ಭಾರತದ ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ ಮೋದಿ: ವಿ ಎಸ್‌ ಉಗ್ರಪ್ಪ ಕಿಡಿ

Date:

  • ‘ಅಮೆರಿಕಾದ ಅಧ್ಯಕ್ಷರಿಂದ ಕಿವಿಮಾತು ಹೇಳಿಸಿಕೊಂಡ ಪ್ರಧಾನಿ ಮೋದಿ’
  • ‘ಜೋ ಬೈಡನ್‌ ಮಾತು ಪ್ರಧಾನಿಗೆ ವಿಶ್ವಮಟ್ಟದಲ್ಲಿ ಕಪಾಳ ಮೋಕ್ಷವಲ್ಲವೇ?’

ಅಹಿಂಸಾ ಧರ್ಮ, ಪತ್ರಿಕಾ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವದ ಆಶಯಗಳಿಗೆ ಭಾರತ ವಿಶ್ವಗುರು. ಆದರೆ, ಪ್ರಸ್ತುತ ಸ್ವಯಂಘೋಷಿತ ವಿಶ್ವಗುರು ನರೇಂದ್ರ ಮೋದಿಯವರು ಭಾರತದ ಮಾನವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಳೆದು ಹಾಕಿದ್ದಾರೆ ಎಂದು ಮಾಜಿ ಸಂಸದ ವಿ ಎಸ್‌ ಉಗ್ರಪ್ಪ ಕಿಡಿ ಕಾರಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ತನ್ನನ್ನು ತಾನು ವೈಭವೀಕರಿಸಿಕೊಳ್ಳುವ ಪ್ರಧಾನಿ ಮೋದಿ ಅವರು ಅಮೆರಿಕಾದ ಅಧ್ಯಕ್ಷರಿಂದ ಕಿವಿಮಾತು ಹೇಳಿಸಿಕೊಳ್ಳುವ ದುಃಸ್ಥಿತಿ ಬಂದಿದೆ. ಯಾರೂ ಹೇಳದೆ ಇದ್ದರೂ ತಮ್ಮನ್ನು ತಾವೇ ವಿಶ್ವಗುರು ಎಂದು ಕರೆಸಿಕೊಳ್ಳುವ ಅವರಿಗೆ ಭಾರತದಲ್ಲಿ ಮಾನವ ಹಕ್ಕು, ಪತ್ರಿಕಾ ಸ್ವಾತಂತ್ರ್ಯ ಉಲ್ಲಂಘನೆಯಾಗುತ್ತಿದೆ ಎಂದು ತಿಳಿಯುತ್ತಿಲ್ಲವೇ. ಇವುಗಳಿಗೆ ಗೌರವ ಕೊಡಿ ಎಂದು ಅಮೆರಿಕಾದ ಅಧ್ಯಕ್ಷರು ಹೇಳಬೇಕಾ” ಎಂದು ಪ್ರಶ್ನಿಸಿದರು.

“ಜಿ20 ಶ್ರಂಗಸಭೆಯಲ್ಲಿ ಭಾಗವಹಿಸಿದ್ದ ಅಮೆರಿಕಾದ ಅಧ್ಯಕ್ಷ ಜೋ ಬೈಡನ್ ಅವರು ವಿಯೆಟ್ನಾಂ ದೇಶದಲ್ಲಿ ಮಾಧ್ಯಮದವರ ಮುಂದೆ ಮಾತನಾಡುತ್ತಾ “ಭಾರತದ ಪ್ರಧಾನಿ ಮೋದಿಯವರಿಗೆ ಕಿವಿಮಾತನ್ನು ಹೇಳಿದ್ದೇನೆ. ಮಾನವ ಹಕ್ಕುಗಳು ಮತ್ತು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೆಚ್ಚಿನ ಗೌರವ ನೀಡಬೇಕು ಎಂದು ಹೇಳಿದ್ದೇನೆ” ಎಂದಿದ್ದಾರೆ. ಇದರಿಂದ ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ, ಮಾನವ ಹಕ್ಕುಗಳ ಸ್ವಾತಂತ್ರ್ಯವಿಲ್ಲ ಎಂಬ ವಿಚಾರದ ಬಗ್ಗೆ ಇಡೀ ವಿಶ್ವಕ್ಕೆ ಸ್ವಷ್ಟವಾದ ಸಂದೇಶ ಹೋಗಿದೆ. ಇದು ಪ್ರಧಾನಿಗಳಿಗೆ ವಿಶ್ವಮಟ್ಟದಲ್ಲಿ ಕಪಾಳ ಮೋಕ್ಷವಲ್ಲವೇ? ಮಣಿಪುರದಲ್ಲಿ ನಡೆದ ಗಲಭೆ ವಿಚಾರವಾಗಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

