ಉಡುಪಿ | ಬಿಜೆಪಿ ಯುವ ಮೋರ್ಚಾದ ದೂರು ರಾಜಕೀಯ ದಿವಾಳಿತನದ ಸಂಕೇತ : ವಿಕಾಸ್ ಹೆಗ್ಡೆ

Date:

ಕಾಂಗ್ರೆಸ್ ಪಕ್ಷದ ವೋಟ್ ಚೋರಿ ಅಭಿಯಾನದ ವಿರುದ್ಧ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷ ವೋಟ್ ಚೋರಿ ವಿರುದ್ಧ ದೇಶ ವ್ಯಾಪ್ತಿ ನಡೆಸುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಸಹ್ಯಾದ್ರಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಹಿ ಹಾಕಿರುವ ಬಗ್ಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಮತ್ತು ಇದರಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಯವರ ಮೇಲೆ ಆರೋಪ ಮಾಡಿರುವುದು ಬಿಜೆಪಿ ಯುವ ಮೋರ್ಚಾದವರ ರಾಜಕೀಯ ದಿವಾಳಿತನವಾಗಿದೆ.

ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ ದೇಶದ ಭವಿಷ್ಯವಾಗಿರುವ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುವ ಒಂದು ಸಂಸ್ಥೆ. ಇಲ್ಲಿ ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳು ಪ್ರಬುದ್ಧತೆ ಹೊಂದಿರುವ, ರಾಜಕೀಯ ಪ್ರಜ್ಞೆ ಇರುವ, ಹದಿನೆಂಟು ವರ್ಷ ತುಂಬಿ ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಹೊಂದಿರುವವರಾಗಿದ್ದಾರೆ. ಇವರಿಗೆ ಸಹಿ ಹಾಕುವ ಮೊದಲು ಯಾವುದು ಸರಿ, ಯಾವುದು ತಪ್ಪು ಎಂದು ಆಲೋಚನೆ ಮಾಡುವ ಶಕ್ತಿಯನ್ನು ಹೊಂದಿದವರಾಗಿದ್ದಾರೆ. ಬಿಜೆಪಿ ಯುವ ಮೋರ್ಚಾದವರು ದೇಶದ ಇತಿಹಾಸ ತಿಳಿದು ಮಾತನಾಡುವುದು ಉತ್ತಮ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ದೇಶದ ಹೆಚ್ಚಿನ ಹೋರಾಟ, ಚಳುವಳಿಗಳಲ್ಲಿ ಪ್ರಮುಖ ಪಾತ್ರವಹಿಸಿದ ಸಂಘಟನೆಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಮುಂಚೂಣಿಯಲ್ಲಿ ಬರುತ್ತವೆ. ಇವತ್ತು ಚುನಾವಣಾ ಆಯೋಗ ಒಂದು ಸ್ವಾಯತ್ತ ಸಂಸ್ಥೆಯಾದರೂ ಕೂಡ ಅದು ಕರ್ತವ್ಯ ನಿರ್ವಹಿಸುತ್ತಿರುವುದು ಅಂಬೇಡ್ಕರ್ ಕೊಟ್ಟ ಸಂವಿಧಾನದ ಅಡಿಯಲ್ಲಿ ಹಾಗೂ ಇದರ ತಪ್ಪುಗಳನ್ನು ಟೀಕಿಸುವ ಅಧಿಕಾರ ಪ್ರತಿಯೊಬ್ಬ ಭಾರತೀಯ ನಾಗರಿಕನಿಗೆ ಇದೆ. ಇವತ್ತು ಕಾಂಗ್ರೆಸ್ ಪಕ್ಷ ವೋಟ್ ಚೋರಿ ವಿರುದ್ಧ ನಡೆಸುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡರೆ, ಸಹಿ ಮಾಡಿದರೆ ಅದು ತಪ್ಪಲ್ಲಾ ಎನ್ನುವ ಸಾಮಾನ್ಯ ಜ್ಞಾನವನ್ನು ಬಿಜೆಪಿ ಯುವ ಮೋರ್ಚಾ ಹೊಂದುವುದು ಉತ್ತಮ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಮಂಜುನಾಥ್ ಭಂಡಾರಿಯಂತಹ ಪ್ರಬುದ್ಧ ರಾಜಕಾರಣಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಟೀಕೆ ಮಾಡುತ್ತಿರುವುದು ಬಿಜೆಪಿ ಯುವ ಮೋರ್ಚಾದವರ ರಾಜಕೀಯ ದಿವಾಳಿತನವನ್ನು ಏತ್ತಿ ತೋರಿಸುತ್ತಿದೆ. ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ ಜಾತಿ, ಧರ್ಮ, ಮತ, ಪಕ್ಷ, ಭಾಷೆ ಎಲ್ಲವನ್ನೂ ಮೀರಿ ಸರ್ವರಿಗೂ ವಿದ್ಯಾಧಾನ ಮಾಡುವ ದಕ್ಷಿಣ ಕನ್ನಡ ಮಾತ್ರವಲ್ಲಾ ನಮ್ಮ ರಾಜ್ಯದ ಒಂದು ಹೆಮ್ಮೆಯ ಸಂಸ್ಥೆ ಇಂತಾ ಸಂಸ್ಥೆಯ ವಿರುದ್ಧ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದನ್ನು ಬಿಜೆಪಿ ಯುವ ಮೋರ್ಚಾ ಇನ್ನಾದರೂ ನಿಲ್ಲಿಸಲಿ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...