಕಾರ ವಯೋಮಿತಿ ಸಡಿಲಗೊಳಿಸಿರುವುದು ಸಕಾರಾತ್ಮಕ ಸ್ಪಂದನೆ. ಆದ್ರೆ ಬಹು ದಿನಗಳ ದಲಿತ ಸಮುದಾಯದ ಒಳಮೀಸಲಾತಿ ಜಾರಿಗೆ ಸರ್ಕಾರದ ವಿಳಂಬ ನೀತಿ ಅನುಸರಿಸುತ್ತಿರುವದು ನಿರಾಶೆ ಮೂಡಿಸಿದೆ. ಕೊಡಲೇ ಪೂರ್ಣ ಪ್ರಮಾಣದಲ್ಲಿ ಒಳಮೀಸಲಾತಿ ಜಾರಿ ಮಾಡಿ ಅಂದರಂತೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಫೆ.23ರಿಂದ ಉಚಿತ ಹೈಪೋಥೈರಾಯ್ಡಿಸಮ್ ತಪಾಸಣೆ!

ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್ ನ ಜಿಲ್ಲಾ ಸಹ ಸಂಚಾಲಕ ಮಹಾದೇವ ಚಲವಾದಿ, ದಾವೂದ್ ನಾಯ್ಕೋಡಿ, ಹುಚ್ಚಪ್ಪ ಭಾವಿಮನಿ, ಸಿದ್ದು ಸಿಂಗೆ, ಮಹೇಶ ಕೊಳ್ಳಿ, ವಿನೋದ್, ಸಂದೇಶ, ಮಂಜು ಬಿಸನಾಳ, ವಿರೇಶ, ದಾನೇಶ್, ಮಂಜುನಾಥ್, ಪ್ರಕಾಶ ಹಾಗೂ ಇನ್ನಿತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...