ವಿಜಯಪುರ | ಮಹಿಳೆಯರು ನಾಲ್ಕು ಗೋಡೆ ದಾಟಿ ಹೊರಬರಬೇಕು: ಡಾ. ಸೀತವ್ವ ಜೋಡಟ್ಟಿ

Date:

ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಆಗ ಮಾತ್ರ ಸುಧಾರಣೆಯಾಗಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತೆ ಡಾ.ಸೀತವ್ವ ಜೋಡಟ್ಟಿ ಅಭಿಪ್ರಾಯಪಟ್ಟರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿವಿಧ ನಿಕಾಯಗಳ ಸಹಯೋಗದಲ್ಲಿ ಅಂತಾರಾಷ್ಟಿಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ “ಮಹಿಳಾ ಸಾಂಸ್ಕೃತಿಕ ಹಬ್ಬ-2026″ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆ ಅಬಲೆಯಲ್ಲ ಸಬಲೆ. ತೊಟ್ಟಿಲು ತೂಗುವ ಕೈ ದೇಶವನ್ನು ಆಳುತ್ತದೆ. ಇದಕ್ಕೆ ರಾಷ್ಟ್ರಪತಿ ಮುರ್ಮು ಅವರೇ ನಿದರ್ಶನ. ಮಹಿಳೆಯರ ಸಬಲೀಕರಣಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟ ಈ ಸಂದೇಶಗಳೇ ಮೂಲ ಮಂತ್ರಗಳಾಗಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವದಾಸಿ ಪದ್ಧತಿ ನಿಲ್ಲಿಸಿ ದೇವದಾಸಿಯರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಾಸ್ ಸಂಸ್ಥೆ 29 ವರ್ಷಗಳನ್ನು ಪೂರೈಸಿದೆ. ದೇವದಾಸಿಯರು ಮನೆಯಲ್ಲಿ ಆಸ್ತಿ ಕೇಳಿದಾಗ ಹಲವಾರು ಎಡರು ತೊಡರುಗಳು ಬಂದವು. ಆಗ ನಾವೂ ಸಂಸ್ಥೆಯಲ್ಲಿ ಕಾನೂನು ಕೋಶ ಆರಂಭಿಸಿದೆವು. ದೇವದಾಸಿ ಮಹಿಳಿಯರಿಗೆ ಮಾಸಾಶನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದೆವು. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಮಾಸಾಶನ ಮಂಜೂರು ಮಾಡಿದರು. ಈ ಎಲ್ಲ ಶ್ರೇಯಸ್ಸು ಮಾಸ್ ಸಂಸ್ಥೆಗೆ ಸೇರುತ್ತದೆ ಎಂದರು.

WhatsApp Image 2026 03 10 at 11.58.35 AM

ಬಾಗಲಕೋಟೆ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಮಾತನಾಡಿ, ಮಹಿಳೆಯರು ಇಂದು ಪ್ರತಿಯೊಂದು ಕ್ಷೇತ್ರಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಮಹಿಳೆ ಕೇವಲ ಮನೆಯನ್ನು ನಿರ್ವಹಿಸುವುದಷ್ಟೇ ಅಲ್ಲದೆ ಉದ್ಯೋಗ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾಳೆ. ಮಹಿಳೆಯರು ಸ್ಪಷ್ಟವಾದ ಗುರಿಗಳನ್ನು ಹೊಂದಬೇಕು. ಅದಕ್ಕಾಗಿ ಸತತ ಪರಿಶ್ರಮದ ಅಗತ್ಯವಿದೆ ಎಂದರು.

ಸಿಂಡಿಕೇಟ್ ಸದಸ್ಯೆ ಮಮತಾ ಎಸ್ ಮಾತನಾಡಿ, ಮಹಿಳೆಯರು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಬಲಿಷ್ಠ ರಾಷ್ಟ್ರವನ್ನು ಕಟ್ಟಲು ಸಾಧ್ಯ. ಕೇವಲ ಒಬ್ಬರೇ ಬೆಳೆಯುವುದಲ್ಲ, ಜೊತೆಯಲ್ಲಿ ಇರುವವರನ್ನು ಬೆಳೆಸಿದಾಗ ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ. ಜೀವನದಲ್ಲಿ ತಂದೆ ತಾಯಿಗಳ ಸ್ಥಾನ ಮಹತ್ವದಾಗಿದೆ. ಅವರಿಗೆ ಗೌರವವಿಸುವುದು ನಮ್ಮ ಕರ್ತವ್ಯವಾಗಿದೆ. ಉತ್ತಮ ಆರೋಗ್ಯ ಮತ್ತು ಮನಸ್ಥಿತಿಯನ್ನು ಹೊಂದಿ ಪ್ರಗತಿ ಹೊಂದಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಅಂತಾರಾಷ್ಟಿಯ ಮಹಿಳಾ ದಿನಾಚರಣೆಯ ಆಶಯಗಳನ್ನು ಅನುಷ್ಠಾನಗೊಳಿಸಲು ನಾವೆಲ್ಲರೂ ಇಂದು ಸಂಕಲ್ಪ ಮಾಡಬೇಕಾಗಿದೆ ಎಂದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇದನ್ನೂ ಓದಿ: ವಿಜಯಪುರ | ಅಂಬೇಡ್ಕರ್‌ ಆದರ್ಶಗಳನ್ನು ಅಳವಡಿಕೊಳ್ಳಿ: ಡಾ. ಔದ್ರಾಮ್

ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್.ಲಕ್ಕಣ್ಣವರ, ಸಂವಿಧಾನ ಪ್ರಸ್ತಾವನೆ ಓದಿಸಿದರು. ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಗೂ ಹೋರಾಟ ಗೀತೆ ಹಾಡಿದರು. ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಸಂಚಾಲಕಿ ಪ್ರೊ.ಲಕ್ಷಿದೇವಿ ವೈ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಡಾ.ಶಶಿಕಲಾ ರಾಠೋಡ, ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು, ವಿವಿಯ ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...