ಕುಡಿಯುವ ನೀರಿಗೂ ಮೈಲುಗಟ್ಟಲೆ ಪಾದಯಾತ್ರೆ; ಕಣ್ಮುಚ್ಚಿ ಕುಳಿತ ಸ್ಥಳೀಯ ಆಡಳಿತ!

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಕ್ಯಾತನ ದೋಣಿ ತಾಂಡಾ ನಿವಾಸಿಗಳು ಇಂದಿಗೂಕುಡಿಯುವ ನೀರಿಗಾಗಿ ಹೋರಾಡಬೇಕಾದ ಅನಿವಾರ್ಯತೆಯಲ್ಲಿಯೇ ಬದುಕುತ್ತಿದ್ದಾರೆ.

25ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿರುವ ಈ ತಾಂಡಾದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ನೀರಿಗಾಗಿ ದಿನನಿತ್ಯ 3 ಕಿ.ಮೀ ದೂರದಲ್ಲಿರುವ ಅಡವಿ ಸೋಮನಾಳ ಅಥವಾ ಹಳ್ಳಕ್ಕೆ ಕೊಡ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇದೆ. ತಾಂಡಾದಲ್ಲಿ ಎರಡು ನೀರಿನ ತೊಟ್ಟಿಗಳನ್ನು ಅಳವಡಿಸಲಾಗಿದೆ. ಆದರೆ ಬರುವ ನೀರೆಲ್ಲಾ ಉಪ್ಪುಮಯವಾಗಿದ್ದು, ಕುಡಿಯಲು ಯೋಗ್ಯವಾಗಿಲ್ಲ. ಊರಲ್ಲಿ ಎಲ್ಲಿಯೇ ಬೋರ್ವೆಲ್ ಕೊರೆಸಿದರೂ ನೀರು ಮಾತ್ರ ಉಪ್ಪು. ಹೀಗಾಗಿ ಕಿಲೋಮೀಟರ್‌ಗಟ್ಟಲೇ ಅಲೆಯುವ ಅನಿವಾರ್ಯ ಸ್ಥಿತಿ ಈ ತಾಂಡಾವಾಸಿಗಳದ್ದು.

ತಾಂಡದಲ್ಲಿನ ಒಬ್ಬಂಟಿ ವೃದ್ಧೆಯೊಬ್ಬರು ಜೀವ ಕೈಯಲ್ಲಿ ಹಿಡಿದೇ ಪ್ರತಿದಿನ ಹಳ್ಳದತ್ತ ತೆರಳಿ ನೀರು ತರುವ ಅನಿವಾರ್ಯತೆಗೆ ಒಳಗಾಗಿದ್ದಾರೆ. ಬಿಸಿಲು, ದಾರಿ, ದೌರ್ಬಲ್ಯ ಯಾವುದನ್ನೂ ಲೆಕ್ಕಿಸದೆ ಅವರು ಹೋರಾಡಬೇಕಿದೆ. ಅಷ್ಟು ಪ್ರಯಾಸಪಟ್ಟು ಹೋದರೂ ಮನೆಗೆ ಸುರಕ್ಷಿತವಾಗಿ ವಾಪಸ್ ಆಗುತ್ತೇನೆ ಎಂಬ ಭರವಸೆಯೂ ಅವರಲ್ಲಿ ಇರುವುದಿಲ್ಲ. ಶುದ್ಧ ಕುಡಿಯುವ ನೀರು ಒದಗಿಸುವ ಹೊಣೆ ಹೊತ್ತಿರುವ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇಲ್ಲಿವರೆಗೂ ಈ ಸಮಸ್ಯೆಯತ್ತ ಗಮನ ಹರಿಸದೇ ಇರುವುದರಿಂದ, ಸಂಕಷ್ಟದಲ್ಲೇ ದಿನಗಳನ್ನು ಕಳೆಯುತ್ತಿರುವ ತಾಂಡಾದ ನಿವಾಸಿಗಳು ಆಡಳಿತದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ, ತಮ್ಮ ದುಃಖಕ್ಕೆ ಕಾರಣವಾದ ವ್ಯವಸ್ಥೆಯನ್ನು ಶಪಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2026 01 13 at 5.21.29 PM

