ಉಡುಪಿ | ಗೃಹ ಬಂಧನದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಣೆ

Date:

ಉಡುಪಿ ಜಿಲ್ಲೆಯ ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದಿಂದ ಭದ್ರ ಕೊಠಡಿಯೊಂದರಲ್ಲಿ ಗೃಹಬಂಧನದಲ್ಲಿದ್ದ ಮನೋರೋಗಿ ಮಹಿಳೆಯನ್ನು ಖಚಿತ ಮಾಹಿತಿಯ ಆಧಾರದ ಮೇಲೆ ವಿಶು ಶೆಟ್ಟಿ ಅಂಬಲಪಾಡಿಯವರು ಸಖಿ ಸೆಂಟರಿನ ಸಿಬ್ಬಂದಿ ಹಾಗೂ 112 ಪೊಲೀಸ್ ಸಹಾಯದಿಂದ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ಜುಲೈ 5ರ ಸಂಜೆ ನಡೆದಿದೆ.

ಮಹಿಳೆ ಬೇಬಿ (38) ಅಮಾನವೀಯ ಗೃಹ ಬಂಧನ ದಿಂದ ರಕ್ಷಿಸಲ್ಪಟ್ಟವರು. ವಿವಾಹಿತರಾಗಿದ್ದು ಸಣ್ಣ ಇಬ್ಬರು ಮಕ್ಕಳಿದ್ದಾರೆ. ಮನೋರೋಗಿಯಾದ ಮಹಿಳೆಯನ್ನು ವರುಷದಿಂದ ಗೃಹಬಂಧನದಲ್ಲಿಟ್ಟು ಸರಿಯಾದ ಚಿಕಿತ್ಸೆ ಯಿಂದ ವಂಚಿತರಾಗಿದ್ದಾರೆ.

ಘಟನಾ ಸ್ಥಳಕ್ಕೆ ತೆರಳಿದಾಗ ಕಿಟಕಿಯಲ್ಲಿ ಮಹಿಳೆ ತನ್ನನ್ನು ರಕ್ಷಿಸಿ ಬದುಕಲು ಆಗುತ್ತಿಲ್ಲ ಹಿಂಸೆಯಿಂದ ಕಂಗಾಲಾಗಿದ್ದೇನೆ. ಮಾನಸಿಕ ಹಾಗೂ ದೈಹಿಕ ಹಿಂಸೆಯಿಂದ ನನ್ನನ್ನು ಪಾರು ಮಾಡಿ ಎಂದು ಅಂಗಲಾಚಿ ಬೊಬ್ಬಿಡುತ್ತಿದ್ದರು. ಭದ್ರವಾದ ಬಾಗಿಲು ಹಾಗೂ ಬೀಗ ಇದ್ದು ಸಣ್ಣ ಕಿಟಕಿಯಿಂದ ಆಹಾರ ನೀಡುತ್ತಿದ್ದರು. ಮಳೆ ಗಾಳಿಗೆ ನನ್ನ ಮೇಲೆ ದಯೆ ತೋರದೆ ನಾಯಿಯ ಬದುಕಿಗಿಂತ ಕಡೆಯಾಗಿದೆ ರಕ್ಷಿಸಿ ಎಂದು ಗೋಗರೆಯುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧ ಮುಕ್ತವಾದ ಮಹಿಳೆಯನ್ನು ಸಂತೈಸಿದಾಗ ಬಾಳಿಗಾ ಆಸ್ಪತ್ರೆಯ ಚಿಕಿತ್ಸೆಯಿಂದ ನಾನು ಗುಣಮುಖಲಾಗಿದ್ದು ಕಳೆದ 3-4 ವರುಷಗಳಿಂದ ಚಿಕಿತ್ಸೆ ಇಲ್ಲದೇ ಈ ಪರಿಸ್ಥಿತಿ ದಯಮಾಡಿ ಬಾಳಿಗಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಇಲ್ಲಿ ಬಿಡಬೇಡಿ ಎಂದಿದ್ದು ಮಹಿಳೆಯ ಅನತಿಯಂತೆ ಬಾಳಿಗಾ ಆಸ್ಪತ್ರೆಗೆ ವಿಶು ಶೆಟ್ಟಿ ಅಂಬಲಪಾಡಿ ದಾಖಲಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ, ಮನೋರೋಗಿಗಳೊಂದಿಗೆ ಬದುಕುವುದು ಅಷ್ಟು ಸುಲಭವಲ್ಲ. ಕೆಲವೊಮ್ಮೆ ಸಂಬಂಧಿಕರು ಅನಿವಾರ್ಯವಾಗಿ ಇಂತಹ ಸನ್ನಿವೇಶಗಳಿಗೆ ಶರಣಾಗುತ್ತಾರೆ. ಮನೆಯವರಿಂದ ಬಗೆಹರಿಸಲಾಗದಾಗ ಮಹಿಳಾ ಪರ ಇಲಾಖೆಯ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಇಂತಹ ಕೆಲವು ಸಮಸ್ಯೆಗಳನ್ನು ಮನೆಯವರು ಹಾಗೂ ಇಲಾಖೆ ಜಂಟಿಯಾಗಿ ಪರಿಹರಿಸಿದ ಉದಾಹರಣೆಗಳಿವೆ. ಈ ಪ್ರಕರಣದಲ್ಲಿ ಸ್ಥಳಿಯ ಆಶಾ ಕಾರ್ಯಕರ್ತೆಯರು, ಪಂಚಾಯತ್ ಅಧಿಕಾರಿಗಳಿಗೆ ವಿಷಯ ತಿಳಿಯದೆ ಇರುವುದು ವಿಪರ್ಯಾಸ‌. ತಿಳಿದೂ ಸುಮ್ಮನಿದ್ದರೆ ಅಪರಾಧ. ಇದು ಜಿಲ್ಲಾಡಳಿತಕ್ಕೆ ಅವಮಾನ. ಜೈಲಿನ ಖೈದಿಗಳಿಗೂ ಅನಾರೋಗ್ಯವಾದಾಗ ಚಿಕಿತ್ಸೆ ಪಡೆಯಲು ವ್ಯವಸ್ಥೆ ಇರುವಾಗ ಈ ಮಹಿಳೆಯ ಮನೋರೋಗಕ್ಕೆ ಚಿಕಿತ್ಸೆ ಇಲ್ಲದೆ ಕೂಡಿ ಹಾಕಿರುವುದು ಅಧಿಕಾರಿಗಳ ಸರಿಯಾದ ಮಾರ್ಗದರ್ಶನ ಸ್ಪಂದನೆ ಹಾಗೂ ಜಾಗೃತೆಯ ಕೊರತೆಯೇ ಕಾರಣ. ಮುಂದಿನ ದಿನಗಳಲ್ಲಿ ಯಾರಿಗೂ ಸಹ ಇಂತಹ ಪರಿಸ್ಥಿತಿ ಬಾರದಿರಲಿ. ಮಹಿಳೆಯ ಕೌಟುಂಬಿಕ ಸಮಸ್ಯೆಗೂ ನ್ಯಾಯ ಸಿಗಲಿ. ಮನನೊಂದ ಮಹಿಳೆ ಭಯದ ವಾತವರಣದಲ್ಲಿ ಇರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಮಹಿಳೆಗೆ ಯಾವುದೇ ನೆರವು ನೀಡಲು ಸಿದ್ದ. ಮಾಹಿತಿ ನೀಡಿದ ತಕ್ಷಣ ಸ್ಪಂದಿಸಿದ ಸಖಿ ಸೆಂಟರ್ ಗೆ ಧನ್ಯವಾದಗಳು ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...