ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅಮಾನತು

Date:

ವಿಧಾನ ಪರಿಷತ್ ಸದಸ್ಯರನ್ನು ಕಾರ್ಯಕ್ರಮಕ್ಕೆ ಅಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಿದ್ದರಿಂದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾದೇವ ಮುಂಗಳ್ಳೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಸೆಪ್ಟೆಂಬರ್ 23ರಂದು ಹುಮನಾಬಾದ್‌ ಮತಕ್ಷೇತ್ರದ ಶಾಸಕರ ಕಚೇರಿಯಲ್ಲಿ ಅಂಗವಿಕಲರಿಗೆ ವಿವಿಧ ಸಲಕರಣೆಗಳ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಸರ್ಕಾರದ ಶಿಷ್ಟಾಚಾರ ಉಲ್ಲಂಘಿಸಿರುವುದಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿರುದ್ಧ ವಿಧಾನ ಪರಿಷತ್ ಸದಸ್ಯ ಭೀಮರಾವ್ ಬಿ. ಪಾಟೀಲ ದೂರು ನೀಡಿದ್ದರು.

ಸದಸ್ಯರ ದೂರು ಹಾಗೂ ಸರ್ಕಾರದ ಸಭೆ, ಸಮಾರಂಭಗಳಲ್ಲಿ ಶಿಷ್ಟಾಚಾರದ ಸೂಚನೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ವತಿಯಿಂದ ಅನೇಕ ಸಭೆಗಳಲ್ಲಿ ಸೂಚನೆಗಳನ್ನು ನೀಡಿದ್ದರೂ, ಶಿಷ್ಟಾಚಾರ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿ ಕಂಡು ಬಂದ ಹಿನ್ನಲೆ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...