ಈ ಕುರಿತು ಗ್ರಾಮ ಪಂಚಾಯಿತಿ ಸದಸ್ಯ ಹನುಮಂತರಾಯ ಪಾಟೀಲ ಮಾತನಾಡಿ, “ಕ್ಯಾತನ ದೋಣಿ ತಾಂಡಾದ ನಿವಾಸಿಗಳು ಶುದ್ಧ ಕುಡಿಯುವ ನೀರಿನ ಕೊರತೆಯಿಂದ ಉಪ್ಪುನೀರನ್ನೇ ಕುಡಿಯುವ ಸ್ಥಿತಿ ತಲುಪಿದ್ದಾರೆ. ಇಲ್ಲಿ ಪರ್ಯಾಯ ವ್ಯವಸ್ಥೆ ಇಲ್ಲದ ಕಾರಣ, ನಿವಾಸಿಗಳು ದೂರದ ಹಳ್ಳದಿಂದ ಅಶುದ್ಧ ನೀರನ್ನೇ ತಂದು ಕುಡಿಯಬೇಕಾದ ಅನಿವಾರ್ಯತೆ ಇದೆ. ತಾಂಡಾದಲ್ಲಿ ಬೋರ್‌ವೆಲ್‌ ಕೊರೆಸಲಾಗಿದ್ದರೂ, ಅದಕ್ಕೆ ಮೋಟಾರ್‌ ಅಳವಡಿಸದೇ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ. ಈ ಸಮಸ್ಯೆ ಕುರಿತು ತಾವು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತಿಲ್ಲ, ಆಡಳಿತದ ನಿರ್ಲಕ್ಷ್ಯವೇ ಇಂದು ಈ ನೀರಿನ ಸಂಕಷ್ಟಕ್ಕೆ ಕಾರಣವಾಗಿದೆ” ಎಂದು ಆರೋಪಿಸಿದರು.

ವೀರೇಶ ಚಲವಾದಿ ಮಾತನಾಡಿ, “ತಾಂಡಾದ ನೀರಿನ ಸಮಸ್ಯೆಯನ್ನು ಹಲವು ಬಾರಿ ಗ್ರಾಮಾಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರತಿ ಬಾರಿಯೂ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ. ಸಮಸ್ಯೆ ದಿನೇ ದಿನೇ ಜಟಿಲವಾಗುತ್ತಿದೆ. ಈಗಲಾದರೂ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಿದೆ. ಈ ಸಮಸ್ಯೆ ಬಗೆ ಹರಿಸದಿದ್ದಲ್ಲಿ ಪಂಚಾಯತಿಗೆ ಬೀಗ ಜಡಿದು ಪ್ರತಿಭಟಿಸಲಾಗುವುದು” ಎಂದು ಎಚ್ಚರಿಸಿದರು.

ಗ್ರಾಮಾಭಿವೃದ್ಧಿ ಅಧಿಕಾರಿ (ಪಿಡಿಒ) ನಿರ್ಮಲ ತೋಟದ ಮಾತನಾಡಿ, “ತಾಂಡಾದ ನೀರಿನ ಸಮಸ್ಯೆ ನಮ್ಮ ಗಮನಕ್ಕೆ ಬಂದಿದೆ. ಆದಷ್ಟು ಬೇಗ ಕ್ರಮ ಕೈಗೊಳ್ಳಲು ಸಂಬಂಧಿಸಿದ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ” ಎಂದರು.

ಸುಮಾರು ಐವತ್ತು ವರ್ಷಗಳಿಂದ ಕ್ಯಾತನ ದೋಣಿ ತಾಂಡಾವು ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ಸಂಪೂರ್ಣವಾಗಿ ವಂಚಿತವಾಗಿಯೇ ಉಳಿದಿದೆ. ತಾಂಡಾ ಅಭಿವೃದ್ಧಿ ನಿಗಮದ ಮೂಲಕ ಒದಗಿಸಬೇಕಾದ ಸೌಕರ್ಯಗಳು ಬರೀ ಭರವಸೆಗಷ್ಟೇ ಸೀಮಿತವಾಗಿದ್ದು, ವಾಸ್ತವದಲ್ಲಿ ಇಲ್ಲಿವರೆಗೆ ಒಂದೇ ಒಂದು ಅಭಿವೃದ್ಧಿ ಕಾಮಗಾರಿಯೂ ಜಾರಿಯಾಗಿಲ್ಲ ಎಂಬುದು ಸ್ಥಳೀಯರ ಆರೋಪ. ಅಡವಿ ಸೋಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ತಾಂಡಾಗಳಿದ್ದರೂ, ಅವುಗಳ ಸ್ಥಿತಿ ಒಂದೇ ರೀತಿಯಾಗಿದೆ. ನೀರು, ರಸ್ತೆ, ಸಾರ್ವಜನಿಕ ಕಟ್ಟಡಗಳ ಕೊರತೆ. ಶೀಘ್ರವೇ ದೇವಸ್ಥಾನಕ್ಕೆ ಅಗತ್ಯ ಸೌಕರ್ಯ, ಶುದ್ಧ ಕುಡಿಯುವ ನೀರು, ತಾಂಡಾಕ್ಕೆ ಸಮರ್ಪಕ ರಸ್ತೆ ಹಾಗೂ ಮೊಹರಂ ಆಚರಣೆಗೆ ಕಟ್ಟೆ ನಿರ್ಮಿಸಬೇಕೆಂದು ನಿವಾಸಿಗಳು ಆಗ್ರಹಿಸುತ್ತಿದ್ದಾರೆ.