ಜನರ ಕ್ಷಮೆ ಕೇಳಲಿ

“ನಿಮ್ಮ ಪ್ರವೃತ್ತಿಯಿಂದ ಭಾರತಕ್ಕೆ ಅಗೌರವ ತರುವ ಕೆಲಸ ಮಾಡುತ್ತಿದ್ದೀರಿ ಮೋದಿಯವರೇ. ಬಿಜೆಪಿಯವರು ದೇಶಕ್ಕೆ ಅಗೌರವ ತೋರಿಸುತ್ತಿದ್ದಾರೆ. ನಮ್ಮ ದೇಶದ ಪರಂಪರೆ, ಸಂಸ್ಕೃತಿ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತಾದರೂ ಬದ್ದತೆ ಇದ್ದರೆ ಬಿಜೆಪಿ ಮತ್ತು ಮೋದಿಯವರು ಈ ದೇಶದಲ್ಲಿ ನಡೆಯುತ್ತಿರುವ ಪತ್ರಿಕಾ ಸ್ವಾತಂತ್ರ್ಯಹರಣ ಮತ್ತು ಮಾನವ ಹಕ್ಕು ಉಲ್ಲಂಘನೆಗಳಿಗೆ ದೇಶದ ಜನರ ಬಳಿ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

“ಮಣಿಪುರದ ಘಟನೆಗಳ ಬಗ್ಗೆ ವಸ್ತುನಿಷ್ಠ ವರದಿ ಮಾಡುವ ಪತ್ರಕರ್ತರ ವಿರುದ್ದ ಪ್ರಕರಣ ದಾಖಲಾಗುತ್ತದೆ. ಈಗಲಾದರೂ ನಿಮ್ಮ ಸೋಗಲಾಡಿತನ ಬಿಡಿ. ನೈಜ ದೇಶಪ್ರೇಮವನ್ನು ಮೂಡಿಸಿಕೊಳ್ಳಿ. 2024 ರ ಲೋಕಸಭಾ ಚುನಾವಣೆ ಇನ್ನೂ 8 ತಿಂಗಳು ದೂರವಿದೆ. ಕರ್ನಾಟಕದಲ್ಲಿ ವಿರೋಧ ಪಕ್ಷಗಳು ಹತಾಶೆಯ ಹಂತಕ್ಕೆ ತಲುಪಿವೆ. ಚುನಾವಣೆ ಮುಗಿದು ಇನ್ನೂ ಕೇವಲ 4 ತಿಂಗಳು ಮಾತ್ರ ಆಗಿರುವುದು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವಿಲ್ಲ, ಗುಂಪುಗಾರಿಕೆ ಹೆಚ್ಚಾಗಿರುವ ಕಾರಣ ಬಿಜೆಪಿಯಲ್ಲಿ ಯಾರು ನಾಯಕರು ಎನ್ನುವ ಗೊಂದಲವಿದೆ. ವಿಧಾನ ಪರಿಷತ್ನಲ್ಲಿ ವಿರೋಧ ಪಕ್ಷದ ನಾಯಕನಿಲ್ಲ, ಮುಖ್ಯ ಸಚೇತಕರು ಇಲ್ಲ” ಎಂದು ಉಗ್ರಪ್ಪ ಟೀಕಿಸಿದ್ದಾರೆ.

