ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ ಪೂರ್ಣಗೊಳಿಸಬೇಕು. ಹಿಟ್ಟಿನಹಳ್ಳಿ ಗ್ರಾಮದ ಸೇತುವೆ ಕಾಮಗಾರಿ ಸಮೀಕ್ಷೆಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಎಂದು ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ ಜಿಲ್ಲೆಯ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ತಾಲೂಕುಗಳ ವಿವಿಧ ಗ್ರಾಮಗಜಿಳಿಗೆ ಭೇಟಿ ನೀಡಿ, ರಸ್ತೆ ಕಾಮಗಾರಿ ಹಾಗೂ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಿ ಮಾತನಾಡಿದರು.
ತಿಕೋಟಾ ತಾಲೂಕಿನ ಹರನಾಳ ಗ್ರಾಮದ ಪೂರ್ಣಗೊಂಡಿರುವ ಡೋಣಿ ನದಿಯ ಹೂಳು ತೆಗೆಯುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಬಳಿಕ ಬಬಲೇಶ್ವರ ತಾಲೂಕಿನ ಸಾರವಾಡ ಹಾಗೂ ಹೊನಗನಹಳ್ಳಿ ಗ್ರಾಮದ ವ್ಯಾಪ್ತಿಯ ಸೇತುವೆ, ವಿಜಯಪುರ ತಾಲೂಕು ವ್ಯಾಪ್ತಿಯ ಹಿಟ್ಟಿನಹಳ್ಳಿ ಗ್ರಾಮದ ಹತ್ತಿರ ಇರುವ ಸೇತುವೆಗಳ ಹೂಳು ತೆಗೆಯುವ ಕಾಮಗಾರಿಗಳನ್ನು ಪರಿಶೀಲಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ಡಾ. ಬಿ.ಆರ್.ಅಂಬೇಡ್ಕರ ಹಾಗೂ ಬಾಬು ಜಗಜೀವನ್ ರಾವ್ ಮೂರ್ತಿ ಸ್ಥಾಪನೆಗೆ ದೇಣಿಗೆ ಸಂಗ್ರಹ
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಅಧಿಕಾರಿ ಸಂಜಯ ಕೋಟೆನ್ನವರ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ ನ್ಯಾಮಗೊಂಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿ ಪವಾರ ಸೇರಿದಂತೆ ತಾಲೂಕು ಹಾಗೂ ಗ್ರಾ.ಪಂ. ಮಟ್ಟದ ಅಧಿಕಾರಿಗಳು, ಸಿಬ್ಬಂದಿಯವರು ಇದ್ದರು.