ಅಡವಿ ಸೋಮನಾಳ ಪ್ರಮುಖ ರಸ್ತೆಯಿಂದ ತಾಂಡಾಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದ್ದರೂ, ಅದು ತಗ್ಗು–ದಿಣ್ಣೆಗಳಾಗಿ ಮಾರ್ಪಟ್ಟಿದ್ದು ನಿತ್ಯ ಸಂಚಾರವೇ ಸವಾಲಾಗಿದೆ. ಮಳೆಗಾಲದಲ್ಲಿ ಈ ರಸ್ತೆ ಅಪಾಯದ ದಾರಿಯಾಗಿ ಬದಲಾಗುತ್ತದೆ ಎಂದು ಸ್ಥಳೀಯರು ಅಳಲು ತೋಡಿಕೊಳ್ಳುತ್ತಾರೆ. ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲ ಸೌಕರ್ಯಗಳನ್ನು ತಕ್ಷಣ ಅಭಿವೃದ್ಧಿಪಡಿಸದಿದ್ದರೆ ತಾಂಡಾ ನಿವಾಸಿಗಳ ಸಂಕಷ್ಟ ಇನ್ನಷ್ಟು ತೀವ್ರವಾಗಲಿದೆ ಎಂಬ ಆತಂಕವೂ ಇದೆ. ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವೇ ಈ ದುರವಸ್ಥೆಗೆ ಕಾರಣವಾಗಿದ್ದು, ಸಂಬಂಧಿಸಿದ ಇಲಾಖೆ ಮತ್ತು ಜನಪ್ರತಿನಿಧಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಶಾಶ್ವತ ಪರಿಹಾರ ಒದಗಿಸಬೇಕೆಂಬುದು ತಾಂಡಾದ ಜನರ ಒತ್ತಾಯಿಸಿದ್ದಾರೆ.

WhatsApp Image 2026 01 13 at 5.21.20 PM

ಇದನ್ನೂ ಓದಿ: ಮುದ್ದೇಬಿಹಾಳ | ಜಾತಿ ಪಿಡುಗು ತೊಲಗದ ಹೊರತು ದೇಶ ಸುಧಾರಿಸಲ್ಲ: ಎಸ್ ಎಸ್ ಅಂಗಡಿ

ಐವತ್ತು ವರ್ಷಗಳಾದರೂ ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಕ್ಯಾತನ ದೋಣಿಯಂತಹ ಹಲವು ತಾಂಡಾಗಳ ನಿವಾಸಿಗಳ ಬದುಕು ಪ್ರತಿದಿನವೂ ಹೋರಾಟವಾಗಿದೆ. ಇದು ಕೇವಲ ನೀರಿನ ಸಮಸ್ಯೆಗೆ ಸೀಮಿತವಲ್ಲ; ಆಡಳಿತ ವ್ಯವಸ್ಥೆಯ ದೀರ್ಘಕಾಲದ ನಿರ್ಲಕ್ಷ್ಯಕ್ಕೆ ಜೀವಂತ ಸಾಕ್ಷಿಯಾಗಿದೆ. ಜನಪ್ರತಿನಿಧಿಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಇದು ಮಾನವೀಯ ಹಾಗೂ ಆಡಳಿತಾತ್ಮಕ ಹೊಣೆಗಾರಿಕೆಯ ಪ್ರಶ್ನೆಯಾಗಿದ್ದು, ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಈ ನಿರ್ಲಕ್ಷ್ಯವೇ ಮತ್ತಷ್ಟು ಸಂಕಷ್ಟಗಳಿಗೆ ಕಾರಣವಾಗಲಿದೆ. ತಾಂಡಾ ನಿವಾಸಿಗಳಿಗೆ ಗೌರವಯುತ ಜೀವನಕ್ಕೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಒದಗಿಸುವುದು ಈಗ ಆಡಳಿತದ ಕರ್ತವ್ಯವಾಗಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...