ಕಾವೇರಿ ನೀರು ಹರಿಯಲು ಕೇಂದ್ರ ಕಾರಣ

“ಕಾವೇರಿ ನೀರು ಹರಿಯುತ್ತಾ ಇದ್ದರೆ ಅದಕ್ಕೆ ನೇರ ಕಾರಣ ಕೇಂದ್ರ ಸರ್ಕಾರ. ಈ ರಾಜ್ಯದಲ್ಲಿ ವಿರೋಧ ಪಕ್ಷ ಜೀವಂತವಾಗಿದ್ದಿದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ನೀರು ನಿಲ್ಲಸಬಹುದಿತ್ತು. ನಾವು 2008 ರಲ್ಲಿ ವಿರೋಧ ಪಕ್ಷದಲ್ಲಿ ಇದ್ದಾಗ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಬಂದಿತ್ತು. ಆಗ ಪ್ರಧಾನಿಗಳಾಗಿದ್ದ ಮನಮೋಹನ್ ಸಿಂಗ್ ಅವರ ಬಳಿ ಮಾತನಾಡಿ ವೈಮಾನಿಕ ಸಮೀಕ್ಷೆ ಮಾಡಿಸಿ, ಸ್ಥಳದಲ್ಲೇ 1200 ಕೋಟಿ ಹಣವನ್ನು ಬಿಡುಗಡೆ ಆಗುವಂತೆ ಮಾಡಿದ್ದೆವು. ಕರ್ನಾಟಕದ 25 ಜನ ಎಂಪಿಗಳು ಬಿಜೆಪಿಯವರು. ಇದುವರೆಗೂ ಒಂದೇ ಒಂದು ಮಾತನ್ನು ಕಾವೇರಿ ನೀರಿನ ವಿಚಾರವಾಗಿ ಮಾತನಾಡಿಲ್ಲ. ರಾಜ್ಯದ ಬಗ್ಗೆ ಬದ್ದತೆ ಇಲ್ಲ ಬಿಜೆಪಿಯವರಿಗೆ” ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿಗೆ ಸಿದ್ಧಾಂತವಿಲ್ಲ

“ಜನತಾ ಪಕ್ಷದಿಂದ ಬಿಜೆಪಿಯವರು ಹೊರಬರಲು ಕಾರಣ ದ್ವಿಸದಸ್ಯತ್ವ. ಅಂದರೆ ಅವರುಗಳು ಆರ್‌ಎಸ್‌ಎಸ್‌ ಹಾಗೂ ಜನತಾ ಪಕ್ಷ ಎರಡೂ ಕಡೆ ಸದಸ್ಯತ್ವ ಹೊಂದಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಯಿತು. ಅದಕ್ಕೆ ಪಕ್ಷ ತೊರೆದು ಬೇರೆ ಪಕ್ಷ ಮಾಡಿಕೊಂಡರು. ಈಗ ಜನತಾ ಪಕ್ಷಕ್ಕೆ ಬದ್ದತೆಯೇ ಇಲ್ಲ. ಹಿರಿಯರಾದ ದೇವೆಗೌಡರಿಗೆ ಬದ್ದತೆ ಇದೆ, ಕುಮಾರಸ್ವಾಮಿ ಅವರಿಗೆ ಯಾವುದೇ ಸಿದ್ದಾಂತವಿಲ್ಲ. ದೇವೇಗೌಡರನ್ನು ಹೈಜಾಕ್ ಮಾಡಿ ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಜೆಡಿಎಸ್ನಲ್ಲಿ “ಎಸ್” ತೆಗೆಯಬೇಕು” ಎಂದು ಕುಟುಕಿದರು.

“ಬಿಜೆಪಿ- ಜೆಡಿಎಸ್ ಪಕ್ಷಗಳಿಗೆ ಅಧಿಕಾರದ ದಾಹ ಬಿಟ್ಟರೆ ಇನ್ನೇನು ಇಲ್ಲ. ದೇವೆಗೌಡರು ಜೀವನದ ಉದ್ದಕ್ಕೂ ಬಿಜೆಪಿ ಸಿದ್ದಾಂತದ ವಿರುದ್ದ ಇದ್ದವರು ಈಗ ಇಳಿವಯಸ್ಸಿನಲ್ಲಿ ಇಂತಹ ಸ್ಥಿತಿಗೆ ಬಂದರಲ್ಲ ಎನ್ನುವ ನೋವಿದೆ. ಜೆಡಿಎಸ್ ನವರು ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ವಿರುದ್ದ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...