ಮಂಗಳೂರು | ಓಟು ರಾಜಕೀಯದಿಂದ ಅಮಾಯಕರ ಸಾವು ನಿಲ್ಲಲಿ, ಕೋಮುದ್ವೇಷ ಅಳಿಯಲಿ: ನಟ ನವೀನ್ ಪಡೀಲ್

Date:

ನಮಗೆ ರಾಜಕೀಯ ಬೇಕು. ಆದರೆ ಓಟಿಗಾಗಿ ಇನ್ನೊಬ್ಬರಿಗೆ ತೊಂದರೆ ನೀಡಬಾರದು. ಈ ಓಟು ರಾಜಕೀಯದಿಂದ ಅಮಾಯಕರ ಸಾವು ನಿಲ್ಲಬೇಕು. ಮಂಗಳೂರು ಸೌಹಾರ್ದ ನಾಡು, ಇಲ್ಲಿ ಸೌಹಾರ್ದತೆ ಉಳಿಯಬೇಕು. ಕೋಮುದ್ವೇಷ ಅಳಿಯಬೇಕು ಎಂದು ತುಳು ರಂಗಭೂಮಿ, ಸಿನಿಮಾ ನಟ ನವೀನ್ ಡಿ ಪಡೀಲ್ ಹೇಳಿದರು.

ಮಂಗಳವಾರ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ತ್ರಿಕಾ ಭವನದಲ್ಲಿ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ನಟ, “ನಮ್ಮ ಮಂಗಳೂರು ಸೌಹಾರ್ದತೆಯ ಊರು, ಬುದ್ಧಿವಂತರ ಊರು. ಈಗ ಜಾತಿ, ಕೋಮು ಗಲಾಟೆಗಳು ನಡೆಯುತ್ತಿದೆ. ಹೀಗೆ ಮುಂದುವರೆದರೆ ಇಲ್ಲಿ ಬದುಕುವುದು ಕಷ್ಟ. ಯುವ ಜನರ ಭವಿಷ್ಯಕ್ಕೆ ಇದು ಮಾರಕವಾಗಬಹುದು” ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಯುವಕ ರಹಿಮಾನ್ ಕೊಲೆ ಪ್ರಕರಣ: ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಎಫ್‌ಐಆರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿಯೇ ಸೌಹಾರ್ದತೆಗೆ ಸಂಬಂಧಿಸಿದ ಸಿನಿಮಾ ‘ನೆರೆ ಕೆರೆ’ ಶೀಘ್ರವೇ ತೆರೆಕಾಣಲಿದೆ. ಈ ಸೌಹಾರ್ದತೆಯ ಸಿನಿಮಾಕ್ಕೆ ಶಶಿರಾಜ್ ರಾವ್ ಕಾವೂರು ಕಥೆ, ಸಂಭಾಷಣೆ ಬರೆದಿದ್ಧಾರೆ. ನಾನೇ ನಿರ್ದೇಶನ ಮಾಡುತ್ತಿದ್ದೇನೆ” ಎಂದು ಈ ಸಂದರ್ಭದಲ್ಲೇ ವಿವರಿಸಿದರು.

“ಹಿಂದೂ, ಮುಸ್ಲಿಮರು ಮತ್ತು ಕ್ರೈಸ್ತರು ಹೊಂದಾಣಿಕೆಯಿಂದ ಬದುಕಿದರೆ ಯಾವುದೇ ಸಮಸ್ಯೆಯಾಗುವುದಿಲ್ಲ. ಗಲಾಟೆ ಮಾಡಿ ಮನಸ್ಸಿನ ಶಾಂತಿ ಕದಡುವ ಬದಲಾಗಿ ನಾವೆಲ್ಲರೂ ಜೊತೆಯಾಗಿ ಇರಬಹುದಲ್ಲವೇ? ಈಶ್ವರ, ಅಲ್ಲಾ, ಯೇಸು ದೇವರುಗಳೇನು ಗಟ್ಟಿಯಾಗಿಲ್ಲವೇ? ನಮ್ಮ ಜನರಿಗೆ ಯಾಕೆ ಬುದ್ಧಿ ನೀಡುತ್ತಿಲ್ಲ” ಎಂದರು.

“ಕಲಾವಿದನಿಗೆ ಶಿಕ್ಷಣದ ಜೊತೆ ಸುತ್ತಮುತ್ತಲಿನ ಜನರ ಪ್ರೋತ್ಸಾಹ ಮುಖ್ಯ. ನಾನು ಸೌಹಾರ್ದತೆಯ ಪರಿಸರದಲ್ಲಿ ಬೆಳೆದವನು. ಎಲ್ಲಾ ಜಾತಿ, ಧರ್ಮದವರು ನನ್ನ ಕಲಾ ಪ್ರತಿಭೆ ಬೆಳವಣಿಗೆಗೆ ಸಹಾಯ ಮಾಡಿದ್ದಾರೆ. ನಾಟಕಕಾರರಾದ ಜಿ.ಕೆ.ಪುರುಷೋತ್ತಮ ಮತ್ತು ವಿಠಲ ಶೆಟ್ಟಿ ಕನಕವಾಡಿ ನನ್ನ ಗುರುಗಳು” ಎಂದರು. ಜೊತೆಗೆ ತನ್ನ ಬಾಲ್ಯದ ಸೌಹಾರ್ದ ನೆನಪುಗಳನ್ನು ಮೆಲುಕು ಹಾಕಿದರು.

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ರಾಜಕಾರಣಿಗಳ ಕೋಮು ಧ್ರುವೀಕರಣದ ತಂತ್ರಕ್ಕೆ ಅದೆಷ್ಟೋ ಜೀವಗಳು ಬಲಿಯಾಗಿವೆ. ಕೋಮು ದ್ವೇಷದಿಂದಲೇ ಹಲವು ಕೊಲೆಗಳು ನಡೆದಿವೆ, ಹಾಗೆಯೇ ವೈಯಕ್ತಿಕ ಕಾರಣಗಳಿಂದ ನಡೆದ ಕೊಲೆಗಳಿಗೆ ಶರಣ್‌ ಪಂಪ್ವೆಲ್‌ನಂತಹ ವಿಎಚ್‌ಪಿ ಮುಖಂಡರುಗಳು ಕೋಮು ಬಣ್ಣ ಹಚ್ಚಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ನಿನ್ನೆ ರಾತ್ರಿಯಷ್ಟೇ(ಮೇ 27) ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಎಂಬುವವರ ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆ ಯತ್ನ ನಡೆದಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಕರಾವಳಿಯ ಜನಪ್ರಿಯ ನಟ ನವೀನ್ ಡಿ ಪಡೀಲ್ ನೀಡಿರುವ ಹೇಳಿಕೆ ಮಹತ್ವ ಪಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...