ಬೀದರ್‌ | ಪಕ್ಷದ ಚಿಹ್ನೆ ಧರಿಸಿ ಮತದಾನ: ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು

Date:

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ (ಕಮಲದ ಬ್ಯಾಡ್ಜ್) ಧರಿಸಿಕೊಂಡು ಮತಗಟ್ಟೆಗೆ ತೆರಳಿ ಮತದಾನ ಮಾಡಿದ ದೂರಿನ ಮೇರೆಗೆ ಅವರ ವಿರುದ್ಧ ಔರಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಗವಂತ ಖೂಬಾ ಅವರು ಮಂಗಳವಾರ ಬೆಳಿಗ್ಗೆ ಔರಾದ ಪಟ್ಟಣದ ನಾಲಂದಾ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 84ರಲ್ಲಿ ತಮ್ಮ ಕುಟುಂಬ ಸಮೇತ ಮತದಾನ ಮಾಡಲು ಬಂದಿದ್ದರು. ಈ ವೇಳೆ ಅವರು ತಮ್ಮ ಅಂಗಿ ಮೇಲೆ ಬಿಜೆಪಿ ಪಕ್ಷದ ಬ್ಯಾಡ್ಜ್ ಧರಿಸಿದ್ದರು. ಹಾಗೂ ಮತದಾನ ಕೇಂದ್ರದ 100 ಮೀಟರ್ ಒಳಗಡೆ ಪಕ್ಷದ ಬ್ಯಾಡ್ಜ್ ಧರಿಸಿಯೇ ಪತ್ರಕರ್ತರ ಜತೆ ಮಾತನಾಡಿದ್ದು ಪ್ರಜಾ ಪ್ರತಿನಿಧಿ ಕಾಯ್ದೆ ನೇರ ಮತ್ತು ಸ್ಪಷ್ಟ ಉಲ್ಲಂಘನೆ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಹಾಯಕ ಚುನಾವಣಾಧಿಕಾರಿ ನೀಡಿದ ದೂರು ಆಧರಿಸಿ ಭಗವಂತ ಖೂಬಾ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...